
ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟನ್ಸ್ ತಂಡಗಳು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಿದ್ದು ಜಿದ್ದಾಜಿದ್ದಿನ ಪ್ರದರ್ಶನ ನೀಡಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಗುಜರಾತ್ ಟೈಟನ್ಸ್ ತಂಡ ಆರಂಭದಲ್ಲಿ ಹಿನ್ನಡೆ ಅನುಭವಿಸುವಂತೆ ಮಾಡುವಲ್ಲಿ ಆರ್‌ಸಿಬಿ ಬೌಲರ್‌ಗಳು ಯಶಸ್ವಿಯಾಗಿದ್ದರು. ಈ ಸಂದರ್ಭದಲ್ಲಿ ಅಗ್ರ ಕ್ರಮಾಂಕದ ಆಟಗಾರ ಮ್ಯಾಥ್ಯೂ ವೇಡ್ ವಿಕೆಟ್ ಕಳೆದುಕೊಂಡ ಬಳಿಕ ಡ್ರೆಸ್ಸಿಂಗ್ ರೂಮ್‌ನಲ್ಲಿ ತೋರಿದ ವರ್ತನೆಗೆ ಕ್ರಿಕೆಟ್ ಪ್ರೇಮಿಗಳು ಬೆಚ್ಚಿ ಬಿದ್ದಿದ್ದಾರೆ.
ಈ ಬಾರಿಯ ಆವೃತ್ತಿಯಲ್ಲಿ ಉತ್ತಮ ಪ್ರದರ್ಶನ ನೀಡಿ ಮಿಂಚು ಹರಿಸಿರುವ ಶುಬ್ಮನ್ ಗಿಲ್ ಆರ್‌ಸಿಬಿ ವಿರುದ್ಧದ ಈ ಪಂದ್ಯದಲ್ಲಿ ನಾಲ್ಕು ಎಸೆತಗಳನ್ನು ಎದುರಿಸಿ ಕೇವಲ ಒಂದು ರನ್ ಮಾತ್ರವೇ ಗಳಿಸಿ ವಿಕೆಟ್ ಕಳೆದುಕೊಂಡಿದ್ದರು. ಈ ಹಂತದಲ್ಲಿ ಕ್ರೀಸ್‌ಗಿಳಿದ ಮ್ಯಾಥ್ಯೂ ವೇಡ್ ಮೇಲೆ ಹೆಚ್ಚಿನ ನಿರೀಕ್ಷೆಯಿತ್ತು. ಆದರೆ 16 ರನ್‌ಗಳಿಸಿದ ಮ್ಯಾಥ್ಯೂ ವೇಡ್ ಬಳಿಕ ಆರ್‌ಸಿಬಿ ಸ್ಪಿನ್ನರ್ ಗ್ಲೆನ್ ಮ್ಯಾಕ್ಸ್‌ವೆಲ್ ಬೌಲಿಂಗ್‌ನಲ್ಲಿ ಎಲ್‌ಬಿಡಬ್ಲ್ಯು ಬಲೆಗೆ ಬಿದ್ದರು. ಈ ಮೂಲಕ ನಿರಾಶರಾಗಿ ಫೆವಿಲಿಯನ್‌ಗೆ ತೆರಳಿದರು.
ಆದರೆ ಡ್ರೆಸ್ಸಿಂಗ್‌ರೂಮ್‌ಗೆ ತಲುಪುತ್ತಿದ್ದಂತೆಯೇ ಮ್ಯೂಥ್ಯೂ ವೇಡ್ ಅಸಹನೆಯ ಕಟ್ಟ ಒಡೆದಿತ್ತು. ಕೈಯ್ಯಲ್ಲಿದ್ದ ಹೆಲ್ಮೆಟ್‌ಅನ್ನು ಜೋರಾಗಿ ಎಸೆದ ವೇಡ್ ಬ್ಯಾಟ್‌ನಿಂದ ಜೋರಾಗಿ ಡ್ರೆಸ್ಸಿಂಗ್ ರೂ,್‌ನಲ್ಲಿ ಸಿಕ್ಕ ಸಿಕ್ಕ ವಸ್ತುಗಳ ಮೇಲೆ ಬಾರಿಸಲು ಆರಂಭಿಸಿದ್ದರು. ಈ ದೃಶ್ಯಗಳು ಕ್ಯಾಮರಾದಲ್ಲಿ ಸೆರೆಯಾಗಿದ್ದು ನೇರಪ್ರಸಾರದ ಸಂದರ್ಭದಲ್ಲಿ ಬಿತ್ತರವಾಗಿದೆ. ಮ್ಯಾಥ್ಯೂ ವೇಡ್ ಅವರ ಈ ವರ್ತನೆಗೆ ಕ್ರಿಕೆಟ್ ಪ್ರೇಮಿಗಳು ಅಚ್ಚರಿ ವ್ಯಕ್ತಪಡಿಸಿದ್ದಾರೆ.
ಪ್ಲೇಯಿಂಗ್ XI:
ಆರ್‌ಸಿಬಿ: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್‌ವೆಲ್, ಮಹಿಪಾಲ್ ಲೊಮ್ರೋರ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಶಹಬಾಜ್ ಅಹ್ಮದ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಸಿದ್ದಾರ್ಥ್ ಕೌಲ್, ಜೋಶ್ ಹ್ಯಾಜಲ್‌ವುಡ್
ಬೆಂಚ್: ಆಕಾಶ್ ದೀಪ್, ಅನುಜ್ ರಾವತ್, ಫಿನ್ ಅಲೆನ್, ಸುಯಶ್ ಪ್ರಭುದೇಸಾಯಿ, ಶೆರ್ಫೇನ್ ರುದರ್ಫೋರ್ಡ್, ಅನೀಶ್ವರ್ ಗೌತಮ್, ಚಾಮ ವಿ ಮಿಲಿಂದ್, ಜೇಸನ್ ಬೆಹ್ರೆನ್ಡಾರ್ಫ್, ಡೇವಿಡ್ ವಿಲ್ಲಿ, ಕರ್ಣ್ ಶರ್ಮಾ, ಮೊಹಮ್ಮದ್ ಸಿರಾಜ್
ಜಿಟಿ: ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಶುಭಮನ್ ಗಿಲ್, ಮ್ಯಾಥ್ಯೂ ವೇಡ್, ಹಾರ್ದಿಕ್ ಪಾಂಡ್ಯ (ನಾಯಕ), ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ರವಿಶ್ರೀನಿವಾಸನ್ ಸಾಯಿ ಕಿಶೋರ್, ಲಾಕಿ ಫರ್ಗುಸನ್, ಯಶ್ ದಯಾಳ್, ಮೊಹಮ್ಮದ್ ಶಮಿ
ಬೆಂಚ್: ಪ್ರದೀಪ್ ಸಾಂಗ್ವಾನ್, ವರುಣ್ ಆರೋನ್, ಜಯಂತ್ ಯಾದವ್, ವಿಜಯ್ ಶಂಕರ್, ಗುರುಕೀರತ್ ಸಿಂಗ್ ಮಾನ್, ಅಭಿನವ್ ಮನೋಹರ್, ಸಾಯಿ ಸುದರ್ಶನ್, ದರ್ಶನ್ ನಲ್ಕಂಡೆ, ರಹಮಾನುಲ್ಲಾ ಗುರ್ಬಾಜ್, ಡೊಮಿನಿಕ್ ಡ್ರೇಕ್ಸ್, ನೂರ್ ಅಹ್ಮದ್, ಅಲ್ಜಾರಿ ಜೋಸೆಫ್