RCB vs GT: ಆರ್‌ಸಿಬಿ ಪ್ಲೇಆಫ್ ಕನಸು ಭಗ್ನಗೊಳಿಸಲು ಕಾಯುತ್ತಿದ್ದಾರೆ ಗುಜರಾತ್ ಟೈಟನ್ಸ್‌ನ ಈ 4 ಆಟಗಾರರು!
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈ ಬಾರಿಯ ಐಪಿಎಲ್‌ನಲ್ಲಿಯೂ ಪ್ಲೇಆಫ್‌ಗೆ ಪ್ರವೇಶಿಸುವ ಸನಿಹದಲ್ಲಿದೆ. ಪ್ರಸ್ತುತ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿರುವ ಆರ್‌ಸಿಬಿ ತನ್ನ ಕೊನೆಯ ಲೀಗ್ ಪಂದ್ಯವನ್ನು ಗೆದ್ದರೆ ನಿರಾತಂಕವಾಗಿ ಪ್ಲೇಆಫ್‌ಗೆ ಪ್ರವೇಶಿಸುವ ಅವಕಾಶವಿದೆ. ಹೀಗಾಗಿ ಈ ಬಾರಿಯ ಲೀಗ್ ಹಂತದ ಕೊನೆಯ ಪಂದ್ಯದ ಮೇಲೆ ಈಗ ಎಲ್ಲರ ಚಿತ್ತ ನೆಟ್ಟಿದೆ.
ಫಾಫ್ ಡು ಪ್ಲೆಸಿಸ್ ನೇತೃತ್ವದ ಆರ್‌ಸಿಬಿ ತಂಡ ಈಗ 7 ಪಂದ್ಯಗಳನ್ನು ಗೆದ್ದು 14 ಅಂಕಗಳ್ನು ತನ್ನದಾಗಿಸಿಕೊಂಡಿದೆ. ಆದರೆ ಆರ್‌ಸಿಬಿ ತಂಡದ ಪ್ಲೇಆಫ್ ಪ್ರವೇಶಕ್ಕೆ ಮುಂಬೈ ಇಂಡಿಯನ್ಸ್, ರಾಜಸ್ಥಾನ್ ರಾಯಲ್ಸ್ ತಮಡಗಳು ತೀವ್ರ ಪೈಪೋಟಿ ನಡೆಸುತ್ತಿವೆ. ಹೀಗಾಗಿ ಭಾನುವಾರದ ಪಂದ್ಯ ಆರ್‌ಸಿಬಿ ಪಾಲಿಗೆ ನಿರ್ಣಾಯಕ ಎನಿಸಿಕೊಂಡಿದೆ. ಈ ನಿರ್ಣಾಯಕ ಪಂದ್ಯದಲ್ಲಿ ಆರ್‌ಸಿಬಿ ತಂಡಕ್ಕೆ ಆಘಾತ ನೀಡಲು ಬಲಿಷ್ಠ ಗುಜರಾತ್ ಟೈಟನ್ಸ್ ತಂಡದ ಆಟಗಾರರು ಕಾದುಕುಳಿತಿದ್ದಾರೆ. ಅದರಲ್ಲೂ ಈ ನಾಲ್ವರು ಆಟಗಾರರು ಆರ್‌ಸಿಬಿ ತಂಡಕ್ಕೆ ಪಾಯವನ್ನುಂಟು ಮಾಡುವ ಸಾಧ್ಯತೆ ಹೆಚ್ಚಿದೆ.

ಆರಂಭಿಕ ಆಟಗಾರ ಶುಬ್ಮನ್ ಗಿಲ್
ಗುಜರಾತ್ ಟೈಟನ್ಸ್ ತಂಡದ ಆರಂಭಿಕ ಆಟಗಾರ ಶುಬ್ಮನ್ ಗಿಲ್ ಈ ಬಾರಿಯ ಟೂರ್ನಿಯಲ್ಲಿ ಅಮೋಘ ಪ್ರದರ್ಶನ ನೀಡಿದ್ದು ಅದ್ಭುತ ಲಯವನ್ನು ಮುಂದುವರಿಸಿದ್ದಾರೆ. ಗುಜರಾತ್ ಟೈಟನ್ಸ್ ತಂಡದ ಪರವಾಗಿ ಸ್ಥಿರ ಪ್ರದರ್ಶನ ನೀಡುತ್ತಿರುವ ಗಿಲ್ ಐಪಿಎಲ್‌ನಲ್ಲಿ ಚೊಚ್ಚಲ ಶತಕವನ್ನು ಕೂಡ ಬಾರಿಸಿದ್ದಾರೆ. ಹೀಗಾಗಿ ಆರ್‌ಸಿಬಿ ವಿರುದ್ಧದ ಪಂದ್ಯದಲ್ಲಿ ಗಿಲ್ ಸಹಜವಾಗಿ ಅಪಾಯವನ್ನುಂಟು ಮಾಡುವ ಸಾಮರ್ಥ್ಯ ಹೊಂದಿದ್ದಾರೆ.
ನಾಯಕ ಹಾರ್ದಿಕ್ ಪಾಂಡ್ಯ
ಗುಜರಾತ್ ಟೈಟನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ನಿರೀಕ್ಷಿತ ಪ್ರದರ್ಶನ ನೀಡಲು ವಿಳಲವಾಗಿರಬಹುದು. ಆದರೆ ಹಾರ್ದಿಕ್ ಪಾಂಡ್ಯ ಅವರ ಸಾಮರ್ಥ್ಯವನ್ನು ಪ್ರಶ್ನಿಸಲು ಸಾಧ್ಯವಿಲ್ಲ. ಯಾವುದೇ ಹಂತದಿಂದಲೂ ಪಂದ್ಯವನ್ನು ಏಕಾಂಗಿಯಾಗಿ ಗೆಲ್ಲಿಸಬಲ್ಲ ಸಾಮರ್ಥ್ಯಹೊಂದಿದ್ದಾರೆಎ ಹಾರ್ದಿಕ್. ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ನಡೆಸುವ ಪಾಂಡ್ಯ ಬೌಲಿಂಗ್‌ನಲ್ಲಿಯೂ ತಂಡದ ಸಾಮರ್ಥ್ಯ ಹೆಚ್ಚಿಸಲಿದ್ದಾರೆ. ಹೀಗಾಗಿ ಹಾರ್ದಿಕ್ ಪಾಂಡ್ಯ ವಿಚಾರವಾಗಿ ಆರ್‌ಸಿಬಿ ವಿಶೇಷ ರಣತಂತ್ರ ಹೂಡುವುದು ಅನಿವಾರ್ಯ.
ಆಲ್‌ರೌಂಡರ್ ರಶೀದ್ ಖಾನ್
ಟಿ20 ಕ್ರಿಕೆಟ್‌ನ ಶ್ರೇಷ್ಠ ಆಟಗಾರರಲ್ಲಿ ಒಬ್ಬರೆನಿಸಿಕೊಂಡಿರುವ ರಶೀದ್ ಖಾನ್ ಐಪಿಎಲ್‌ನಲ್ಲಿಯೂ ತನ್ನ ಸಾಮರ್ಥ್ಯಕ್ಕೆ ತಕ್ಕ ಪ್ರದರ್ಶನ ನೀಡಿಕೊಂಡು ಬಂದಿದ್ದಾರೆ. ಬೌಲಿಂಗ್‌ನಲ್ಲಿ ರಶೀದ್ ಖಾನ್ ಎಷ್ಟು ಅಪಾಯಕಾರಿಯೋ ಬ್ಯಾಟಿಂಗ್‌ನಲ್ಲಿಯೂ ಅಷ್ಟೇ ಹಾನಿಯುಂಟು ಮಾಡುವ ಸಾಮರ್ಥ್ಯ ಹೊಂದಿದ್ದಾರೆ. ಹೀಗಾಗಿ ರಶೀದ್ ಖಾನ್ ಅವರ ಸ್ಪಿನ್ ಬೌಲಿಂಗ್‌ಗೆ ಸೂಕ್ತ ಉತ್ತರ ಕಂಡುಕೊಳ್ಳುವ ಜೊತೆಗೆ ಆರ್‌ಸಿಬಿ ಬ್ಯಾಟಿಂಗ್‌ನಲ್ಲಿಯೂ ಅವರನ್ನು ಕಟ್ಟಿ ಹಾಕುವ ರಣತಂತ್ರ ಹೊಂದಿರುವುದು ಅಗತ್ಯ.
ಅನುಭವಿ ವೇಗಿ ಮೊಹಮ್ಮದ್ ಶಮಿ
ಇನ್ನು ಗುಜರಾತ್ ಟೈಟನ್ಸ್ ತಂಡದ ಬೌಲಿಂಗ್ ವಿಭಾಗವನ್ನು ಮುನ್ನಡೆಸುವ ಅನುಭವಿ ವೇಗದ ಬೌಲರ್ ಮೊಹಮ್ಮದ್ ಶಮಿ ಈ ಬಾರಿಯ ಐಪಿಎಲ್‌ನಲ್ಲಿ ಅದ್ಭುತ ಯಶಸ್ಸು ಸಾಧಿಸಿದ್ದಾರೆ. ಆರಂಭದಿಂದಲೇ ಎದುರಾಳಿಗೆ ಆಘಾತ ನೀಡುವ ಸಾಮರ್ಥ್ಯಹೊಂದಿರುವ ಮೊಹಮ್ಮದ್ ಶಮಿ ಅವರನ್ನು ಆರ್‌ಸಿಬಿ ಅಗ್ರ ಕ್ರಮಾಂಕದ ಆಟಗಾರರು ಎಚ್ಚರಿಕೆಯಿಂದ ಎದುರಿಸುವುದು ಅಗತ್ಯ. ಹೀಗಾಗಿ ಮೊಹಮ್ಮದ್ ಶಮಿ ಕೂಡ ಆರ್‌ಸಿಬಿ ತಂಡಕ್ಕೆ ಅಪಾಯವನ್ನುಂಟು ಮಾಡಬಲ್ಲ ಆಟಗಾರ ಎನಿಸಿಕೊಂಡಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications