RCB vs KKR: ಆರ್‌ಸಿಬಿ ವಿರುದ್ಧದ ಪಂದ್ಯದಲ್ಲಿ ವಿಶೇಷ ಸಾಧನೆ ಮಾಡಿದ ರಹಮಾನುಲ್ಲಾ ಗುರ್ಬಾಜ್, ಶಾರ್ದೂಲ್ ಠಾಕೂರ್
ಗುರುವಾರ, ಏಪ್ರಿಲ್ 6ರಂದು ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ 2023ರ ಐಪಿಎಲ್‌ನ 9ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡಗಳು ಮುಖಾಮುಖಿಯಾದವು.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ನಿತೀಶ್ ರಾಣಾ ನಾಯಕತ್ವದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 204 ರನ್‌ಗಳನ್ನು ಗಳಿಸಿತು. ಇದರಲ್ಲಿ ರಹಮಾನುಲ್ಲಾ ಗುರ್ಬಾಜ್ ಅವರು 44 ಎಸೆತಗಳಲ್ಲಿ 6 ಬೌಂಡರಿ ಮತ್ತು 3 ಸಿಕ್ಸರ್ ಸಮೇತ 57 ರನ್ ಬಾರಿಸಿ ದೊಡ್ಡ ಕೊಡುಗೆ ನೀಡಿದರು.

ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಆರಂಭಿಕ ಆಟಗಾರ ರಹಮಾನುಲ್ಲಾ ಗುರ್ಬಾಜ್ ಅವರು ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಇತಿಹಾಸದಲ್ಲಿ ಅರ್ಧಶತಕ ಬಾರಿಸಿದ ಮೊದಲ ಅಫ್ಘಾನಿಸ್ತಾನ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದರು.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ 12ನೇ ಓವರ್‌ನಲ್ಲಿ ಕರ್ಣ್ ಶರ್ಮಾ ಎಸೆತದಲ್ಲಿ ಔಟಾಗುವ ಮುನ್ನ ರಹಮಾನುಲ್ಲಾ ಗುರ್ಬಾಜ್ 57 ರನ್ ಬಾರಿಸಿ ಕುಸಿದಿದ್ದ ಕೆಕೆಆರ್ ತಂಡವನ್ನು ಸಂಕಷ್ಟದಿಂದ ಪಾರು ಮಾಡಿದರು.
21 ವರ್ಷದ ಅಫ್ಘಾನಿಸ್ತಾನ ಬ್ಯಾಟರ್ ರಹಮಾನುಲ್ಲಾ ಗುರ್ಬಾಜ್ ಅವರನ್ನು ಗುಜರಾತ್ ಟೈಟನ್ಸ್ ತಂಡದಿಂದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಟ್ರೇಡ್ ಮಾಡಿಕೊಂಡಿತ್ತು. ಇಲ್ಲಿಯವರೆಗೆ ಉತ್ತಮವಾಗಿ ಆಡಿ ತಮ್ಮ ಆಯ್ಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಆರ್‌ಸಿಬಿ ವಿರುದ್ಧ ಅಫ್ಘಾನಿಸ್ತಾನದ ಆರಂಭಿಕ ಆಟಗಾರ ಉತ್ತಮ ಆರಂಭವನ್ನು ಪಡೆದರು. ಒಂದು ಕಡೆ ವಿಕೆಟ್ ಉರುಳುತ್ತಿದ್ದರೂ, ಮತ್ತೊಂದು ಕಡೆ ರಹಮಾನುಲ್ಲಾ ಗುರ್ಬಾಜ್ ಕ್ರೀಸ್‌ಗೆ ಅಂಟಿಕೊಂಡು ಆಡಿದರು.
2023ರ ಐಪಿಎಲ್‌ನಲ್ಲಿ ಜಂಟಿ ವೇಗದ ಅರ್ಧಶತಕ ಬಾರಿಸಿದ ಶಾರ್ದೂಲ್ ಠಾಕೂರ್
ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಆಲ್‌ರೌಂಡರ್ ಶಾರ್ದೂಲ್ ಠಾಕೂರ್ 2023ರ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ವೇಗದ ಅರ್ಧ ಶತಕ ಬಾರಿಸಿ ರಾಜಸ್ಥಾನ ರಾಯಲ್ಸ್‌ನ ಜೋಸ್ ಬಟ್ಲರ್ ದಾಖಲೆಯನ್ನು ಸರಿಗಟ್ಟಿದರು.
ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಈಡನ್ ಗಾರ್ಡನ್ಸ್ ನಡೆದ ಪಂದ್ಯದಲ್ಲಿ ಶಾರ್ದೂಲ್ ಠಾಕೂರ್ 7ನೇ ಕ್ರಮಾಂಕದಲ್ಲಿ ಕ್ರೀಸ್‌ಗೆ ಬಂದು 20 ಎಸೆತಗಳಲ್ಲಿ ಅರ್ಧಶತಕ ಬಾರಿಸಿದರು ಮತ್ತು ಐಪಿಎಲ್‌ನಲ್ಲಿ ಇದು ಶಾರ್ದೂಲ್ ಠಾಕೂರ್ ಅವರ ಚೊಚ್ಚಲ ಅರ್ಧಶತಕವಾಗಿದೆ.

ಇನ್ನು ಶಾರ್ದೂಲ್ ಠಾಕೂರ್ ಅವರು ಐಪಿಎಲ್‌ನಲ್ಲಿ 7ನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಬಂದು ಜಂಟಿ ಎರಡನೇ ಗರಿಷ್ಠ ಸ್ಕೋರ್ ಗಳಿಸಿದರು.
ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಮತ್ತೊಬ್ಬ ಆಲ್‌ರೌಂಡರ್ ಆಂಡ್ರೆ ರಸೆಲ್ ಏಪ್ರಿಲ್ 10, 2018ರಂದು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಅಜೇಯ 88 ರನ್ ಗಳಿಸುವ ಮೂಲಕ ಐಪಿಎಲ್‌ನಲ್ಲಿ 7ನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಬಂದು ಗರಿಷ್ಠ ಸ್ಕೋರ್ ಗಳಿಸಿದ ದಾಖಲೆಯನ್ನು ಹೊಂದಿದ್ದಾರೆ.
ಇನ್ನು ಶಾರ್ದೂಲ್ ಠಾಕೂರ್ ಅವರು ಇದೀಗ ಚೆನ್ನೈ ಸೂಪರ್ ಕಿಂಗ್ಸ್ ಮಾಜಿ ಆಲ್‌ರೌಂಡರ್ ಡ್ವೇನ್ ಬ್ರಾವೋ ಅವರೊಂದಿಗೆ ಜಂಟಿ ಎರಡನೇ ಸ್ಥಾನದ ದಾಖಲೆಯನ್ನು ಹಂಚಿಕೊಂಡಿದ್ದಾರೆ. ಡ್ವೇನ್ ಬ್ರಾವೋ ಏಪ್ರಿಲ್ 7, 2018ರಂದು ಮುಂಬೈ ಇಂಡಿಯನ್ಸ್ ವಿರುದ್ಧ 30 ಎಸೆತಗಳಲ್ಲಿ 68 ರನ್ ಬಾರಿಸಿದ್ದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications