RCB vs LSG: ತವರಿನಲ್ಲಿ ಹ್ಯಾಟ್ರಿಕ್ ಗೆಲುವಿನ ನಗೆ ಬೀರುವ ಕನಸಿನಲ್ಲಿ ಬೆಂಗಳೂರು
19ನೇ ಆವೃತ್ತಿಯ ಐಪಿಎಲ್‌ನ 23ನೇ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಹಾಗೂ ಲಕ್ನೋ ಸೂಪರ್ ಜೈಂಟ್ಸ್ (ಎಲ್‌ಎಸ್‌ಜಿ) ತಂಡಗಳು ಕಾದಾಟ ನಡೆಸಲಿವೆ. ಈ ಪಂದ್ಯದಲ್ಲಿ ಜಯ ಸಾಧಿಸಿ ಅಂಕ ಪಟ್ಟಿಯಲ್ಲಿ ಬಡ್ತಿ ಪಡೆಯಲು ಉಭಯ ತಂಡಗಳು ಪ್ಲ್ಯಾನ್ ಮಾಡಿಕೊಂಡಿವೆ. ಲೀಗ್‌ನ ಐದನೇ ಪಂದ್ಯದಲ್ಲಿ ಜಯ ಸಾಧಿಸಿ ಎರಡನೇ ಸ್ಥಾನಕ್ಕೆ ಬಡ್ತಿ ಪಡೆಯುವ ಆಸೆ ಆರ್‌ಸಿಬಿ ತಂಡದ್ದಾಗಿದೆ.
ಆರ್‌ಸಿಬಿ ಹಾಗೂ ಎಲ್‌ಎಸ್‌ಜಿ ತಂಡಗಳಲ್ಲಿ ಸ್ಟಾರ್ ಆಟಗಾರರ ದಂಡೇ ಇದೆ. ಪಂದ್ಯದ ಗತಿಯನ್ನೇ ಬದಲಿಸಬಲ್ಲ ಆಟಗಾರರು ಇದ್ದಾರೆ. ಉಭಯ ತಂಡಗಳು ಈಗಾಗಲೇ ಐಪಿಎಲ್‌ನಲ್ಲಿ ತಲಾ 6 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಆರ್‌ಸಿಬಿ 4 ಪಂದ್ಯಗಳನ್ನು ಗೆದ್ದಿದ್ದರೆ, ಎಲ್‌ಎಸ್‌ಜಿ 2 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಬೆಂಗಳೂರಿನ ಎಂ ಚಿನ್ನಸ್ವಾಮಿ ಮೈದಾನದಲ್ಲಿ ಆರ್‌ಸಿಬಿ ಈ ಲೀಗ್‌ನಲ್ಲಿ ಅಮೋಘ ಪ್ರದರ್ಶನ ನೀಡಿದೆ. ತವರಿನಲ್ಲಿ ಹ್ಯಾಟ್ರಿಕ್ ಗೆಲುವಿನ ನಗೆ ಬೀರಲು ಪ್ಲ್ಯಾನ್ ಮಾಡಿಕೊಂಡಿದೆ.

ಆರ್‌ಸಿಬಿ ತಂಡದ ಆರಂಭಿಕ ಆಟಗಾರರು ಭರ್ಜರಿ ಫಾರ್ಮ್‌ನಲ್ಲಿದ್ದಾರೆ. ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಆರ್‌ಸಿಬಿ ಟಾಪ್ ಆರ್ಡರ್ ಬ್ಯಾಟರ್‌ಗಳು ಮುಂಬೈ ಇಂಡಿಯನ್ಸ್ ಬೌಲರ್‌ಗಳ ಬೆವರು ಇಳಿಸಿದ್ದರು. ಆರಂಭಿಕ ಆಟಗಾರರಾದ ಫಿಲ್ ಸಾಲ್ಟ್ ಹಾಗೂ ವಿರಾಟ್ ಕೊಹ್ಲಿ ಅಮೋಘ ಫಾರ್ಮ್‌ನಲ್ಲಿದ್ದಾರೆ. ಇವರು ಕಳೆದ ಪಂದ್ಯದಲ್ಲಿ ಅಬ್ಬರದ ಬ್ಯಾಟಿಂಗ್ ನಡೆಸಿ ತಂಡಕ್ಕೆ ಆಧಾರವಾಗಿದ್ದರು. ತವರಿನ ಪಂದ್ಯದಲ್ಲಿ ಅಭಿಮಾನಿಗಳಿಗೆ ಈ ಆಟಗಾರರು ಹಬ್ಬದೂಟವನ್ನು ಉಣಬಡಿಸುವ ಪ್ಲ್ಯಾನ್ ಮಾಡಿಕೊಂಡಿದ್ದಾರೆ.
ರಜತ್ ಪಾಟಿದಾರ್ ಆಕರ್ಷಣೆ
ನಾಯಕ ರಜತ್ ಪಾಟಿದಾರ್ ಅವರು ಭರ್ಜರಿ ಫಾರ್ಮ್‌ನಲ್ಲಿದ್ದು, ಇವರ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಇವರು ಕಳೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಅಬ್ಬರದ ಬ್ಯಾಟಿಂಗ್ ನಡೆಸಿ ತಂಡಕ್ಕೆ ನೆರವಾಗಿದ್ದರು. ಇನ್ನು ಮಧ್ಯಮ ಕ್ರಮಾಂಕದಲ್ಲಿ ದೇವದತ್ ಪಡಿಕ್ಕಲ್, ಜಿತೇಶ್ ಶರ್ಮಾ, ಟೀಮ್ ಡೇವಿಡ್ ಪರಿಸ್ಥಿತಿಗೆ ಅನುಗುಣವಾಗಿ ಬ್ಯಾಟ್ ಮಾಡುವ ಅನಿವಾರ್ಯತೆ ಇದೆ.
ಆಲ್‌ರೌಂಡರ್ ರೊಮಾರಿಯೋ ಶೆಫರ್ಡ್, ಕೃನಾಲ್ ಪಾಂಡ್ಯ ಈ ಇಬ್ಬರೂ ಆಟಗಾರರು ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ತಂಡಕ್ಕೆ ನೆರವಾಗಬಲ್ಲ ಆಟಗಾರರು. ವೇಗದ ಬೌಲಿಂಗ್ ವಿಭಾಗದಲ್ಲಿ ಜೆಕಬ್ ಡಫಿ, ಭುವನೇಶ್ವರ್ ಕುಮಾರ್, ರಸಿಕ್ ಸಲಾಂ ತಮ್ಮ ಬಿಗುವಿನ ದಾಳಿ ನಡೆಸಿ ತಂಡಕ್ಕೆ ನೆರವಾಗಬಲ್ಲರು. ಅಲ್ಲದೆ ರನ್‌ಗಳಿಗೂ ಇವರು ಕಡಿವಾಣ ಹಾಕಬಲ್ಲರು. ಸ್ಪಿನ್ ಬೌಲರ್ ಸುಯಶ್ ಶರ್ಮಾ ತಮ್ಮ ಕಮಾಲ್ ಪ್ರದರ್ಶಿಸಬೇಕಿದೆ. ಅಂದಾಗ ಮಾತ್ರ ತವರಿನಲ್ಲಿ ಮೂರನೇ ಗೆಲುವಿನ ನಗೆ ಬೀರಬಹುದು.

ರಿಷಭ್ ಪಂತ್ ಮೇಲೆ ಒತ್ತಡ
ಎಲ್‌ಎಸ್‌ಜಿ ತಂಡದ ನಾಯಕ ತಂಡ ತಮ್ಮ ಮೇಲೆ ಇಟ್ಟ ನಂಬಿಕೆಗೆ ಪೂರಕವಾಗಿ ಬ್ಯಾಟ್ ಮಾಡುವಲ್ಲಿ ವಿಫಲರಾಗಿದ್ದಾರೆ. ಇವರು ಕಳೆದ ಪಂದ್ಯದಲ್ಲಿ ಜವಾಬ್ದಾರಿಯುತ ಬ್ಯಾಟಿಂಗ್ ನಡೆಸುವಲ್ಲಿ ವಿಫಲರಾಗಿದ್ದರು. ಆರಂಭಿಕರಾಗಿ ಕಣಕ್ಕೆ ಇಳಿಯುವ ಮಿಚೆಲ್ ಮಾರ್ಷ್, ಏಡನ್ ಮಾರ್ಕ್ರಾಮ್ ಜೋಡಿ ಅಬ್ಬರದ ಬ್ಯಾಟಿಂಗ್ ನಡೆಸಿ ತಂಡಕ್ಕೆ ಆಧಾರವಾಗಬೇಕಿದೆ. ಮಧ್ಯಮ ಕ್ರಮಾಂಕದಲ್ಲಿ ಆಯುಷ್ ಬದೋನಿ, ನಿಕೋಲಸ್ ಪೂರನ್, ಅಬ್ದುಲ್ ಸಮದ್, ಮುಕುಲ್ ಚೌಧರಿ ಭರ್ಜರಿ ಬ್ಯಾಟಿಂಗ್ ನಡೆಸಿ ತಂಡಕ್ಕೆ ನೆರವಾಗಬೇಕಿದೆ. ಅಂದಾಗ ಜಯದ ಕನಸು ನನಸಾಗುತ್ತದೆ.
ಬೌಲಿಂಗ್‌ನಲ್ಲಿ ಮೊಹಮ್ಮದ್ ಶಮಿ ಶಿಸ್ತುಬದ್ಧ ದಾಳಿ ಸಂಘಟಿಸುತ್ತಿದ್ದು ಭರವಸೆ ಹೆಚ್ಚಿದೆ. ಪ್ರಿನ್ಸ್ ಯಾದವ್ ವೇಗದ ಬೌಲಿಂಗ್‌ನಲ್ಲಿ ಮಿಂಚಬಲ್ಲರು. ಸ್ಪಿನ್ ಬೌಲರ್ ದಿಗ್ವೇಶ್ ರಾಠಿ ವಿಕೆಟ್ ಬೇಟೆ ನಡೆಸಬೇಕಿದೆ. ಅಂದಾಗ ಮಾತ್ರ ಗೆಲುವಿನ ಆಸೆ ಫಲಿಸುತ್ತದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications