RCB vs LSG ಪಂದ್ಯದ ಟಾಸ್ ವರದಿ, ಆಡುವ 11ರ ಬಳಗ; ಆರ್‌ಸಿಬಿ ತಂಡದಲ್ಲಿ ಬದಲಾವಣೆ
ಮಂಗಳವಾರ, ಏಪ್ರಿಲ್ 2ರಂದು ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 15ನೇ ಪಂದ್ಯದಲ್ಲಿ ಆತಿಥೇಯ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಮತ್ತು ಲಕ್ನೋ ಸೂಪರ್ ಜೈಂಟ್ಸ್ (ಎಲ್‌ಎಸ್‌ಜಿ) ತಂಡಗಳು ಮುಖಾಮುಖಿಯಾಗಿವೆ.
ಟಾಸ್ ಗೆದ್ದ ಆರ್‌ಸಿಬಿ ತಂಡದ ನಾಯಕ ಫಾಫ್ ಡು ಪ್ಲೆಸಿಸ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಕೆಎಲ್ ರಾಹುಲ್ ನಾಯಕತ್ವದ ಲಕ್ನೋ ಸೂಪರ್ ಕಿಂಗ್ಸ್ ತಂಡ ಮೊದಲು ಬ್ಯಾಟಿಂಗ್ ಮಾಡಲಿದೆ.

ಐಪಿಎಲ್ 2024ರ ಆರಂಭಿಕ ಪಂದ್ಯದಲ್ಲಿ ಆರ್‌ಸಿಬಿ ತಂಡವು ಸಿಎಸ್‌ಕೆ ವಿರುದ್ಧ ಸೋಲಿನೊಂದಿಗೆ ಅಭಿಯಾನ ಆರಂಭಿಸಿತು. ನಂತರ, ಪಂಜಾಬ್ ಕಿಂಗ್ಸ್ ವಿರುದ್ಧದ ಎರಡನೇ ಪಂದ್ಯದಲ್ಲಿ ಅದ್ಭುತ ಶೈಲಿಯಲ್ಲಿ ಪುಟಿದೇಳುವ ಮೂಲಕ ಗೆಲುವಿನ ಟ್ರ್ಯಾಕ್‌ಗೆ ಮರಳಿತು. ಮೂರನೇ ಪಂದ್ಯದಲ್ಲಿ ಕೆಕೆಆರ್ ತಂಡದ ವಿರುದ್ಧ ಹೀನಾಯ ಸೋಲಿನೊಂದಿಗೆ ಆರ್‌ಸಿಬಿ ತಂಡ ಮತ್ತೆ ಹಳಿತಪ್ಪಿತು.
ಇಂದಿನ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಗೆಲ್ಲುವ ಮೂಲಕ ಅಂಕಪಟ್ಟಿಯಲ್ಲಿ ಮೇಲೇಳಲು ಆರ್‌ಸಿಬಿ ತಂಡ ಹೆಚ್ಚು ಪ್ರಯತ್ನ ಪಡಲಿದೆ. ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಹ್ಯಾಟ್ರಿಕ್ ಅರ್ಧಶತಕಗಳ ಮೇಲೆ ಕಣ್ಣಿಟ್ಟಿದ್ದಾರೆ.
ಮತ್ತೊಂದೆಡೆ, ಲಕ್ನೋ ಸೂಪರ್ ಜೈಂಟ್ಸ್ ತಂಡ ತನ್ನ ಗೆಲುವಿನ ಓಟ ಮುಂದುವರಿಸುವ ಗುರಿ ಹೊಂದಿದ್ದು, ಇತ್ತೀಚೆಗೆ ಪಂಜಾಬ್ ಕಿಂಗ್ಸ್ ವಿರುದ್ಧ ತವರಿನಲ್ಲಿ ಅದ್ಭುತ ಪ್ರದರ್ಶನ ನೀಡಿ 21 ರನ್‌ಗಳಿಂದ ಗೆಲುವು ಸಾಧಿಸಿದ್ದರು.
ಆರ್‌ಸಿಬಿ ತಂಡ ಆಡಿದ ಮೂರು ಪಂದ್ಯಗಳಲ್ಲಿ ಒಂದು ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಒಂಬತ್ತನೇ ಸ್ಥಾನದಲ್ಲಿದ್ದರೆ, ಲಕ್ನೋ ಸೂಪರ್ ಜೈಂಟ್ಸ್ ಆಡಿದ ಎರಡು ಪಂದ್ಯಗಳಲ್ಲಿ ಒಂದು ಗೆಲುವಿನೊಂದಿಗೆ ಆರನೇ ಸ್ಥಾನದಲ್ಲಿದೆ.
ಆರ್‌ಸಿಬಿ vs ಎಲ್‌ಎಸ್‌ಜಿ ಪಂದ್ಯದ ಟಿವಿ, ಲೈವ್ ಸ್ಟ್ರೀಮಿಂಗ್ ಮಾಹಿತಿ
ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವಿನ ಪಂದ್ಯವನ್ನು ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರಪ್ರಸಾರ ಮಾಡಲಾಗುತ್ತದೆ. ಮೊಬೈಲ್‌ನಲ್ಲಿ ಪಂದ್ಯವನ್ನು ವೀಕ್ಷಿಸಲು ಬಯಸುವ ವೀಕ್ಷಕರು JioCinema ಮೊಬೈಲ್ ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ಲೈವ್ ಸ್ಟ್ರೀಮಿಂಗ್ ನೋಡಬಹುದು
ಆರ್‌ಸಿಬಿ vs ಎಲ್‌ಎಸ್‌ಜಿ ಸಂಭಾವ್ಯ ಆಡುವ 11ರ ಬಳಗ
ರಾಯಲ್ ಚಾಲೆಂಜರ್ಸ್ ಬೆಂಗಳೂರು: ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಕ್ಯಾಮೆರಾನ್ ಗ್ರೀನ್, ಗ್ಲೆನ್ ಮ್ಯಾಕ್ಸ್‌ವೆಲ್, ಅನುಜ್ ರಾವತ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಯಶ್ ದಯಾಳ್, ರೀಸ್ ಟೋಪ್ಲಿ, ಮೊಹಮ್ಮದ್ ಸಿರಾಜ್, ಮಯಾಂಕ್ ಡಾಗರ್.
ಲಕ್ನೋ ಸೂಪರ್ ಜೈಂಟ್ಸ್: ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಕೆಎಲ್ ರಾಹುಲ್, ದೇವದತ್ ಪಡಿಕ್ಕಲ್, ಆಯುಷ್ ಬದೊನಿ, ನಿಕೋಲಸ್ ಪೂರನ್ (ನಾಯಕ), ಮಾರ್ಕಸ್ ಸ್ಟೊಯಿನಿಸ್, ಕೃನಾಲ್ ಪಾಂಡ್ಯ, ರವಿ ಬಿಷ್ಣೋಯ್, ಯಶ್ ಠಾಕೂರ್, ಮಯಾಂಕ್ ಯಾದವ್, ನವೀನ್ ಉಲ್-ಹಕ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications