RCB vs KKR: ಪ್ಲೇಆಫ್ ಮೇಲೆ ಆರ್‌ಸಿಬಿ, ಕೆಕೆಆರ್ ಕಣ್ಣು; ಒತ್ತಡದಲ್ಲಿ ಕಿಂಗ್ ಕೊಹ್ಲಿ
ರಾಯ್‌ಪುರ: 19ನೇ ಆವೃತ್ತಿ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ 57ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡಗಳು ಕಾದಾಟ ನಡೆಸಲಿವೆ. ಬುಧವಾರ ನಡೆಯುವ ಪಂದ್ಯದ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಪ್ಲೇ ಆಫ್ ಮೇಲೆ ಚಿತ್ತ ನೆಟ್ಟಿರುವ ಉಭಯ ತಂಡಗಳಿಗೆ ಈ ಪಂದ್ಯದಲ್ಲಿ ಗೆಲುವು ದಾಖಲಿಸುವುದು ಅನಿವಾರ್ಯವಾಗಿದೆ.
ಆರ್‌ಸಿಬಿ, ಕೆಕೆಆರ್ ತಂಡಗಳು ಈಗಾಗಲೇ ಐಪಿಎಲ್‌ನಲ್ಲಿ ಒಟ್ಟು 36 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ಆರ್‌ಸಿಬಿ 15, ಕೆಕೆಆರ್ 20 ಪಂದ್ಯಗಳನ್ನು ಗೆದ್ದಿದೆ. ಈ ಬಾರಿಯ ಲೀಗ್‌ನಲ್ಲೂ ಉಭಯ ತಂಡಗಳು ಭರ್ಜರಿ ಪ್ರದರ್ಶನ ನೀಡುತ್ತಿವೆ. ಆರ್‌ಸಿಬಿ ಎರಡನೇ ತವರು ರಾಯ್‌ಪುರದಲ್ಲಿ ಪಂದ್ಯವನ್ನು ಆಡಲಿದೆ. ಮುಂಬೈ ಇಂಡಿಯನ್ಸ್ ವಿರುದ್ಧ ರಣರೋಚಕ ಪಂದ್ಯವನ್ನು ಗೆದ್ದುಕೊಂಡಿತ್ತು. ಈಗ ಇನ್ನೊಂದು ಪಂದ್ಯವನ್ನು ಗೆದ್ದು ಪ್ಲೇ ಆಫ್‌ಗೆ ಸ್ಥಾನ ಭದ್ರ ಪಡಿಸಿಕೊಳ್ಳುವ ಆಸೆ ಆರ್‌ಸಿಬಿ ತಂಡದ್ದಾಗಿದೆ.

ಆರ್‌ಸಿಬಿ ಈ ಲೀಗ್‌ನಲ್ಲಿ ಭರ್ಜರಿ ಪ್ರದರ್ಶನ ನೀಡುತ್ತಿದ್ದು ಆಡಿದ 11 ಪಂದ್ಯಗಳಲ್ಲಿ 7 ಜಯ ಸಾಧಿಸಿದ್ದು, 14 ಅಂಕಗಳನ್ನು ಕಲೆ ಹಾಕಿದೆ. ಬುಧವಾರ ನಡೆಯುವ ಪಂದ್ಯದಲ್ಲಿ ಜಯ ಸಾಧಿಸಿದರೆ ಬೆಂಗಳೂರು ತಂಡ ಪ್ಲೇ ಆಫ್‌ಗೆ ಪ್ರವೇಶ ಪಡೆಯಬಹುದಾಗಿದೆ. ಇನ್ನು ಕೆಕೆಆರ್ ಆಡಿದ 10 ಪಂದ್ಯಗಳಲ್ಲಿ ಸತತ 4 ಜಯ ಸಾಧಿಸಿದ್ದು 9 ಅಂಕಗಳೊಂದಿಗೆ 9ನೇ ಸ್ಥಾನದಲ್ಲಿದೆ.
ಕೃನಾಲ್, ಭುವಿ ಆಕರ್ಷಣೆ
ಆರ್‌ಸಿಬಿ ತಂಡದ ಸೂಪರ್ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಕಳೆದ ಎರಡು ಪಂದ್ಯಗಳಲ್ಲಿ ರನ್ ಕಲೆ ಹಾಕುವಲ್ಲಿ ವಿಫಲರಾಗಿದ್ದು, ಕೆಕೆಆರ್ ವಿರುದ್ಧ ಇವರು ಅಬ್ಬರಿಸುವ ಪ್ಲ್ಯಾನ್ ಹಾಕಿಕೊಂಡಿದ್ದಾರೆ. ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಜವಾಬ್ದಾರಿಯುತ ಬ್ಯಾಟಿಂಗ್ ನಡೆಸಿದ್ದ ಜಾಕೊಬ್ ಬೆಥೆಲ್ ಅವರ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಮಧ್ಯಮ ಕ್ರಮಾಂಕದಲ್ಲಿ ದೇವದತ್ ಪಡಿಕ್ಕಲ್ ಹಾಗೂ ನಾಯಕ ರಜತ್ ಪಾಟಿದಾರ್ ಪರಿಸ್ಥಿತಿಗೆ ಅನುಗುಣವಾಗಿ ಬ್ಯಾಟ್ ಮಾಡುವ ಅನಿವಾರ್ಯತೆ ಇದೆ.
ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಮಾಡುವ ಕೃನಾಲ್ ಪಾಂಡ್ಯ ಅವರ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಇವರು ಮುಂಬೈ ವಿರುದ್ಧ ಒತ್ತಡದಲ್ಲಿದ್ದ ತಂಡಕ್ಕೆ ಆಧಾರವಾದ ಆಟಗಾರ. ಗಾಯದ ಮಧ್ಯದಲ್ಲಿ ಇವರು ಆಡಿದ ಆಟ ಅಭಿಮಾನಿಗಳ ಮನ ಗೆದ್ದಿತ್ತು. ಇವರ ಮೇಲೆ ಅಪಾರ ಭರವಸೆ ಇಟ್ಟುಕೊಳ್ಳಲಾಗಿದೆ. ಟಿಮ್ ಡೇವಿಡ್, ಜಿತೇಶ್ ಶರ್ಮಾ, ರೊಮಾರಿಯೋ ಶೆಫರ್ಡ್ ರನ್ ಕಲೆ ಹಾಕದೇ ಇರುವುದು ತಂಡದ ಚಿಂತೆಯನ್ನು ದ್ವಿಗುಣ ಮಾಡಿದೆ.
ಸಂಘಟಿತ ಆಟವೇ ಬಲ
ಈ ಲೀಗ್‌ನ ಆರಂಭದಲ್ಲಿ ಸಾಲು ಸಾಲು ಸೋಲುಗಳಿಂದ ಕಂಡಿದ್ದ ಕೆಕೆಆರ್ ಈಗ ಸಂಘಟಿತ ಆಟದ ಮೂಲಕ ಗೆಲುವಿನ ಟ್ರ್ಯಾಕ್‌ಗೆ ಮರಳಿದೆ. ಆಡಿರುವ 4 ಪಂದ್ಯಗಳನ್ನು ಗೆದ್ದಿದ್ದು 9 ಅಂಕಗಳನ್ನು ಕಲೆ ಹಾಕಿದ್ದು ಪ್ಲೇ ಆಫ್ ಕನಸು ಕಾಣುತ್ತಿದೆ. ಕಳೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಶತಕ ಬಾರಿಸಿದ್ದ ಫಿನ್ ಅಲೇನ್ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ನಾಯಕ ಅಜಿಂಕ್ಯ ರಹಾನೆ, ಅಂಗ್‌ಕ್ರಿಶ್ ರಘುವಂಶಿ, ಕ್ಯಾಮರೂನ್ ಗ್ರೀನ್, ಮನೀಷ್ ಪಾಂಡೆ, ರಿಂಕು ಸಿಂಗ್ ಸಮಯೋಚಿತ ಆಟ ಆಡಬೇಕಿದೆ.

ವೇಗದ ಬೌಲಿಂಗ್ ವಿಭಾಗದಲ್ಲಿ ವೈಭವ್ ಆರೋರಾ, ಕಾರ್ತಿಕ್ ತ್ಯಾಗಿ ತಮ್ಮ ಬಿಗುವಿನ ದಾಳಿಯ ಮೂಲಕ ತಂಡಕ್ಕೆ ನೆರವಾಗಬೇಕಿದೆ. ಸ್ಪಿನ್ ವಿಭಾಗದಲ್ಲಿ ಅನುಕೂಲ್ ರಾಯ್, ವರುಣ್ ಚಕ್ರವರ್ತಿ, ಸುನಿಲ್ ನರೈನ್ ಮೋಡಿ ದಾಳಿ ಸಂಘಟಿಸಿದಲ್ಲಿ ಗೆಲುವಿನ ಆಸೆ ಫಲಿಸುತ್ತದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications