RCB vs LSG: ಟಾಸ್ ಗೆದ್ದ ಆರ್‌ಸಿಬಿ ಫೀಲ್ಡಿಂಗ್ ಆಯ್ಕೆ
18ನೇ ಆವೃತ್ತಿಯ ಐಪಿಎಲ್‌ನ ಲೀಗ್ ಹಂತದ ಕೊನೆಯ ಪಂದ್ಯ ಲಕ್ನೋನ ಏಕಾನ ಮೈದಾನದಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಕಾದಾಟ ನಡೆಸಲಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್‌ಸಿಬಿ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ಈ ಪಂದ್ಯದಲ್ಲಿ ಆರ್‌ಸಿಬಿ ತಂಡದ ಸ್ಟಾರ್ ಆಟಗಾರ ಟೀಮ್ ಡೇವಿಡ್ ವಂಚಿತರಾಗಿದ್ದಾರೆ. ಈ ಪಂದ್ಯದಲ್ಲಿ ಜಯ ಸಾಧಿಸುವುದು ಆರ್‌ಸಿಬಿಗೆ ಅನಿವಾರ್ಯ.
ಆರ್‌ಸಿಬಿ ಪ್ರಸಕ್ತ ಲೀಗ್‌ನಲ್ಲಿ ಅಮೋಘ ಪ್ರದರ್ಶನ ನೀಡುತ್ತಿದೆ. ಈ ಲೀಗ್‌ನಲ್ಲಿ ಆರ್‌ಸಿಬಿ ಕ್ವಾಲಿಫೈಯರ್ ಪಂದ್ಯವನ್ನು ಆಡುವತ್ತ ಚಿತ್ತ ನೆಟ್ಟಿದೆ. ಈ ವೇಳೆ ಆರ್‌ಸಿಬಿ ಪಂದ್ಯ ಈ ಪಂದ್ಯದಲ್ಲಿ ಜಯ ಸಾಧಿಸುವುದು ಅನಿವಾರ್ಯ. ಸದ್ಯ ಆರ್‌ಸಿಬಿ ಬುಟ್ಟಿಯಲ್ಲಿ 17 ಅಂಕಗಳು ಇದ್ದು, ಈ ಪಂದ್ಯವನ್ನು ಗೆದ್ದಲ್ಲಿ ಆರ್‌ಸಿಬಿ ಅಂಕಗಳು 19 ಆಗುತ್ತವೆ. ಹೀಗಾಗಿ ಆರ್‌ಸಿಬಿ ಮೊದಲೆರಡು ಸ್ಥಾನಕ್ಕಾಗಿ ಪೈಪೋಟಿ ನಡೆಸಬಹುದಾಗಿದೆ. ಹೀಗಾಗಿ ಆರ್‌ಸಿಬಿ ಲೀಗ್ ಹಂತದ ಕೊನೆಯ ಪಂದ್ಯ ಮಹತ್ವದಾಗಿದೆ.

ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುವ ವೇಳೆ ಗಾಯಕ್ಕೆ ತುತ್ತಾಗಿದ್ದ ಆರ್‌ಸಿಬಿ ತಂಡದ ಸ್ಟಾರ್ ಆಟಗಾರ ಟೀಮ್ ಡೇವಿಡ್, ಲೀಗ್ ಹಂತದ ಕೊನೆಯ ಪಂದ್ಯವನ್ನು ಆಡುತ್ತಿಲ್ಲ. ಆದರೆ ಇವರ ಬದಲಿಗೆ ಇಂಗ್ಲೆಂಡ್ ತಂಡದ ಲಿಯಾಮ್ ಲಿವಿಂಗ್‌ಸ್ಟೋನ್ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಜೋಶ್ ಹ್ಯಾಜಲ್‌ವುಡ್ ಇನ್ನು ಸಂಪೂರ್ಣ ಫಿಟ್ ಆಗದೇ ಇರುವ ಕಾರಣ ಇವರ ಬದಲಿಗೆ ನುವಾನ್ ತುಷಾರ ಬೌಲಿಂಗ್ ಮಾಡುವುದನ್ನು ಕಾಣಬಹುದಾಗಿದೆ.
ರಜತ್ ಪಾಟಿದಾರ್ ಇಂಪ್ಯಾಕ್ಟ್ ಪ್ಲೇಯರ್
ಗಾಯದ ಸಮಸ್ಯೆಯಿಂದ ಬಳಲುತ್ತಿರುವ ರಜತ್ ಪಾಟಿದಾರ್ ಫೀಲ್ಡಿಂಗ್ ಮಾಡುವ ವೇಳೆ ಮೈದಾನಕ್ಕೆ ಇಳಿಯುವುದಿಲ್ಲ. ಇವರು ಇಂಪ್ಯಾಕ್ಟ್ ಪ್ಲೇಯರ್ ಆಗಿ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಈ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡಿ ಜಯ ಸಾಧಿಸುವ ಪ್ಲ್ಯಾನ್ ಆರ್‌ಸಿಬಿ ತಂಡದ್ದಾಗಿದೆ.
ಎಲ್‌ಎಸ್‌ಜಿ ತಂಡ: ರಿಷಭ್ ಪಂತ್ (ವಿಕೆಟ್ ಕೀಪರ್, ಕ್ಯಾಪ್ಟನ್), ನಿಕೋಲಸ್ ಪೂರನ್, ಮಿಚೆಲ್ ಮಾರ್ಷ್, ಮ್ಯಾಥ್ಯೂ ಬ್ರೀಟ್ಜ್ಕೆ, ಆಯುಷ್ ಬಡೋನಿ, ಅಬ್ದುಲ್ ಸಮದ್, ಹಿಮ್ಮತ್ ಸಿಂಗ್, ಶಹಬಾಜ್ ಅಹ್ಮದ್, ದಿಗ್ವೇಶ್ ರಾಠಿ, ಅವೇಶ್ ಖಾನ್, ವಿಲಿಯಂ ಓ'ರೂರ್ಕ್.
ಆರ್‌ಸಿಬಿ ತಂಡ: ವಿರಾಟ್ ಕೊಹ್ಲಿ, ಫಿಲ್ ಸಾಲ್ಟ್, ಮಯಾಂಕ್ ಅಗರ್‌ವಾಲ್, ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ, ರೊಮಾರಿಯೊ ಶೆಫರ್ಡ್, ನುವಾನ್ ತುಷಾರ, ಯಶ್ ದಯಾಳ್, ಭುವನೇಶ್ವರ್ ಕುಮಾರ್, ಕೃನಾಲ್ ಪಾಂಡ್ಯ, ಸುಯೇಶ್ ಶರ್ಮಾ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications