RCB vs GT IPL 2024: ಆರ್‌ಸಿಬಿ ತಂಡದ ಮಾರಕ ಬೌಲಿಂಗ್‌ಗೆ ತತ್ತರಿಸಿದ ಗುಜರಾತ್ ಟೈಟನ್ಸ್
ಶನಿವಾರ, ಮೇ 4ರಂದು ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 52ನೇ ರೋಚಕ ಪಂದ್ಯದಲ್ಲಿ ಆತಿಥೇಯ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ಬಿಗಿ ಬೌಲಿಂಗ್ ದಾಳಿಗೆ ನಲುಗಿದ ಗುಜರಾತ್ ಟೈಟನ್ಸ್ (ಜಿಟಿ) ತಂಡ ಸಾಧಾರಣ ಮೊತ್ತ ಕಲೆಹಾಕಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಟೈಟನ್ಸ್ ತಂಡ ವಿಜಯ್‌ಕುಮಾರ್ ವೈಶಾಕ್ ಹ್ಯಾಟ್ರಿಕ್ ಸೇರಿದಂತೆ ಆರ್‌ಸಿಬಿ ತಂಡದ ಬೌಲಿಂಗ್ ತತ್ತರಿಸಿ, ಯಾವುದೇ ಅರ್ಧಶತಕವಲ್ಲದೆ 19.3 ಓವರ್‌ಗಳಲ್ಲಿ 147 ರನ್‌ಗಳಿಗೆ ಆಲೌಟ್ ಆಗಿದ್ದು, ಆರ್‌ಸಿಬಿ ತಂಡಕ್ಕೆ 148 ರನ್‌ಗಳ ಗುರಿ ನೀಡಿದೆ.

ಗುಜರಾತ್ ಟೈಟನ್ಸ್ ತಂಡದ ಬ್ಯಾಟಿಂಗ್ ಆರಂಭಿಸಿದ ಶುಭ್ಮನ್ ಗಿಲ್ ಮತ್ತು ವೃದ್ಧಿಮಾನ್ ಸಹಾ ಉತ್ತಮ ಆರಂಭ ನೀಡಲಿಲ್ಲ. ಎರಡನೇ ಓವರ್‌ನಲ್ಲಿ ತಂಡದ ಮೊತ್ತ 1 ರನ್ ಆಗಿದ್ದಾಗ ವೃದ್ಧಿಮಾನ್ ಸಹಾ 1 ರನ್‌ಗೆ ಔಟಾದರೆ, ನಾಲ್ಕನೇ ಓವರ್‌ನಲ್ಲಿ ಶುಭ್ಮನ್ ಗಿಲ್ 2 ರನ್‌ಗೆ ವಿಕೆಟ್ ಒಪ್ಪಿಸಿದರು.
ನಂತರ ಬಂದ ಸಾಯಿ ಸುದರ್ಶನ್ 6 ರನ್, ಶಾರೂಖ್ ಖಾನ್ 37 ರನ್, ಡೇವಿಡ್ ಮಿಲ್ಲರ್ 30 ರನ್, ರಾಹುಲ್ ತೆವಾಟಿಯಾ 35 ರನ್, ರಶೀದ್ ಖಾನ್ 18 ರನ್, ವಿಜಯ್ ಶಂಕರ್ 10 ರನ್ ಗಳಿಸಿ ತಂಡದ ಮೊತ್ತ 140ರ ಗಡಿ ದಾಟಿಸಿದರು.
ಬೌಲಿಂಗ್‌ನಲ್ಲಿ ಆರ್‌ಸಿಬಿ ತಂಡದ ಪರ ಯಶ್ ದಯಾಳ್ 4 ಓವರ್‌ಗಳಲ್ಲಿ 21 ರನ್ ನೀಡಿ 2 ವಿಕೆಟ್ ಪಡೆದರೆ, ಮೊಹಮ್ಮದ್ ಸಿರಾಜ್ 4 ಓವರ್‌ಗಳಲ್ಲಿ 29 ರನ್ ನೀಡಿ 2 ವಿಕೆಟ್ ಕಬಳಿಸಿದರು. ವಿಜಯ್‌ಕುಮಾರ್ ವೈಶಾಕ್ 3.3 ಓವರ್‌ಗಳಲ್ಲಿ 23 ರನ್ ನೀಡಿ 2 ವಿಕೆಟ್ ಕಬಳಿಸಿದರೆ, ಕ್ಯಾಮೆರಾನ್ ಗ್ರೀನ್ ಮತ್ತು ಕರ್ಣ್ ಶರ್ಮಾ ತಲಾ ಒಂದೊಂದು ವಿಕೆಟ್ ಪಡೆದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications