RCB vs MI: ಮುಂಬೈ ಹಾಗೂ ಬೆಂಗಳೂರು ನಡುವೆ ಬಿಗ್ ಫೈಟ್
19ನೇ ಆವೃತ್ತಿ ಐಪಿಎಲ್‌ನ 20ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಹಾಗೂ ಮುಂಬೈ ಇಂಡಿಯನ್ಸ್ (ಎಂಐ) ತಂಡಗಳು ಭಾನುವಾರ ಕಾದಾಟ ನಡೆಸಲಿವೆ. ಈ ಪಂದ್ಯದಲ್ಲಿ ಗೆಲುವು ದಾಖಲಿಸಿ ಈ ಆವೃತ್ತಿಯಲ್ಲಿ ಮೂರನೇ ಗೆಲುವಿನ ನಗೆ ಬೀರುವ ಯೋಜನೆ ಬೆಂಗಳೂರು ತಂಡದ್ದಾಗಿದೆ. ಎರಡೂ ತಂಡಗಳು ತಮ್ಮ ಹಿಂದಿನ ಪಂದ್ಯಗಳಲ್ಲಿ ರಾಜಸ್ಥಾನ್ ತಂಡದ ವಿರುದ್ಧ ಸೋಲು ಕಂಡಿದ್ದು, ಗೆಲುವಿನ ಟ್ರ್ಯಾಕ್‌ಗೆ ಮರಳಲು ಪ್ಲ್ಯಾನ್ ಮಾಡಿಕೊಂಡಿವೆ.
ಆರ್‌ಸಿಬಿ ಹಾಗೂ ಎಂಐ ತಂಡಗಳು ಕಾದಾಟ ನಡೆಸಲಿವೆ. ಉಭಯ ತಂಡಗಳು ಐಪಿಎಲ್‌ನಲ್ಲಿ ಒಟ್ಟು 34 ಬಾರಿ ಮುಖಾಮುಖಿಯಾಗಿದ್ದು ಆರ್‌ಸಿಬಿ 15 ಪಂದ್ಯಗಳಲ್ಲಿ ಜಯ ಸಾಧಿಸಿದರೆ, ಮುಂಬೈ 19 ಪಂದ್ಯಗಳಲ್ಲಿ ಗೆಲುವು ದಾಖಲಿಸಿದೆ. ಎರಡೂ ತಂಡಗಳು ಸ್ಟಾರ್ ಆಟಗಾರರನ್ನು ಹೊಂದಿದ್ದು ಕದನ ಕುತೂಹಲ ಮೂಡಿಸಿದೆ.

ಆರ್‌ಸಿಬಿ ತಂಡದ ಸ್ಟಾರ್ ಆಟಗಾರ ಫಿಲ್ ಸಾಲ್ಟ್ ಕಳೆದ ಪಂದ್ಯದಲ್ಲಿ ಸ್ಥಿರ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದಾರೆ. ಅಲ್ಲದೆ ಇವರು ಪ್ರಸಕ್ತ ಲೀಗ್‌ನಲ್ಲೂ ರನ್ ಕಲೆ ಹಾಕುವಲ್ಲಿ ಹಿಂದೆ ಬಿದ್ದಿದ್ದಾರೆ. ಹೀಗಾಗಿ ಸಾಲ್ಟ್ ಮೇಲೆ ಒತ್ತಡವಿದೆ. ವಿರಾಟ್ ಕೊಹ್ಲಿ ರನ್ ಕಲೆ ಹಾಕುತ್ತಿದ್ದು ಭರವಸೆ ಹೆಚ್ಚಿದ್ದಾರೆ. ಇನ್ನು ದೇವದತ್ ಪಡಿಕ್ಕಲ್ ಸಹ ಅಮೋಘ ಫಾರ್ಮ್‌ನಲ್ಲಿದ್ದು ಎದುರಾಳಿ ಬೌಲರ್‌ಗಳನ್ನು ಕಾಡಬಲ್ಲರು.
ರಜತ್ ಆಕರ್ಷಣೆ
ಮಧ್ಯಮ ಕ್ರಮಾಂಕದಲ್ಲಿ ರಜತ್ ಪಾಟಿದಾರ್ ತಂಡಕ್ಕೆ ಆಧಾರವಾಗಬಲ್ಲ ಆಟಗಾರ. ಇವರು ಸ್ಪಿನ್ ಬೌಲರ್‌ಗಳಿಗೆ ಸ್ಥಿರವಾಗಿ ಬ್ಯಾಟಿಂಗ್ ಮಾಡುತ್ತಿದ್ದಾರೆ. ಅಲ್ಲದೆ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಅರ್ಧಶತಕ ಬಾರಿಸಿ ಮಿಂಚಿದ್ದು, ಇವರ ಮೇಲೆ ಭರವಸೆ ಇದೆ. ಇನ್ನು ಮಧ್ಯಮ ಕ್ರಮಾಂಕದಲ್ಲಿ ಜಿತೇಶ್ ಶರ್ಮಾ, ಟೀಮ್ ಡೇವಿಡ್ ತಂಡದ ಅಗತ್ಯಕ್ಕೆ ತಕ್ಕಂತೆ ಬ್ಯಾಟಿಂಗ್ ಮಾಡಬೇಕಿದೆ. ಅಂದಾಗ ಮೂರನೇ ಗೆಲುವಿನ ಕನಸು ನನಸಾಗುತ್ತದೆ.
ಜೋಶ್ ಹ್ಯಾಜಲ್‌ವುಡ್ ತಂಡಕ್ಕೆ ಕಮ್‌ಬ್ಯಾಕ್ ಮಾಡಿದ್ದು ತಂಡದ ಬೌಲಿಂಗ್ ಬಲವನ್ನು ಹೆಚ್ಚಿಸಿದೆ. ಇನ್ನು ಇವರಿಗೆ ಭುವನೇಶ್ವರ್ ಕುಮಾರ್, ರೊಮಾರಿಯೋ ಶೆಫರ್ಡ್ ಉತ್ತಮ ಸಾಥ್ ನೀಡಬೇಕಿದೆ. ಕೃನಾಲ್ ಪಾಂಡ್ಯ ತಮ್ಮ ನೈಜ ದಾಳಿ ನಡೆಸಿದರೆ ಬೆಸ್ಟ್. ಸುಯಶ್ ಶರ್ಮಾ ಪ್ಲೇಯಿಂಗ್ ಇಲೆವೆನ್‌ನಲ್ಲಿ ಸ್ಥಾನ ಪಡೆಯುವ ಅನಿವಾರ್ಯತೆ ಇದೆ.

ಅನುಭವಿಗಳ ಬಲ
ಮುಂಬೈ ಇಂಡಿಯನ್ಸ್ ತಂಡದಲ್ಲೂ ಸ್ಟಾರ್ ಆಟಗಾರರ ದಂಡೇ ಇದೆ. ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್, ರಿಯಾನ್ ರಿಕಲ್ಟನ್, ತಿಲಕ್ ವರ್ಮಾ ಟಾಪ್ ಆರ್ಡರ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ತಂಡಕ್ಕೆ ನೆರವಾಗಬಲ್ಲರು. ದೀಪಕ್ ಚಹಾರ್, ಜಸ್ಪ್ರೀತ್ ಬುಮ್ರಾ, ಟ್ರೆಂಟ್ ಬೋಲ್ಟ್, ಶಾರ್ದೂಲ್ ಠಾಕೂರ್ ಬಿಗುವಿನ ದಾಳಿ ನಡೆಸಿ ತಂಡಕ್ಕೆ ನೆರವಾಗಬೇಕಿದೆ. ಅಫ್ಘಾನಿಸ್ತಾನದ ಸ್ಪಿನ್ ಬೌಲರ್ ಎ.ಎಂ. ಗಜನ್‌ಫರ್ ಸ್ಥಿರ ಪ್ರದರ್ಶನ ನೀಡಬೇಕಿದೆ. ಅಂದಾಗ ಗೆಲುವಿನ ಕನಸು ನನಸಾಗುತ್ತದೆ.
ಅಂಕ ಪಟ್ಟಿ
ಆರ್‌ಸಿಬಿ ಆಡಿರುವ 3 ಪಂದ್ಯಗಳಲ್ಲಿ 2 ಜಯ, 1 ಸೋಲು ಕಂಡಿದ್ದು, 4 ಅಂಕಗಳೊಂದಿಗೆ ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಇನ್ನು ಮುಂಬೈ ಇಂಡಿಯನ್ಸ್ ಮೂರು ಪಂದ್ಯಗಳಲ್ಲಿ 1 ಜಯ, 2 ಸೋಲು ಕಂಡಿದ್ದು, ಅಂಕ ಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದೆ.
ಭಾನುವಾರದ ಮೊದಲ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳ ನಡುವಿನ ಹೋರಾಟ ಲಕ್ನೋನಲ್ಲಿ ನಡೆಯಲಿದೆ. ಈ ಟೂರ್ನಿಯಲ್ಲಿ ಲಕ್ನೋ 3ನೇ ಜಯದ ಕನಸು ಕಾಣುತ್ತಿದ್ದರೆ, ಜಿಟಿ 2ನೇ ಗೆಲುವಿನ ಹುಡುಕಾಟದಲ್ಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications