RCB vs KKR: ಆರ್‌ಸಿಬಿ ಗೆದ್ದರೆ ಪ್ಲೇಆಫ್ ಪ್ರವೇಶ; ಪ್ಲೇಯಿಂಗ್ ಇಲೆವೆನ್, ಪಿಚ್ ವರದಿ, ನೇರಪ್ರಸಾರದ ಮಾಹಿತಿ
ರಾಯ್‌ಪುರ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ರೋಚಕ ಘಟ್ಟದತ್ತ ಮನೆ ಮಾಡಿದೆ. ಲೀಗ್ ಹಂತ ನಿರ್ಣಾಯಕ ಘಟ್ಟದತ್ತ ಬಂದು ನಿಂತಿದೆ. ಈಗ ಎಲ್ಲ ತಂಡಗಳಿಗೆ ಗೆಲವು ಒಂದೇ ಅನಿವಾರ್ಯವಾಗಿದೆ. ಈ ಆವೃತ್ತಿಯ 57ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡಗಳು ಕಾದಾಟ ನಡೆಸಲಿವೆ. ಈ ಪಂದ್ಯದಲ್ಲಿ ಗೆಲುವು ದಾಖಲಿಸಿದರೆ ಕೆಕೆಆರ್ ಪ್ಲೇ ಆಫ್ ಕನಸು ನನಸಾಗಬಹುದು.
ಹಾಲಿ ಚಾಂಪಿಯನ್ ಆರ್‌ಸಿಬಿ ಎರಡನೇ ಪ್ರಶಸ್ತಿಯ ಹುಡುಕಾಟದಲ್ಲಿದೆ. ರುತುರಾಜ್ ಗಾಯಕ್ವಾಡ್ ಪಡೆ ಸಹ ಸ್ಥಿರ ಪ್ರದರ್ಶನ ನೀಡುತ್ತಿದ್ದುಎಲ್ಲರ ಗಮನ ಸೆಳೆದಿದೆ. ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ಅಮೋಘ ಆಟವನ್ನು ಪ್ರದರ್ಶಿಸಿರುವ ಆರ್‌ಸಿಬಿ, ಕೆಕೆಆರ್ ತಂಡವನ್ನು ಮಣಿಸಿ ಪ್ಲೇ ಆಫ್ ಪ್ರವೇಶಿಸುವ ಪಕ್ಕಾ ಮಾಡಿಕೊಳ್ಳುವ ಕನಸಿನಲ್ಲಿದೆ. ಆರ್‌ಸಿಬಿ ತಂಡದಲ್ಲಿರುವ ಸ್ಟಾರ್ ಆಟಗಾರರು ಸ್ಥಿರ ಪ್ರದರ್ಶನ ನೀಡಿ ತಂಡದ ಜಯದಲ್ಲಿ ಮಿಂಚಬೇಕಿದೆ.

ಪಿಚ್ ಹೇಗಿರಲಿದೆ?
ರಾಯ್‌ಪುರದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಆರ್‌ಸಿಬಿ ತಂಡಗಳು ಕಾದಾಟ ನಡೆಸಿದ್ದವು. ಈ ವೇಳೆ ರೋಚಕ ಪಂದ್ಯಕ್ಕೆ ಸಾಕ್ಷಿಯಾಗಿತ್ತು. ಪಿಚ್ ಬೌಲರ್‌ಗಳಿಗೆ ಸಹಾಯಕವಾಗಿತ್ತು. ಹೀಗಾಗಿ ಕೋಲ್ಕತ್ತಾ ಹಾಗೂ ಆರ್‌ಸಿಬಿ ನಡುವಣ ಪಂದ್ಯದಲ್ಲೂ ಇಂತಹದ್ದೇ ಪಂದ್ಯ ನೋಡುವ ನಿರೀಕ್ಷೆ ಇದೆ. ಟಾಸ್ ಗೆದ್ದ ತಂಡ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಳ್ಳುವ ಸಾಧ್ಯತೆ ಇದೆ.
ಭುವನೇಶ್ವರ್ ಕುಮಾರ್ ಪ್ರದರ್ಶನ ಈ ಲೀಗ್‌ನಲ್ಲಿ ಹೇಗಿದೆ?
ಆರ್‌ಸಿಬಿ ತಂಡದ ವೇಗದ ಬೌಲರ್ ಭುವನೇಶ್ವರ್ ಕುಮಾರ್ ಈ ಬಾರಿಯ ಲೀಗ್‌ನಲ್ಲಿ ಅಮೋಘ ಬೌಲಿಂಗ್ ಪ್ರದರ್ಶನ ನೀಡಿದ್ದು, 21 ವಿಕೆಟ್ ಪಡೆದು ಪರ್ಪಲ್ ಕ್ಯಾಪ್ ರೇಸ್‌ನಲ್ಲಿದ್ದಾರೆ.
ಆರ್‌ಸಿಬಿ ತಂಡದ ಪ್ಲೇಯಿಂಗ್ ಇಲೆವೆನ್ ಹೇಗಿರಲಿದೆ?
ವಿರಾಟ್ ಕೊಹ್ಲಿ, ಜಾಕೊಬ್ ಬೆಥೆಲ್, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್ (ನಾಯಕ), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಟಿಮ್ ಡೇವಿಡ್, ರೊಮಾರಿಯೋ ಶೆಫರ್ಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಜೋಶ್ ಹ್ಯಾಜಲ್‌ವುಡ್, ಸುಯಶ್ ಶರ್ಮಾ ಮತ್ತು ರಸಿಖ್ ಸಲಾಮ್ ದಾರ್.
ಕೆಕೆಆರ್ ತಂಡ ಯಾರಿಗೆಲ್ಲಾ ಅವಕಾಶ ನೀಡಬಹುದು?
ಅಜಿಂಕ್ಯ ರಹಾನೆ (ನಾಯಕ), ಫಿನ್ ಅಲೆನ್, ಆಂಗ್ಕ್ರಿಶ್ ರಘುವಂಶಿ, ಕ್ಯಾಮೆರಾನ್ ಗ್ರೀನ್, ರೋವ್ಮನ್ ಪೊವೆಲ್, ಮನೀಶ್ ಪಾಂಡೆ, ರಿಂಕು ಸಿಂಗ್, ಸುನಿಲ್ ನರೈನ್, ಅನುಕುಲ್ ರಾಯ್, ಕಾರ್ತಿಕ್ ತ್ಯಾಗಿ, ವೈಭವ್ ಅರೋರಾ ಮತ್ತು ವರುಣ್ ಚಕ್ರವರ್ತಿ.
ಆರ್‌ಸಿಬಿ, ಕೆಕೆಆರ್ ಪಂದ್ಯವನ್ನು ನೇರಪ್ರಸಾರದಲ್ಲಿ ನೋಡುವುದು ಎಲ್ಲಿ?
ಆರ್‌ಸಿಬಿ ಹಾಗೂ ಕೆಕೆಆರ್ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರ ಪ್ರಸಾರದಲ್ಲಿ ವೀಕ್ಷಿಸಬಹುದಾಗಿದೆ. ಅಲ್ಲದೆ ಆನ್‌ಲೈನ್‌ನಲ್ಲಿ ಜಿಯೋ ಹಾಟ್ ಸ್ಟಾರ್‌ನಲ್ಲಿ ನೋಡಬಹುದಾಗಿದೆ.
19ನೇ ಆವೃತ್ತಿಯ 57ನೇ ಪಂದ್ಯ ಎಷ್ಟು ಗಂಟೆಗೆ ಆರಂಭವಾಗುತ್ತದೆ?
ಆರ್‌ಸಿಬಿ ಹಾಗೂ ಕೆಕೆಆರ್ ನಡುವಣ ಪಂದ್ಯ ಸಂಜೆ 7.30ಕ್ಕೆ ನಡೆಯಲಿದೆ. ಪಂದ್ಯ ಆರಂಭಕ್ಕೂ ಅರ್ಧಗಂಟೆ ಮುನ್ನ ಟಾಸ್ ನಡೆಯಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications