RCB vs KKR IPL 2023: ಕೆಕೆಆರ್ ವಿರುದ್ಧ ಆರ್‌ಸಿಬಿ ತಂಡದ ಒಂದು ಬದಲಾವಣೆ; ಹೇಗಿರಲಿದೆ ಆಡುವ 11ರ ಬಳಗ?
ಗುರುವಾರ, ಏಪ್ರಿಲ್ 6ರಂದು ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2023ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ 9ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗುತ್ತಿವೆ.
ಆರ್‌ಸಿಬಿ ಮತ್ತು ಕೆಕೆಆರ್ ತಂಡಗಳು ತಮ್ಮ ಪಂದ್ಯಕ್ಕೂ ಮುನ್ನ ಗಾಯದ ಸಮಸ್ಯೆ ಎದುರಿಸುತ್ತಿವೆ. ಆತಿಥೇಯ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು ಶ್ರೇಯಸ್ ಅಯ್ಯರ್ ಮತ್ತು ಶಕೀಬ್ ಅಲ್ ಹಸನ್ ಅನುಪಸ್ಥಿತಿಯಲ್ಲಿ ಆಡುತ್ತಿದೆ. ಇನ್ನು ಐಪಿಎಲ್ ಪ್ರಾರಂಭವಾಗುತ್ತಿದ್ದಂತೆ ಆರ್‌ಸಿಬಿ ತಂಡದ ವೇಗದ ಬೌಲರ್‌ಗಳಾದ ಜೋಶ್ ಹೇಜಲ್‌ವುಡ್ ಮತ್ತು ರೀಸ್ ಟೋಪ್ಲೆ ಅವರ ಸೇವೆ ಕಳೆದುಕೊಂಡಿದೆ.

ಐಪಿಎಲ್ 2023ರಲ್ಲಿ ನಿತೀಶ್ ರಾಣಾ ನಾಯಕತ್ವದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಪಂಜಾಬ್ ಕಿಂಗ್ಸ್ ವಿರುದ್ಧದ ಮೊದಲ ಪಂದ್ಯದಲ್ಲಿ 7 ರನ್‌ಗಳಿಂದ (DLS ವಿಧಾನ) ಸೋತಿದೆ. ಇದೀಗ ಮೊದಲ ಪಂದ್ಯ ಗೆದ್ದಿರುವ ಫಾಫ್ ಡು ಪ್ಲೆಸಿಸ್ ನಾಯಕತ್ವದ ಆರ್‌ಸಿಬಿ ವಿರುದ್ಧ ಗೆಲುವಿಗೆ ಪ್ರಯತ್ನಿಸಲಿದೆ. ಆದರೂ, ತಂಡದಲ್ಲಿ ಯಾವುದೇ ಬದಲಾವಣೆ ಇಲ್ಲದೆ, ಸೋತ ತಂಡವನ್ನೇ ಆಡಿಸಬಹುದು.
ಗಾಯಾಳು ಶ್ರೇಯಸ್ ಅಯ್ಯರ್ ಬದಲಿಗೆ ಇಂಗ್ಲೆಂಡ್ ಬ್ಯಾಟರ್ ಜೇಸನ್ ರಾಯ್ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಆಯ್ಕೆಯಾಗಿದ್ದಾರೆ. ಆದರೆ ಅಹಮದಾಬಾದ್‌ನಲ್ಲಿ ನಡೆಯುವ ತಮ್ಮ ಮುಂದಿನ ಪಂದ್ಯಕ್ಕೂ ಮುನ್ನ ಕೆಕೆಆರ್ ತಂಡವನ್ನು ಸೇರುವ ಸಾಧ್ಯತೆಯಿಲ್ಲ.
ಮತ್ತೊಂದೆಡೆ ಆರ್‌ಸಿಬಿ ತಂಡ ರೀಸ್ ಟೋಪ್ಲೆ ಬದಲಿಗೆ ಇಂಗ್ಲೆಂಡ್ ತಂಡದ ಸಹ ಆಟಗಾರ ಡೇವಿಡ್ ವಿಲ್ಲಿ ಅವರನ್ನು ಆಯ್ಕೆ ಮಾಡುವ ಸಾಧ್ಯತೆ ಇದೆ. 2023ರ ಐಪಿಎಲ್ ಮಿನಿ ಹರಾಜಿನಲ್ಲಿ ಜೋಶ್ ಹೇಜಲ್‌ವುಡ್‌ಗೆ ಬ್ಯಾಕ್‌ಅಪ್ ಬೌಲರ್ ಆಗಿ ರೀಸ್ ಟೋಪ್ಲೆ ಅವರನ್ನು 1.9 ಕೋಟಿ ರೂಪಾಯಿಗೆ ಆರ್‌ಸಿಬಿ ಖರೀದಿಸಿತ್ತು. ಬೆಂಗಳೂರಿನಲ್ಲಿ ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ತಮ್ಮ ಮೊದಲ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುವಾಗ ಅವರ ಬಲ ಭುಜಕ್ಕೆ ಗಾಯ ಮಾಡಿಕೊಂಡಿದ್ದಾರೆ.

ಡೇವಿಡ್ ವಿಲ್ಲಿ ಎಡಗೈ ವೇಗಿ ಮತ್ತು ಕೆಳ ಕ್ರಮಾಂಕದಲ್ಲಿ ಸೂಕ್ತ ಬ್ಯಾಟರ್ ಆಗಿರುವುದರಿಂದ ರೀಸ್ ಟೋಪ್ಲೆಯ ಅತ್ಯುತ್ತಮ ಬದಲಿ ಆಟಗಾರನಾಗುತ್ತಾನೆ. ಮುಂಬೈ ವಿರುದ್ಧದ ಮೊದಲ ಪಂದ್ಯದಲ್ಲಿ ಆರ್‌ಸಿಬಿ ತಂಡ ಯಾವುದೇ 'ಇಂಪ್ಯಾಕ್ಟ್ ಪ್ಲೇಯರ್' ಆಯ್ಕೆಯನ್ನು ಬಳಸಲಿಲ್ಲ. ಏಕೆಂದರೆ ತಂಡ ಎಂಟು ವಿಕೆಟ್‌ಗಳಿಂದ ಗೆಲುವು ಸಾಧಿಸಿತ್ತು.
ತಂಡ ಹೆಚ್ಚಿನ ವಿಕೆಟ್ ಕಳೆದುಕೊಂಡಿದ್ದರೆ, ಆಕಾಶ್ ದೀಪ್ ಅಥವಾ ಮೊಹಮ್ಮದ್ ಸಿರಾಜ್ ಬದಲಿಗೆ ಸುಯಶ್ ಪ್ರಭುದೇಸಾಯಿ ಅಥವಾ ಅನುಜ್ ರಾವತ್ ಅವರನ್ನು ಬ್ಯಾಟಿಂಗ್ ಆಡಿಸುವ ಸಾಧ್ಯತೆ ಇತ್ತು. ಇನ್ನು ಐದು ಇಂಪ್ಯಾಕ್ಟ್ ಪ್ಲೇಯರ್‌ಗಳ ಆಯ್ಕೆಯಲ್ಲಿ ಡೇವಿಡ್ ವಿಲ್ಲಿ ಹೆಸರು ಇರಲಿಲ್ಲ.

ಮತ್ತೊಂದೆಡೆ ಕೆಕೆಆರ್ ತಂಡ ಪಂಜಾಬ್ ಕಿಂಗ್ಸ್ ವಿರುದ್ಧದ ಆರಂಭಿಕ ಪಂದ್ಯದಲ್ಲಿ 43 ರನ್‌ಗಳನ್ನು ಬಿಟ್ಟು ಕೊಟ್ಟ ನಂತರ ಶಾರ್ದೂಲ್ ಠಾಕೂರ್ ಬದಲಿಗೆ ಕುಲ್ವಂತ್ ಖೆಜ್ರೋಲಿಯಾ ಅವರನ್ನು ಆಯ್ಕೆ ಮಾಡಬಹುದು. ಒಂದು ವೇಳೆ ಎರಡನೇ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್ ಮಾಡಿದರೆ ಮತ್ತೊಮ್ಮೆ ವರುಣ್ ಚಕ್ರವರ್ತಿ ಬದಲಿಗೆ ವೆಂಕಟೇಶ್ ಅಯ್ಯರ್ ಅವರನ್ನು 'ಇಂಪ್ಯಾಕ್ಟ್ ಪ್ಲೇಯರ್' ಆಗಿ ಬಳಸಬಹುದು.
ಆರ್‌ಸಿಬಿ vs ಕೆಕೆಆರ್ ತಂಡಗಳು ಸಂಭಾವ್ಯ ಆಡುವ 11ರ ಬಳಗ
ಕೆಕೆಆರ್ ತಂಡ: ಮನ್‌ದೀಪ್ ಸಿಂಗ್, ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ಅನುಕುಲ್ ರಾಯ್, ವೆಂಕಟೇಶ್ ಅಯ್ಯರ್, ನಿತೀಶ್ ರಾಣಾ (ನಾಯಕ), ರಿಂಕು ಸಿಂಗ್, ಆಂಡ್ರೆ ರಸೆಲ್, ಸುನಿಲ್ ನರೈನ್, ಶಾರ್ದೂಲ್ ಠಾಕೂರ್ / ಕುಲ್ವಂತ್ ಖೆಜ್ರೋಲಿಯಾ, ಉಮೇಶ್ ಯಾದವ್, ಟಿಮ್ ಸೌಥಿ.
ಆರ್‌ಸಿಬಿ ತಂಡ: ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಮೈಕಲ್ ಬ್ರೇಸ್‌ವೆಲ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಶಹಬಾಜ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಡೇವಿಡ್ ವಿಲ್ಲಿ, ಕರ್ಣ್ ಶರ್ಮಾ, ಮೊಹಮ್ಮದ್ ಸಿರಾಜ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications