ಟೈಟಾನ್ಸ್ ವಿರುದ್ಧ ಆರ್‌ಸಿಬಿ ಬ್ಯಾಟರ್‌ಗಳ ಅಬ್ಬರ; ರನ್ ಬೇಟೆಯಲ್ಲಿ ಕಿಂಗ್ ಕೊಹ್ಲಿಯೇ ನಂ.1
19ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ ಲೀಗ್ ಹಂತದ ಪಂದ್ಯಗಳು ಮುಗಿದಿವೆ. ಈಗ ಎಲ್ಲರ ಕಣ್ಣುಗಳು ಪ್ಲೇ ಆಫ್ ಮೇಲೆ ನೆಟ್ಟಿವೆ. ಅಂಕಪಟ್ಟಿಯಲ್ಲಿ ಅಗ್ರ 4 ಸ್ಥಾನ ಪಡೆದ ತಂಡಗಳು ನೇರವಾಗಿ ಪ್ಲೇ ಆಫ್ ಪ್ರವೇಶಿಸಲಿವೆ. ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಹಾಗೂ ಗುಜರಾತ್ ಟೈಟಾನ್ಸ್ (ಜಿಟಿ) ತಂಡಗಳು ಕಾದಾಟ ನಡೆಸಲಿವೆ.
ಮಂಗಳವಾರ ಧರ್ಮಶಾಲಾದಲ್ಲಿ ಆರ್‌ಸಿಬಿ ಹಾಗೂ ಜಿಟಿ ತಂಡಗಳ ಫೈಟ್ ರೋಚಕತೆ ಹೆಚ್ಚಿಸಿದೆ. ಆರ್‌ಸಿಬಿ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನದೊಂದಿಗೆ ಕ್ವಾಲಿಫೈಯರ್ ಪ್ರವೇಶಿಸಿದೆ. ಇನ್ನು ಜಿಟಿ ಅಂಕ ಪಟ್ಟಿಯಲ್ಲಿ ಎರಡನೇ ಸ್ಥಾನದಿಂದಿಗೆ ಕ್ವಾಲಿಫೈಯರ್ ಪ್ರವೇಶಿಸಿದೆ. ಉಭಯ ತಂಡಗಳಲ್ಲಿ ಸ್ಟಾರ್ ಆಟಗಾರರ ದಂಡೇ ಇದ್ದು ಮೊದಲ ಕ್ವಾಲಿಫೈಯರ್ ರೋಚಕತೆ ಹೆಚ್ಚಿಸಿದೆ.

ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಆರ್‌ಸಿಬಿ ಬ್ಯಾಟರ್‌ಗಳು ಸ್ಥಿರ ಪ್ರದರ್ಶನ ನೀಡಿದ್ದಾರೆ. ಈ ವರದಿಯಲ್ಲಿ ಟೈಟಾನ್ಸ್ ವಿರುದ್ಧ ಆರ್‌ಸಿಬಿ ಪರ ಉತ್ತಮ ಪ್ರದರ್ಶನ ನೀಡಿದ ಬ್ಯಾಟರ್‌ಗಳ ಮಾಹಿತಿ ಇಲ್ಲಿದೆ.
ವಿರಾಟ್ ಆರ್ಭಟ
ಆರ್‌ಸಿಬಿ ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಅತಿ ಹೆಚ್ಚು ರನ್ ಬಾರಿಸಿದ ಬ್ಯಾಟರ್‌ಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಇವರು ಗುಜರಾತ್ ವಿರುದ್ಧದ ಪಂದ್ಯದಲ್ಲಿ ಆಡಿದ 8 ಪಂದ್ಯಗಳಲ್ಲಿ 1 ಶತಕ ಹಾಗೂ 4 ಅರ್ಧಶತಕಗಳೊಂದಿಗೆ 460 ರನ್ ಬಾರಿಸಿದ್ದಾರೆ. ಈ ವೇಳೆ ಇವರ ಸ್ಟ್ರೈಕ್ ರೇಟ್ 152 ಆಗಿದೆ. ವಿರಾಟ್ ಟೈಟಾನ್ಸ್ ವಿರುದ್ಧ 49 ರನ್ ಬೌಂಡರಿ ಬಾರಿಸಿದ್ದು, 16 ಸಿಕ್ಸರ್ ಸಿಡಿಸಿದ್ದಾರೆ.

ಗುಜರಾತ್ ಪರ ಅತಿ ಹೆಚ್ಚು ರನ್ ಬಾರಿಸಿದ ಬ್ಯಾಟರ್‌ಗಳ ಪಟ್ಟಿಯಲ್ಲಿ ಕರ್ನಾಟಕದ ದೇವದತ್ ಪಡಿಕ್ಕಲ್‌ಗೂ ಸ್ಥಾನ. ಇವರು ಆಡಿದ 9 ಪಂದ್ಯಗಳಲ್ಲಿ 19ರ ಸರಾಸರಿಯಲ್ಲಿ 174 ರನ್ ಕಲೆ ಹಾಕಿದ್ದಾರೆ. ಭರವಸೆಯ ಮಧ್ಯಮ ಕ್ರಮಾಂಕದ ಬ್ಯಾಟರ್ ವೆಂಕಟೇಶ್ ಅಯ್ಯರ್ ಸಹ ಟೈಟಾನ್ಸ್ ಬೌಲರ್‌ಗಳನ್ನು ಕಾಡುವ ಕ್ಷಮತೆಯನ್ನು ಹೊಂದಿರುವ ಬ್ಯಾಟರ್. ಈ ಪಟ್ಟಿಯಲ್ಲಿ ಜಿತೇಶ್ ಶರ್ಮಾ ಸಹ ಸ್ಥಾನ ಪಡೆದಿದ್ದು ಇವರು 121 ರನ್ ಸಿಡಿಸಿದ್ದಾರೆ. ಸ್ಪೋಟಕ ಬ್ಯಾಟರ್ ಟೀಮ್ ಡೇವಿಡ್ ಸಹ ಗುಜರಾತ್ ವಿರುದ್ಧ 113 ರನ್ ಬಾರಿಸಿ ಸಾಧನೆ ಹೊಂದಿದ್ದಾರೆ.
ಎಲಿಮಿನೇಟರ್ ಪಂದ್ಯ
ಮೇ 27 ರಂದು ಎಲಿಮಿನೇಟರ್ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಕಾದಾಟ ನಡೆಸಲಿವೆ. ಲೀಗ್ ಹಂತದಲ್ಲಿ ಎರಡೂ ತಂಡಗಳು ಸ್ಥಿರ ಪ್ರದರ್ಶನ ನೀಡಿ ಗಮನ ಸೆಳೆದಿದೆ. ಎಸ್‌ಆರ್‌ಎಚ್ ಆಡಿದ 14 ಪಂದ್ಯಗಳಲ್ಲಿ 9 ಗೆಲುವು, 5 ಸೋಲು 18 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದೆ. ಇನ್ನು ರಾಜಸ್ಥಾನ್ ರಾಯಲ್ಸ್ ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಮುಂಬೈ ತಂಡವನ್ನು ಮಣಿಸಿ ಪ್ಲೇ ಆಫ್‌ಗೆ ಪ್ರವೇಶಿಸಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications