Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

RCB vs GT: ವಿರಾಟ್, ದೇವದತ್ ಆರ್ಭಟ-ಆರ್‌ಸಿಬಿಗೆ ಭರ್ಜರಿ ಜಯ

ಬೆಂಗಳೂರು: ಚೇಸಿಂಗ್ ಸ್ಟಾರ್ ಖ್ಯಾತಿಯ ವಿರಾಟ್ ಕೊಹ್ಲಿ ಹಾಗೂ ಕನ್ನಡಿಗ ದೇವದತ್ ಪಡಿಕ್ಕಲ್ ಅವರ ಭರ್ಜರಿ ಆಟದ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) 19ನೇ ಆವೃತ್ತಿ ಐಪಿಎಲ್‌ನ 34ನೇ ಪಂದ್ಯದಲ್ಲಿ ಗುಜರಾತ್‌ ಟೈಟಾನ್ಸ್ ತಂಡವನ್ನು 5 ವಿಕೆಟ್‌ಗಳಿಂದ ಮಣಿಸಿತು. ಈ ಮೂಲಕ ಆರ್‌ಸಿಬಿ ತವರಿನಲ್ಲಿ ಆಡಿದ ಲೀಗ್‌ ಹಂತದ ಕೊನೆಯ ಪಂದ್ಯದಲ್ಲಿ ಅಬ್ಬರಿಸಿತು. ಈ ಜಯದ ಮೂಲಕ ಆರ್‌ಸಿಬಿ ಆಡಿದ 7 ಪಂದ್ಯಗಳಲ್ಲಿ 5ನೇ ಜಯ ಸಾಧಿಸಿ 10 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಬಡ್ತಿ ಪಡೆದಿದೆ.

206 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಬೆಂಗಳೂರು ತಂಡದ ಆರಂಭ ಸಾಧಾರಣವಾಗಿತ್ತು. ಆರಂಭಿಕ ಫಿಲ್ ಸಾಲ್ಟ್‌ ಗಾಯಕ್ಕೆ ತುತ್ತಾಗಿದ್ದರಿಂದ ಇನಿಂಗ್ಸ್ ಆರಂಭಿಸುವ ಜವಾಬ್ದಾರಿಯನ್ನು ಜಾಕೋಬ್‌ ಬೆಥೆಲ್‌ (14) ಹೊತ್ತುಕೊಂಡರು. ಇವರು ವಿರಾಟ್‌ ಕೊಹ್ಲಿ ಅವರೊಂದಿಗೆ ಮೊದಲ ವಿಕೆಟ್‌ಗೆ 26 ರನ್‌ ಸೇರಿಸಿದರು.

RCB vs GT

ಎರಡನೇ ವಿಕೆಟ್‌ಗೆ ಆರಂಭಿಕ ವಿರಾಟ್ ಕೊಹ್ಲಿ ಅವರನ್ನು ಸೇರಿಕೊಂಡ ಕನ್ನಡಿಗ ದೇವದತ್ ಪಡಿಕ್ಕಲ್‌ ಅಬ್ಬರಿಸಿದರು. ಜೋಡಿ ಒತ್ತಡವನ್ನು ಮೆಟ್ಟಿನಿಂತು ಬ್ಯಾಟ್ ಮಾಡಿದರು. ಈ ಜೋಡಿಯ ಆಟಕ್ಕೆ ಬ್ರೇಕ್ ಹಾಕುವಲ್ಲಿ ಗುಜರಾತ್ ಟೈಟಾನ್ಸ್ ತಂಡದ ಬೌಲರ್‌ಗಳು ವಿಫಲರಾದರು. ಈ ಜೋಡಿ ಎರಡನೇ ವಿಕೆಟ್‌ಗೆ 59 ಎಸೆತಗಳಲ್ಲಿ 115 ರನ್‌ ಸೇರಿಸಿತು. ಈ ವೇಳೆ ಬಿರುಸಿನ ಬ್ಯಾಟಿಂಗ್ ನಡೆಸುತ್ತಿದ್ದ ದೇವದತ್ ಪಡಿಕ್ಕಲ್ ರಶೀದ್ ಖಾನ್‌ಗೆ ವಿಕೆಟ್‌ ಒಪ್ಪಿಸಿದರು. ಇವರು 27 ಎಸೆತಗಳಲ್ಲಿ 2 ಬೌಂಡರಿ, 6 ಸಿಕ್ಸರ್ ಸಹಾಯದಿಂದ 55 ರನ್‌ ಸಿಡಿಸಿದರು.

ವಿರಾಟ್ ಅಬ್ಬರ

ಸ್ಟಾರ್ ಆಟಗಾರ ವಿರಾಟ್‌ ಕೊಹ್ಲಿ ಅಬ್ಬರಿಸಿದರು. ಆರಂಭದಲ್ಲಿ ಸಿಕ್ಕ ಜೀವದಾನದ ಲಾಭ ಪಡೆದ ವಿರಾಟ್‌ ತಂಡದ ಗೆಲುವಿನಲ್ಲಿ ಮಿಂಚಿದರು. ವಿರಾಟ್ 44 ಎಸೆತಗಳಲ್ಲಿ 8 ಬೌಂಡರಿ, 4 ಸಿಕ್ಸರ್ ನೆರವಿನಿಂದ 81 ರನ್ ಬಾರಿಸಿ ವೇಗಿ ಜೇಸನ್ ಹೋಲ್ಡರ್‌ಗೆ ವಿಕೆಟ್‌ ಒಪ್ಪಿಸಿದರು.

ನಾಯಕ ರಜತ್ ಪಾಟಿದಾರ್ (8), ವಿಕೆಟ್ ಕೀಪರ್ ಬ್ಯಾಟರ್ ಜಿತೇಶ್ ಶರ್ಮಾ (10) ರನ್ ಕಲೆ ಹಾಕುವಲ್ಲಿ ವಿಫಲರಾದರು. ಆಲ್‌ರೌಂಡರ್ ಕೃನಾಲ್ ಪಾಂಡ್ಯ (ಅಜೇಯ 23) ತಂಡಕ್ಕೆ ಗೆಲುವಿನ ಮಾಲೆ ತೊಡಿಸಿದರು. ಆರ್‌ಸಿಬಿ ಅಂತಿಮವಾಗಿ 18.5 ಓವರ್‌ಗಳಲ್ಲಿ 5 ವಿಕೆಟ್‌ಗೆ 206 ರನ್‌ ಸೇರಿಸಿತು.

ಸಾಯಿ ಸುದರ್ಶನ್ ಶತಕ

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್‌ಗೆ ಸಾಯಿ ಸುದರ್ಶನ್ ಮತ್ತು ಶುಭಮನ್ ಗಿಲ್ (32 ರನ್) ಮೊದಲ ವಿಕೆಟ್‌ಗೆ 128 ರನ್‌ಗಳ ಭರ್ಜರಿ ಆರಂಭ ನೀಡಿದರು. ಈ ಜೋಡಿ ಪವರ್‌ ಪ್ಲೇನಲ್ಲಿ ಪವರ್ ಫುಲ್‌ ಆರಂಭವನ್ನು ನೀಡಿತು. ಸ್ಫೋಟಕ ಬ್ಯಾಟಿಂಗ್ ನಡೆಸಿದ ಸಾಯಿ ಸುದರ್ಶನ್ 58 ಎಸೆತಗಳಲ್ಲಿ ಶತಕ (11 ಬೌಂಡರಿ, 5 ಸಿಕ್ಸರ್) ಸಿಡಿಸಿ ಮಿಂಚಿದರು. ಇವರ ಆಟಕ್ಕೆ ವೇಗಿ ಜೋಶ್‌ ಹ್ಯಾಜಲ್‌ವುಡ್‌ ಬ್ರೇಕ್ ಹಾಕಿದರು.

RCB vs GT

ಮಧ್ಯಮ ಕ್ರಮಾಂಕದಲ್ಲಿ ಜೋಸ್ ಬಟ್ಲರ್ 16 ರನ್ ಗಳಿಸಿ ಭುವನೇಶ್ವರ್ ಕುಮಾರ್‌ಗೆ ವಿಕೆಟ್ ಒಪ್ಪಿಸಿದರು. ಡೆತ್ ಓವರ್‌ಗಳಲ್ಲಿ ಆರ್‌ಸಿಬಿ ಬೌಲರ್‌ಗಳಾದ ಹ್ಯಾಜಲ್‌ವುಡ್, ಭುವಿ ಮತ್ತು ಸುಯಶ್ ಶರ್ಮಾ ಬಿಗುವಿನ ದಾಳಿ ಸಂಘಟಿಸಿ ರನ್ ವೇಗಕ್ಕೆ ಬ್ರೇಕ್ ಹಾಕಿದರು. ಆದರೆ, ಕೊನೆಯ ಓವರ್‌ನಲ್ಲಿ ರಸಿಕ್ ಸಲಾಮ್ ಗಾಯಗೊಂಡು ಹೊರನಡೆದ ಕಾರಣ ಕೃನಾಲ್ ಪಾಂಡ್ಯ 18 ರನ್ ಬಿಟ್ಟುಕೊಟ್ಟರು. ಪರಿಣಾಮ ಗುಜರಾತ್ 3 ವಿಕೆಟ್ ನಷ್ಟಕ್ಕೆ 205 ರನ್ ಗಳಿಸಿತು. ಆರ್‌ಸಿಬಿ ಪರ ಭುವಿ, ಹ್ಯಾಜಲ್‌ವುಡ್ ಹಾಗೂ ಸುಯಶ್ ಶರ್ಮಾ ತಲಾ ಒಂದು ವಿಕೆಟ್ ಪಡೆದರು.

Story first published: Friday, April 24, 2026, 23:20 [IST]
Other articles published on Apr 24, 2026
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+