RCB vs GT IPL Final: ಪ್ರಶಸ್ತಿಗಾಗಿ ಆರ್‌ಸಿಬಿ, ಜಿಟಿ ಫೈಟ್: ಎರಡನೇ ಪ್ರಶಸ್ತಿ ಕನಸಿನಲ್ಲಿ ಬೆಂಗಳೂರು
ಅಹಮದಾಬಾದ್: 19ನೇ ಆವೃತ್ತಿ ಇಂಡಿಯನ್ ಪ್ರೀಮಿಯರ್ ಲೀಗ್ ( ಐಪಿಎಲ್) ಚಾಂಪಿಯನ್ ಪಟ್ಟ ಅಲಂಕರಿಸುವುದು ಯಾರು? ಎಂಬ ಪ್ರಶ್ನೆಗೆ ಭಾನುವಾರ ಉತ್ತರ ಸಿಗಲಿದೆ. ಈ ಲೀಗ್ ಹಂತದ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಕಾದಾಟ ನಡೆಸಲಿವೆ. ಎರಡೂ ತಂಡಗಳಲ್ಲಿ ಸ್ಟಾರ್ ಆಟಗಾರರ ದಂಡೇ ಇದ್ದು ಪ್ರಶಸ್ತಿ ಸುತ್ತಿನ ಕಾದಾಟ ರೋಚಕತೆ ಹೆಚ್ಚಿಸಿದೆ.
ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ 92 ರನ್‌ಗಳಿಂದ ಗುಜರಾತ್ ಟೈಟಾನ್ಸ್ ತಂಡವನ್ನು ಮಣಿಸಿ ಫೈನಲ್‌ಗೆ ಅರ್ಹತೆ ಪಡೆದಿತ್ತು. ಇನ್ನು ಮೊದಲ ಕ್ವಾಲಿಫೈಯರ್ ನಲ್ಲಿ ಆಘಾತ ಅನುಭಿಸಿದ್ದ ಗುಜರಾತ್, ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ಸೊಗಸಾದ ಪ್ರದರ್ಶನ ನೀಡಿ ಅಬ್ಬರಿಸಿದೆ. ಈ ಮೂಲಕ ಗುಜರಾತ್ ಮೂರನೇ ಬಾರಿಗೆ ಫೈನಲ್‌ಗೆ ಪ್ರವೇಶಿಸಿದೆ.

ಅಂಕಿ ಅಂಶಗಳ ಲೆಕ್ಕಾಚಾರದಲ್ಲಿ ಎರಡೂ ತಂಡಗಳು ಬಲಾಢ್ಯವಾಗಿವೆ. ಆದರೆ ಈ ಬಾರಿ ಲೀಗ್ ಹಂತದಲ್ಲಿ ಆರ್‌ಸಿಬಿ ನೀಡಿದ ಸಂಘಟಿತ ಆಟ ಎರಡನೇ ಬಾರಿಗೆ ತಂಡ ಪ್ರಶಸ್ತಿಯನ್ನು ಗೆಲ್ಲುವ ಕನಸನ್ನು ಚಿಗುರಿಸಿದೆ.
ಸಂಘಟಿತ ಆಟವೇ ಬಲ
ಆರ್‌ಸಿಬಿ ತಂಡ ಈ ಬಾರಿಯ ಐಪಿಎಲ್‌ನಲ್ಲಿ ಸಂಘಟಿತ ಆಟದ ಮೇಲೆ ವಿಶ್ವಾಸವನ್ನು ಇಟ್ಟಿದೆ. ಆರಂಭಿಕರಾಗಿ ವಿರಾಟ್ ಕೊಹ್ಲಿ ಕಣಕ್ಕೆ ಇಳಿಯಲಿದ್ದು, ಇವರು ಬಿಗ್ ಇನಿಂಗ್ಸ್ ಕಟ್ಟುವ ಆಟಗಾರ. ಅಲ್ಲದೆ ಇವರು ಬಿಗ್ ಮ್ಯಾಚ್‌ಗಳಲ್ಲಿ ಸ್ಥಿರ ಪ್ರದರ್ಶನ ನೀಡುವ ವಿಶ್ವಾಸ ಹೊಂದಿದ್ದಾರೆ. ಇನ್ನು ಇವರೊಂದಿಗೆ ಇನಿಂಗ್ಸ್ ಆರಂಭಿಸುವುದು ಯಾರು? ಎಂಬ ಪ್ರಶ್ನೆ ಉದ್ಭವಿಸಿದೆ. ಈ ವೇಳೆ ವೆಂಕಟೇಶ್ ಅಯ್ಯರ್, ಫಿಲ್ ಸಾಲ್ಟ್ ಈ ಸ್ಥಾನದಲ್ಲಿ ಕಣಕ್ಕೆ ಇಳಿಯಬಹುದು.
ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿದ ರಜತ್ ಪಾಟಿದಾರ್ ಅವರ ಮೇಲೆ ವಿಶ್ವಾಸ ಹೆಚ್ಚಿದೆ. ಆಲ್‌ರೌಂಡರ್ ಕೃನಾಲ್ ಪಾಂಡ್ಯ ಪರಿಸ್ಥಿತಿಗೆ ತಕ್ಕಂತೆ ಬ್ಯಾಟ್ ಮಾಡುವ ಕಲೆಯನ್ನು ಕರಗತ ಮಾಡಿಕೊಂಡಿದ್ದಾರೆ. ಉಳಿದ ಆಟಗಾರರು ಸಹ ಒತ್ತಡವನ್ನು ಮೆಟ್ಟಿನಿಂತು ಬ್ಯಾಟ್ ಮಾಡುವ ಅನಿವಾರ್ಯತೆ ಇದೆ.
ಭುವಿ ಆಕರ್ಷಣೆ
ಆರ್‌ಸಿಬಿ ತಂಡದ ಸ್ಟಾರ್ ವೇಗದ ಬೌಲರ್ ಭುವನೇಶ್ವರ್ ಕುಮಾರ್ ಸ್ವಿಂಗ್ ಹಾಗೂ ಸೀಮ್ ಬೌಲಿಂಗ್ ಮೂಲಕ ಎದುರಾಳಿಗಳನ್ನು ಕಾಡಬಲ್ಲರು. ಇನ್ನು ಜೋಶ್ ಹ್ಯಾಜಲ್‌ವುಡ್, ಜಾಕೋಬ್ ಡಫಿ, ರಸೀಕ್ ಸಲಾಂ ದರ್ ಬಿಗುವಿನ ದಾಳಿ ನಡೆಸಿ ಎದುರಾಳಿಗಳನ್ನು ಕಾಡಬಲ್ಲರು. ಇನ್ನು ಪಿಚ್ ಪರಿಸ್ಥಿತಿಗೆ ಅನುಗುಣವಾಗಿ ಸ್ಪಿನ್ ಬೌಲರ್ ಆಡಿಸಬೇಕೋ ಬೇಡವೋ ಎಂಬ ಬಗ್ಗೆ ನಾಯಕ ತೀರ್ಮಾನ ತೆಗೆದುಕೊಳ್ಳಲಿದ್ದಾರೆ.
ತವರಿನ ಬೆಂಬಲ
ಗುಜರಾತ್ ಟೈಟಾನ್ಸ್ ತಂಡ ತವರಿನ ಅಭಿಮಾನಿಗಳ ಸಮ್ಮುಖದಲ್ಲಿ ಐಪಿಎಲ್ ಫೈನಲ್ ಆಡಲಿದೆ. ತಂಡದಲ್ಲಿ ಸ್ಟಾರ್ ಆಟಗಾರರಾದ ಶುಭಮನ್ ಗಿಲ್, ಸಾಯಿ ಸುದರ್ಶನ್, ಜೋಸ್ ಬಟ್ಲರ್ ಅಮೋಘ ಲಯದಲ್ಲಿದ್ದು, ತಂಡಕ್ಕೆ ಎರಡನೇ ಬಾರಿ ಟ್ರೋಫಿ ತೊಡಿಸುವ ವಿಶ್ವಾಸದಲ್ಲಿದ್ದಾರೆ. ಇನ್ನು ವೇಗದ ಬೌಲಿಂಗ್‌ನಲ್ಲಿ ಸ್ಟಾರ್ ಬೌಲರ್‌ಗಳ ದಂಡೇ ಇದೆ. ಕಗಿಸೋ ರಬಾಡ, ಪ್ರಸಿದ್ಧ್ ಕೃಷ್ಣಾ, ಮೊಹಮ್ಮದ್ ಸಿರಾಜ್ ತಮ್ಮ ಶಿಸ್ತು ಬದ್ಧ ದಾಳಿಯಿಂದ ಎದುರಾಳಿಗಳನ್ನು ಕಾಡಬಲ್ಲರು. ಇನ್ನು ರಶೀದ್ ಖಾನ್ ಸಹ ಸ್ಪಿನ್ ಮೋಡಿ ತಂಡಕ್ಕೆ ಆಧಾರಗಬೇಕಿದೆ. ಅಂದಾಗ ಮಾತ್ರ ದೊಡ್ಡ ಪಂದ್ಯದಲ್ಲಿ ಗೆಲುವಿನ ಕನಸು ನನಸಾಗುತ್ತದೆ.
ಭಾನುವಾರ ಐಪಿಎಲ್ ಫೈನಲ್‌ನಲ್ಲಿ ಯಾವುದೇ ತಂಡ ಗೆದ್ದರೂ ಇತಿಹಾಸ ನಿರ್ಮಾಣವಾಗಲಿದೆ. ಗುಜರಾತ್ ಟೈಟಾನ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಎರಡನೇ ಟ್ರೋಫಿ ಗೆಲ್ಲುವ ಕನಸಿನಲ್ಲಿವೆ. ಉಭಯ ತಂಡಗಳು ಈಗಾಗಲೇ ತಲಾ 1 ಬಾರಿ ಪ್ರಶಸ್ತಿ ಗೆದ್ದಿವೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications