Virat Kohli: ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಸಾಧಿಸಬಹುದಾದ 3 ದಾಖಲೆಗಳು
ಗುರುವಾರ, ಏಪ್ರಿಲ್ 6ರಂದು ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆಯುವ 2023 ಐಪಿಎಲ್ ಪಂದ್ಯದಲ್ಲಿ ನಿತೀಶ್ ರಾಣಾ ನಾಯಕತ್ವದ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ಮತ್ತು ಫಾಫ್ ಡು ಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡಗಳು ಸೆಣಸಾಡಲಿವೆ.
ಆರ್‌ಸಿಬಿ ತಂಡ ತನ್ನ ಮೊದಲನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ 8 ವಿಕೆಟ್‌ಗಳ ಭರ್ಜರಿ ಜಯದೊಂದಿಗೆ ಇಂದಿನ ಪಂದ್ಯಕ್ಕೆ ಬರುತ್ತಿದ್ದರೆ, ಕೆಕೆಆರ್ ತಂಡ ತನ್ನ ಮೊದಲ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧದ ಸೋಲಿನೊಂದಿಗೆ ಬರುತ್ತಿದೆ.

ಆರ್‌ಸಿಬಿ ತಂಡದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಅಜೇಯ 82 ರನ್ ಬಾರಿಸಿದ್ದರು. ಕೆಕೆಆರ್ ವಿರುದ್ಧದ ಪಂದ್ಯದಲ್ಲೂ ಅಂತಹದೆ ಇನ್ನಿಂಗ್ಸ್ ಅನ್ನು ಎಲ್ಲರೂ ಎದುರು ನೋಡುತ್ತಿದ್ದಾರೆ. ಅಷ್ಟೇ ಅಲ್ಲದೇ, ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿಗೆ ಕೆಲವು ಟಿ20 ದಾಖಲೆಗಳನ್ನು ನಿರ್ಮಿಸುವ ಅವಕಾಶವಿದೆ.
ಆರ್‌ಸಿಬಿ vs ಕೆಕೆಆರ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ನಿರ್ಮಿಸಬಹುದಾದ 3 ಮೈಲಿಗಲ್ಲುಗಳು
1. 100 ಐಪಿಎಲ್ ಕ್ಯಾಚ್‌ಗಳು
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಇತಿಹಾಸದಲ್ಲಿ 100 ಕ್ಯಾಚ್‌ಗಳನ್ನು ಪೂರೈಸಲು ವಿರಾಟ್ ಕೊಹ್ಲಿಗೆ ಕೇವಲ 6 ಕ್ಯಾಚ್‌ಗಳ ಅವಶ್ಯಕತೆ ಇದೆ. ಆರ್‌ಸಿಬಿ ತಂಡದ ಮಾಜಿ ನಾಯಕ ಪ್ರಸ್ತುತ 94 ಕ್ಯಾಚ್‌ಗಳನ್ನು ಪಡೆದಿದ್ದಾರೆ. ಕೆಕೆಆರ್ ವಿರುದ್ಧದ ಪಂದ್ಯವು ಆರ್‌ಸಿಬಿ ಫ್ರಾಂಚೈಸಿ ಪರ ವಿರಾಟ್ ಕೊಹ್ಲಿಗೆ 225ನೇ ಐಪಿಎಲ್ ಪಂದ್ಯವಾಗಿದೆ. ಮೊದಲ ಋತುವಿನಿಂದಲೂ ಒಂದೇ ಫ್ರಾಂಚೈಸಿ ಪರ ಆಡುತ್ತಿರುವ ಏಕೈಕ ಆಟಗಾರನಾಗಿದ್ದಾರೆ.

2. ಟಿ20 ಸ್ವರೂಪದಲ್ಲಿ 11,500 ರನ್‌ಗಳು
ಭಾರತ ತಂಡದ ಮಾಜಿ ನಾಯಕ ಹಾಗೂ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಟಿ20 ಸ್ವರೂಪದಲ್ಲಿ 11,500 ರನ್ ಪೂರೈಸಲು ಕೇವಲ 92 ರನ್‌ಗಳು ಬೇಕಾಗಿವೆ. ಸದ್ಯ ಆರ್‌ಸಿಬಿ ಪರ ವಿರಾಟ್ ಕೊಹ್ಲಿ 5 ಶತಕ ಹಾಗೂ 45 ಅರ್ಧಶತಕ ಸಿಡಿಸಿದ್ದಾರೆ. 50 ಬಾರಿ 50ಕ್ಕೂ ಹೆಚ್ಚು ರನ್ ಗಳಿಸಿದ ಮೂವರು ಆಟಗಾರರಲ್ಲಿ ವಿರಾಟ್ ಕೊಹ್ಲಿ ಒಬ್ಬರು. ಡೇವಿಡ್ ವಾರ್ನರ್ ಮತ್ತು ಶಿಖರ್ ಧವನ್ ಇತರ ಇಬ್ಬರು ಆಟಗಾರರು.
3. ಈಡನ್ ಗಾರ್ಡನ್ಸ್‌ನಲ್ಲಿ 500 ಟಿ20 ರನ್‌ಗಳು
ಟಿ20 ಸ್ವರೂಪದ ಕ್ರಿಕೆಟ್‌ನಲ್ಲಿ ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ 500 ರನ್‌ಗಳ ಕ್ಲಬ್‌ಗೆ ಪ್ರವೇಶಿಸಲು ವಿರಾಟ್ ಕೊಹ್ಲಿ ಕೇವಲ 29 ರನ್‌ಗಳ ಅಂತರದಲ್ಲಿದ್ದಾರೆ. ಇನ್ನು ಕೆಕೆಆರ್ ನಾಯಕ ನಿತೀಶ್ ರಾಣಾ ಕೂಡ ಅದೇ ಪಟ್ಟಿಗೆ ಸೇರಲು ಕೇವಲ 8 ರನ್ ಗಳಿಸಬೇಕಿದೆ.

ಆರ್‌ಸಿಬಿ vs ಕೆಕೆಆರ್ ತಂಡಗಳು ಸಂಭಾವ್ಯ ಆಡುವ 11ರ ಬಳಗ
ಕೆಕೆಆರ್ ತಂಡ: ಮನ್‌ದೀಪ್ ಸಿಂಗ್, ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ಅನುಕುಲ್ ರಾಯ್, ವೆಂಕಟೇಶ್ ಅಯ್ಯರ್, ನಿತೀಶ್ ರಾಣಾ (ನಾಯಕ), ರಿಂಕು ಸಿಂಗ್, ಆಂಡ್ರೆ ರಸೆಲ್, ಸುನಿಲ್ ನರೈನ್, ಶಾರ್ದೂಲ್ ಠಾಕೂರ್ / ಕುಲ್ವಂತ್ ಖೆಜ್ರೋಲಿಯಾ, ಉಮೇಶ್ ಯಾದವ್, ಟಿಮ್ ಸೌಥಿ.
ಆರ್‌ಸಿಬಿ ತಂಡ: ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಮೈಕಲ್ ಬ್ರೇಸ್‌ವೆಲ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಶಹಬಾಜ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಡೇವಿಡ್ ವಿಲ್ಲಿ, ಕರ್ಣ್ ಶರ್ಮಾ, ಮೊಹಮ್ಮದ್ ಸಿರಾಜ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications