RCB vs LSG: ತವರಿನಲ್ಲಿ ಅಬ್ಬರಿಸಿದ ಆರ್‌ಸಿಬಿ: ಲಕ್ನೋ ವಿರುದ್ಧ 5 ವಿಕೆಟ್ ಜಯ
ಬೆಂಗಳೂರು: ಭರವಸೆಯ ಆಟಗಾರರ ಭರ್ಜರಿ ಪ್ರದರ್ಶನದ ಫಲದಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) 19ನೇ ಆವೃತ್ತಿ ಐಪಿಎಲ್‌ನ 23ನೇ ಪಂದ್ಯದಲ್ಲಿ 5 ವಿಕೆಟ್‌ಗಳಿಂದ ಲಕ್ನೋ ಸೂಪರ್ ಜೈಂಟ್ಸ್ (ಎಲ್‌ಎಸ್‌ಜಿ) ತಂಡವನ್ನು ಮಣಿಸಿ, ತವರಿನಲ್ಲಿ ಹ್ಯಾಟ್ರಿಕ್ ಗೆಲುವಿನ ನಗೆ ಬೀರಿದೆ. ಇದಕ್ಕೂ ಮೊದಲು ಬೆಂಗಳೂರಿನ ಎಂ ಚಿನ್ನಸ್ವಾಮಿ ಮೈದಾನದಲ್ಲಿ ಆರ್‌ಸಿಬಿ, ಸನ್‌ರೈಸರ್ಸ್ ಹೈದರಾಬಾದ್, ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮಣಿಸಿತ್ತು. ಈಗ ಎಲ್‌ಎಸ್‌ಜಿ ತಂಡವನ್ನು ಮಣಿಸಿ ಅಬ್ಬರಿಸಿದೆ. ಈ ಗೆಲುವಿನೊಂದಿಗೆ ಆರ್‌ಸಿಬಿ ಅಂಕ ಪಟ್ಟಿಯಲ್ಲಿ ಅಗ್ರ ಸ್ಥಾನವನ್ನು ಪಡೆದಿದೆ.
ಎಲ್‌ಎಸ್‌ಜಿ ನೀಡಿದ್ದ 146 ರನ್‌ಗಳ ಗುರಿಯನ್ನು ಹಿಂಬಾಲಿಸಿದ ಆರ್‌ಸಿಬಿ ತಂಡದ ಆರಂಭ ಕಳಪೆಯಾಗಿತ್ತು. ಆರಂಭಿಕರಾದ ಫಿಲ್ ಸಾಲ್ಟ್ (7) ರನ್ ಕಲೆ ಹಾಕುವಲ್ಲಿ ವಿಫಲರಾದರು. ಎರಡನೇ ವಿಕೆಟ್‌ಗೆ ಆರಂಭಿಕ ಆಟಗಾರ ವಿರಾಟ್ ಕೊಹ್ಲಿ ಹಾಗೂ ದೇವದತ್ ಪಡಿಕ್ಕಲ್ ಭರ್ಜರಿ ಜೊತೆಯಾಟದ ಕಾಣಿಕೆ ನೀಡಿತು. ಈ ಜೋಡಿ 34 ಎಸೆತಗಳಲ್ಲಿ 57 ರನ್ ಸೇರಿಸಿತು. ದೇವದತ್ ಪಡಿಕ್ಕಲ್ 10 ರನ್ ಬಾರಿಸಿ ಔಟ್ ಆದರು.

ಚೇಸಿಂಗ್ ಸ್ಟಾರ್ ಖ್ಯಾತಿಯ ವಿರಾಟ್ ಕೊಹ್ಲಿ ಒಂದು ರನ್‌ಗಳಿಂದ ಅರ್ಧಶತಕ ವಂಚಿತರಾದರು. ಇವರು 34 ಎಸೆತಗಳಲ್ಲಿ 6 ಬೌಂಡರಿ, 1 ಸಿಕ್ಸರ್ ಸಹಾಯದಿಂದ 49 ರನ್ ಸಿಡಿಸಿ ಔಟ್ ಆದರು. ನಾಯಕ ರಜತ್ ಪಾಟಿದಾರ್ 1 ಬೌಂಡರಿ, 3 ಸಿಕ್ಸರ್ ಸಹಾಯದಿಂದ 27, ವಿಕೆಟ್ ಕೀಪರ್ ಬ್ಯಾಟರ್ ಜಿತೇಶ್ ಶರ್ಮಾ 23 ರನ್ ಸಿಡಿಸಿದರು. ಅಂತಿಮವಾಗಿ ಟೀಮ್ ಡೇವಿಡ್ ಅಜೇಯ 14, ರೊಮಾರಿರೋ ಶೆಫರ್ಡ್ ಅಜೇಯ 14 ರನ್ ಸಿಡಿಸಿದರು. ಅಂತಿಮವಾಗಿ 15.1 ಓವರ್‌ಗಳಲ್ಲಿ 5 ವಿಕೆಟ್‌ಗೆ 149 ರನ್ ಸೇರಿಸಿ ಜಯ ಸಾಧಿಸಿತು.
ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಲಕ್ನೋ ತಂಡದ ಆರಂಭ ಸಾಧಾರಣವಾಗಿತ್ತು. ಏಡನ್ ಮಾರ್ಕ್ರಾಮ್ (12) ರನ್ ಕಲೆ ಹಾಕುವಲ್ಲಿ ವಿಫಲರಾದರು. ಮಧ್ಯಮ ಕ್ರಮಾಂಕದಲ್ಲಿ ನಿಕೋಲಸ್ ಪೂರನ್ (1) ರನ್ ಬರ ಎದುರಿಸಿದರು. ಆರಂಭಿಕ ಮಿಚೆಲ್ ಮಾರ್ಷ್ 3 ಬೌಂಡರಿ, 2 ಸಿಕ್ಸರ್ ಸಹಾಯದಿಂದ 40 ರನ್ ಬಾರಿಸಿದರು.

ಮಧ್ಯಮ ಕ್ರಮಾಂಕದಲ್ಲಿ ಆಯುಷ್ ಬದೋನಿ 4 ಬೌಂಡರಿ, 1 ಸಿಕ್ಸರ್ ಸಹಾಯದಿಂದ 38 ರನ್ ಸಿಡಿಸಿದರು. ಯುವ ಆಟಗಾರ ಮುಕುಲ್ ಚೌಧರಿ 3 ಬೌಂಡರಿ, 2 ಸಿಕ್ಸರ್ ನೆರವಿನಿಂದ 39 ರನ್ ಬಾರಿಸಿದರು. ಉಳಿದ ಬ್ಯಾಟರ್‌ಗಳು ರನ್ ಕಲೆ ಹಾಕಲು ವಿಫಲರಾದರು. ಎಲ್‌ಎಸ್‌ಜಿ 20 ಓವರ್‌ಗಳಲ್ಲಿ 146 ರನ್ ಗಳಿಗೆ ಆಲೌಟ್ ಆಯಿತು.
ರಸೀಕ್‌ಗೆ 4 ವಿಕೆಟ್
ಜಮ್ಮು ಕಾಶ್ಮೀರ್ ತಂಡದ 26 ವರ್ಷದ ರಸೀಕ್ ಸಲಂ 24 ರನ್ ನೀಡಿ 4 ವಿಕೆಟ್ ಪಡೆದರು. ಸ್ವಿಂಗ್ ಬೌಲರ್ ಭುವನೇಶ್ವರ್ ಕುಮಾರ್ 27 ರನ್‌ಗೆ 3 ವಿಕೆಟ್ ಕಬಳಿಸಿದರು. ಸ್ಪಿನ್ ಬೌಲರ್ ಕೃನಾಲ್ ಪಾಂಡ್ಯ 2 ವಿಕೆಟ್ ಉರುಳಿಸಿದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications