Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

RCB vs KKR: ಉದ್ಘಾಟನಾ ಪಂದ್ಯಕ್ಕೆ ಮಳೆ ಕಾಟ? ಮಳೆ ನಡೆಯುತ್ತಾ?

18ನೇ ಆವೃತ್ತಿಯ ಐಪಿಎಲ್‌ ಮಾರ್ಚ್‌ 22ರಿಂದ ಆರಂಭವಾಗಲಿದೆ. ಈ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೋಲ್ಕತ್ತಾ ನೈಟ್‌ ರೈಡರ್ಸ್‌ ತಂಡಗಳು ಕಾದಾಟ ನಡೆಸಲಿವೆ. ಹಾಲಿ ಚಾಂಪಿಯನ್‌ ಕೆಕೆಆರ್‌ ಉದ್ಘಾಟನ ಪಂದ್ಯವನ್ನು ತನ್ನ ಮನೆಯ ಅಂಗಳದಲ್ಲಿ ಆಡಲಿದೆ. ಈ ಪಂದ್ಯದ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಈ ಪಂದ್ಯದಲ್ಲಿ ಉಭಯ ತಂಡಗಳು ಗೆಲುವಿನ ಆರಂಭವನ್ನು ಮಾಡುವ ಪ್ಲ್ಯಾನ್ ಮಾಡಿಕೊಂಡಿವೆ. ಎರಡೂ ತಂಡಗಳು ಬಲಿಷ್ಠವಾಗಿದ್ದು ರಣ ರೋಚಕತೆ ಹುಟ್ಟಿಸಿದೆ.

ಕೆಕೆಆರ್‌ ತಂಡದ ನಾಯಕರಾಗಿ ಅಜಿಂಕ್ಯ ರಹಾನೆ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಸ್ಟಾರ್ ಆಟಗಾರರಾಗಿ ರಿಂಕು ಸಿಂಗ್‌, ವೆಂಕಟೇಶ್‌ ಅಯ್ಯರ್‌, ಸುನಿಲ್‌ ನರೈನ್‌, ಆಂಡ್ರಿ ರಸೆಲ್‌ ಅಭಿಮಾನಿಗಳ ಚಿತ್ತ ಕದ್ದಿದ್ದಾರೆ. ಆರ್‌ಸಿಬಿ ತಂಡದಲ್ಲೂ ಸ್ಟಾರ್ ಆಟಗಾರರ ದಂಡೇ ಇದೆ. ವಿರಾಟ್‌ ಕೊಹ್ಲಿ ತಂಡದ ಬ್ಯಾಟಿಂಗ್ ಶಕ್ತಿ. 18ನೇ ಆವೃತ್ತಿಯಲ್ಲಿ ಆರ್‌ಸಿಬಿ ತಂಡವನ್ನು ರಜತ್ ಪಾಟಿದಾರ್ ಮುನ್ನಡೆಸಲಿದ್ದಾರೆ. ಉಳಿದಂತೆ ಭುವನೇಶ್ವರ್ ಕುಮಾರ್, ಜೋಶ್ ಹ್ಯಾಜಲ್‌ವುಡ್, ಫಿಲ್‌ ಸಾಲ್ಟ್‌ ಮೇಲೆ ಎಲ್ಲರ ಕಣ್ಣುಗಳು ನೆಟ್ಟಿರುತ್ತವೆ.

RCB vs KKR IPL 2025 Opener Under Rain Threat Match Could See Delays or Overs Reduction

ವಾತಾವರಣ ಹೇಗಿರುತ್ತದೆ?

ಹವಾಮಾನ ವರದಿಯ ಪ್ರಕಾರ, ಹಗಲಿನಲ್ಲಿ ಮಳೆಯಾಗುವ ಸಾಧ್ಯತೆ ಶೇ. 40 ರಷ್ಟು ಇದೆ. ಕಪ್ಪು ಮೋಡಗಳು ಇರುವ ನಿರೀಕ್ಷೆ ಇದೆ. ಬಿರುಗಾಳಿ, ಮಿಂಚು, ಮಳೆ ಆಗುವ ಸಾಧ್ಯತೆ ಇದೆ. ಆರ್‌ಸಿಬಿ vs ಕೆಕೆಆರ್ ಪಂದ್ಯವೂ ರದ್ದಾಗುವ ಅಪಾಯದಲ್ಲಿದೆ. ಉದ್ಘಾಟನಾ ಪಂದ್ಯ ಮಾರ್ಚ್ 22 ರಂದು ನಡೆಯಲಿದೆ. ಹೀಗಾಗಿ ಈ ಪಂದ್ಯದ ಓವರ್‌ಗಳಿಗೆ ಕಡಿತವಾಗುವ ಸಾಧ್ಯತೆ ಇದೆ.

ಚಾಂಪಿಯನ್‌ ಪಟ್ಟ ಅಲಂಕರಿಸಿದ ಕೆಕೆಆರ್‌

ಐಪಿಎಲ್‌ 2024ರ ಫೈನಲ್‌ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಕಾದಾಟ ನಡೆಸಿದವು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ್ದ ಎಸ್‌ಆರ್‌ಎಚ್‌ ತಂಡ 113 ರನ್‌ಗಳಿಗೆ ಆಲೌಟ್ ಆಯಿತು. ಇದಕ್ಕುತ್ತವಾಗಿ ಬ್ಯಾಟ್ ಮಾಡಿದ ಕೆಕೆಆರ್‌ ಈ ಗುರಿಯನ್ನು 10.3 ಓವರ್‌ಗಳಲ್ಲಿ 114 ರನ್‌ಗಳಿಗೆ 2 ವಿಕೆಟ್‌ ಕಳೆದುಕೊಂಡು ಜಯ ಸಾಧಿಸಿತು.

ಕೆಕೆಆರ್ ತಂಡ: ಅಜಿಂಕ್ಯ ರಹಾನೆ (ನಾಯಕ), ರಿಂಕು ಸಿಂಗ್, ಕ್ವಿಂಟನ್ ಡಿ ಕಾಕ್, ರಹಮಾನಲ್ಲಾ ಗುರ್ಬಾಜ್, ಅಂಗ್ಕ್ರಿಶ್ ರಘುವಂಶಿ, ವೆಂಕಟೇಶ್ ಅಯ್ಯರ್, ರಮಣದೀಪ್ ಸಿಂಗ್, ಆಂಡ್ರೆ ರಸೆಲ್, ಅನ್ರಿಚ್ ನಾರ್ಟ್ಜೆ, ಹರ್ಷಿತ್ ರಾಣಾ, ಸುನಿಲ್ ನರೈನ್, ವರುಣ್ ಚಕ್ರವರ್ತಿ, ವೈಭವ್ ಅರೋರಾ, ಮಯಾಂಕ್ ಮಾರ್ಕಂಡೆ, ರೋವ್ಮನ್ ಪೊವೆಲ್, ಮನೀಶ್ ಪಾಂಡೆ, ಸ್ಪೆನ್ಸರ್ ಜಾನ್ಸನ್, ಲವ್ನಿತ್ ಸಿಸೋಡಿಯಾ, ಅನುಕುಲ್ ರಾಯ್, ಮೊಯಿನ್ ಅಲಿ, ಉಮ್ರಾನ್ ಮಲಿಕ್.

ಆರ್‌ಸಿಬಿ ತಂಡ: ರಜತ್ ಪಾಟಿದಾರ್ (ನಾಯಕ), ವಿರಾಟ್ ಕೊಹ್ಲಿ, ಯಶ್ ದಯಾಳ್, ಜೋಶ್ ಹ್ಯಾಜಲ್‌ವುಡ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಲಿಯಾಮ್ ಲಿವಿಂಗ್‌ಸ್ಟೋನ್, ರಸಿಕ್ ದಾರ್, ಸುಯಾಶ್ ಶರ್ಮಾ, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ರೊಮಾರಿಯೊ ಶೆಫರ್ಡ್, ನುವಾನ್ ತುಷಾರ, ಮನೋಜ್ ಭಂಡಾಗೆ, ಜಾಕೋಬ್ ಬೆಥೆಲ್, ದೇವದತ್ ಪಡಿಕ್ಕಲ್, ಸ್ವಸ್ತಿಕ್ ಚಿಕಾರ, ಲುಂಗಿ ಎನ್‌ಗಿಡಿ, ಅಭಿನಂದನ್ ಸಿಂಗ್, ಮೋಹಿತ್ ರಾಠಿ.

Story first published: Thursday, March 20, 2025, 11:32 [IST]
Other articles published on Mar 20, 2025
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+