Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

WPL Final: ಟಾಸ್‌ ಗೆದ್ದ RCB ಬೌಲಿಂಗ್ ಆಯ್ಕೆ

ವಡೋದರಾ: ನಾಲ್ಕನೇ ಆವೃತ್ತಿಯ ಮಹಿಳಾ ಪ್ರೀಮಿಯರ್ ಲೀನ ಫೈನಲ್‌ನಲ್ಲಿ ಆರ್‌ಸಿಬಿ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಕಾದಾಟ ನಡೆಸಲಿವೆ. ಈ ಪಂದ್ಯದಲ್ಲಿ ಟಾಸ್‌ ಗೆದ್ದ ಸ್ಮೃತಿ ಪಡೆ ಮೊದಲು ಫೀಲ್ಡಿಂಗ್ ಮಾಡುವ ನಿರ್ಧಾರವನ್ನು ಮಾಡಿದೆ. ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡ ಎರಡನೇ ಬಾರಿಗೆ ಟ್ರೋಫಿ ಎತ್ತುವ ಕನಸು ಕಾಣುತ್ತಿದೆ.

ಮಹಿಳಾ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಡೆಲ್ಲಿ ನಾಲ್ಕನೇ ಬಾರಿಗೆ ಫೈನಲ್ ಆಡುತ್ತಿದೆ. ಈ ವೇಳೆ ಚೊಚ್ಚಲ ಪ್ರಶಸ್ತಿಯ ಕನಸಿನಲ್ಲಿದೆ. ಆರ್‌ಸಿಬಿ ಈಗಾಗಲೇ ಒಂದು ಬಾರಿ ಟ್ರೋಫಿಯನ್ನು ಗೆದ್ದಿದ್ದು ಎರಡನೇ ಪ್ರಶಸ್ತಿಯ ಹುಡುಕಾಟದಲ್ಲಿದೆ. ಈ ಮೂಲಕ ಮುಂಬೈ ಇಂಡಿಯನ್ಸ್ ತಂಡದ ಸಾಧನೆಯನ್ನು ಸರಿ ಗಟ್ಟುವನ ಇರಾದೆಯನ್ನು ಸ್ಮೃತಿ ಪಡೆ ಹಾಕಿಕೊಂಡಿದೆ.

RCB

ಈ ಟೂರ್ನಿಯಲ್ಲಿ ಟಾಸ್‌ ಗೆಲ್ಲುತ್ತಿದ್ದಂತೆ ಫೀಲ್ಡಿಂಗ್ ಮಾಡುವುದು ಟ್ರೆಂಡ್ ಆದಂತೆ ಆಗಿದೆ. ನಾವು ಸಹ ಅದೇ ಟ್ರೆಂಡ್ ಫಾಲೋ ಮಾಡ್ತಾ ಇದ್ದೇವೆ. ಫೈನಲ್‌ ಪಂದ್ಯಕ್ಕಾಗಿ ತಂಡದಲ್ಲಿ ಯಾವುದೇ ಬದಲಾವಣೆ ಇಲ್ಲ.ನಾವು ಇಂದು ಮೈದಾನದಲ್ಲಿ ಉತ್ತಮ ಪ್ರದರ್ಶನ ನೀಡಬೇಕಿದೆ ಎಂದು ಆರ್‌ಸಿಬಿ ತಂಡದ ನಾಯಕಿ ಸ್ಮೃತಿ ಮಂಧಾನ ತಿಳಿಸಿದ್ದಾರೆ. ಆರ್‌ಸಿಬಿ ತಂಡದ ನಾಯಕಿ ಸ್ಮೃತಿ ಮಂಧಾನ ಹಾಗೂ ಗ್ರೇಸ್‌ ಹ್ಯಾರಿಸ್ ಮೇಲೆ ಎಲ್ಲರ ಚಿತ್ತ ನೆಟ್ಟಿದೆ.

ಮಹತ್ವದ ಪಂದ್ಯದಲ್ಲಿ ಟಾಸ್ ಸೋತಿದ್ದು ಒಳ್ಳೆಯದಾಯಿತು. ನಾವು ಸಹ ಟಾಸ್‌ ಜಯಿಸಿದ್ದರೆ ಫೀಲ್ಡಿಂಗ್ ಮಾಡುತ್ತಿದ್ದೇವು. ಪ್ರಶಸ್ತಿ ಸುತ್ತಿನ ಕಾದಾಟದಲ್ಲಿ ತಂಡದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕಿ ಜೆಮಿಮಾ ರೋಡ್ರಿಗಸ್ ತಿಳಿಸಿದ್ದಾರೆ.

ಆರ್‌ಸಿಬಿ ಪ್ಲೇಯಿಂಗ್ ಇಲೆವೆನ್: ಸ್ಮೃತಿ ಮಂಧಾನ (ನಾಯಕಿ), ಗ್ರೇಸ್ ಹ್ಯಾರಿಸ್, ಜಾರ್ಜಿಯಾ ವೋಲ್, ರಿಚಾ ಘೋಷ್ (ವಿಕೆಟ್ ಕೀಪರ್), ರಾಧಾ ಯಾದವ್, ನಾಡಿನ್ ಡಿ ಕ್ಲರ್ಕ್, ಪೂಜಾ ವಸ್ತ್ರಾಕರ್, ಶ್ರೇಯಾಂಕ ಪಾಟೀಲ್, ಸಾಯಲಿ ಸತ್ಘರೆ, ಅರುಂಧತಿ ರೆಡ್ಡಿ, ಲಾರೆನ್ ಬೆಲ್.

ಡೆಲ್ಲಿ ಕ್ಯಾಪಿಟಲ್ಸ್ ಪ್ಲೇಯಿಂಗ್ ಇಲೆವೆನ್: ಶಫಾಲಿ ವರ್ಮಾ, ಲಿಜೆಲ್ ಲೀ (ವಿಕೆಟ್ ಕೀಪರ್), ಲಾರಾ ವೊಲ್ವಾರ್ಡ್, ಜೆಮಿಮಾ ರೋಡ್ರಿಗಸ್ (ನಾಯಕಿ), ಮರಿಜಾನೆ ಕಾಪ್, ಚಿನೆಲ್ಲೆ ಹೆನ್ರಿ, ನಿಕಿ ಪ್ರಸಾದ್, ಸ್ನೇಹ ರಾಣಾ, ಮಿನ್ನು ಮಣಿ, ನಂದಿನಿ ಶರ್ಮಾ, ಎನ್ ಶ್ರೀ ಚರಣಿ.

Story first published: Thursday, February 5, 2026, 19:08 [IST]
Other articles published on Feb 5, 2026
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+