Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

RCB vs MI: ಅಂಕಪಟ್ಟಿಯಲ್ಲಿ ಬಡ್ತಿ ಪಡೆಯುವ ಕನಸಿನಲ್ಲಿ ಆರ್‌ಸಿಬಿ, ನೇರಪ್ರಸಾರ, ಪಿಚ್‌ ವರದಿ, ಪ್ಲೇಯಿಂಗ್ ಇಲೆವೆನ್ ಮಾಹಿತಿ

ರಾಯ್‌ಪುರ್: ರಾಯಲ್‌ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) 19ನೇ ಆವೃತ್ತಿ ಇಂಡಿಯನ್ ಪ್ರೀಮಿಯರ್ ಲೀಗ್‌ (ಐಪಿಎಲ್‌)ನಲ್ಲಿ ಎರಡನೇ ತವರು ರಾಯ್‌ಪುರದಲ್ಲಿ ತನ್ನ ಮೊದಲ ಪಂದ್ಯವನ್ನು ಆಡಲಿದೆ. ಈ ಮೈದಾನದಲ್ಲಿ ಸುಮಾರು ದಶಕದ ಬಳಿಕ ಐಪಿಎಲ್‌ ಪಂದ್ಯ ನಡೆಯಲಿದೆ. ಈ ಪಿಚ್‌ನಲ್ಲಿ ಹೆಚ್ಚು ಟಿ20 ಪಂದ್ಯಗಳು ನಡೆದಿಲ್ಲ. ಆದರೂ ಸಹ ಈ ಪಿಚ್‌ನಲ್ಲಿ ಬ್ಯಾಟರ್‌ಗಳಿಗೆ ಸಹಾಯಕವಾಗುತ್ತದೆ ಎಂದು ನಂಬಲಾಗಿದೆ. ಲೀಗ್‌ ಹಂತದ 54ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡಕ್ಕೆ ಸವಾಲು ಎದುರಿಸಲಿದೆ.

ಉಭಯ ತಂಡಗಳಲ್ಲಿ ಸ್ಟಾರ್ ಆಟಗಾರರು ಇದ್ದು ಎಲ್ಲರ ಚಿತ್ತ ನೆಟ್ಟಿದೆ. ಈ ಪಂದ್ಯದಲ್ಲಿ ಗೆಲುವು ಸಾಧಿಸಿ ಅಂಕಪಟ್ಟಿಯಲ್ಲಿ ಬಡ್ತಿ ಪಡೆಯುವ ಕನಸು ಆರ್‌ಸಿಬಿ ತಂಡದ್ದಾಗಿದೆ. ಮುಂಬೈ ಇಂಡಿಯನ್ಸ್‌ ಸಹ ಈ ಪಂದ್ಯದಲ್ಲಿ ಜಯ ಸಾಧಿಸಿ ಪ್ಲೇ ಆಫ್‌ ಪ್ರವೇಶಿಸುವ ಆಸೆಯನ್ನು ಕಾಣುತ್ತಿದೆ. ಮುಂಬೈ ಪ್ಲೇ ಆಫ್‌ ಪ್ರವೇಶಿಸಲು ಮುಂದಿನ ಎಲ್ಲ ಪಂದ್ಯಗಳನ್ನು ಗೆಲ್ಲಬೇಕಾದ ಅನಿವಾರ್ಯತೆ ಇದೆ. ಅಲ್ಲದೆ ಉಳಿದ ಪಂದ್ಯಗಳ ಮೇಲೂ ಮುಂಬೈ ಕಣ್ಣು ನೆಟ್ಟಿದೆ. ಆರ್‌ಸಿಬಿ ಹ್ಯಾಟ್ರಿಕ್ ಸೋಲಿನ ಭೀತಿಯನ್ನು ಎದುರಿಸುತ್ತಿದೆ. ಮುಂಬೈ ಲಕ್ನೋ ತಂಡವನ್ನು ಮಣಿಸಿದ್ದು ಆತ್ಮವಿಶ್ವಾಸದಿಂದ ಕಣಕ್ಕೆ ಇಳಿಯಲಿದೆ.

RCB vs MI

ಪಿಚ್ ವರದಿ ಏನು ಹೇಳುತ್ತದೆ?

ಶನಿವಾರ ಸುರಿದ ಭಾರಿ ಮಳೆಯು ಪಿಚ್‌ನ ಸ್ವರೂಪದ ಮೇಲೆ ಪರಿಣಾಮ ಬೀರಬಹುದು. ಈ ಪಿಚ್ ಎರಡೂ ತಂಡಗಳಿಗೆ ಸ್ವಲ್ಪ ಮಟ್ಟಿಗಿನ ಸವಾಲಾಗಿರಲಿದೆ. ಈ ಪಿಚ್‌ ಸಾಂಪ್ರದಾಯಿಕವಾಗಿ ನಿಧಾನಗತಿಯಿಂದ ಕೂಡಿರುತ್ತದೆ. ಆದರೆ ಈ ಬಾರಿ ಇದು ಬ್ಯಾಟಿಂಗ್‌ಗೆ ಉತ್ತಮವಾಗಿರಲಿದೆ ಎಂದು ನಿರೀಕ್ಷಿಸಲಾಗಿದೆ.

ಅಂಕಪಟ್ಟಿಯಲ್ಲಿ ಉಭಯ ತಂಡಗಳಿಗೆ ಯಾವ ಸ್ಥಾನ?

ಆರ್‌ಸಿಬಿ ಆಡಿದ 10 ಪಂದ್ಯಗಳಲ್ಲಿ 6 ಜಯ, 4 ಸೋಲು ಕಂಡಿದ್ದು, 12 ಅಂಕಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದೆ. ಮುಂಬೈ 10 ಪಂದ್ಯಗಳಲ್ಲಿ 3 ಜಯ ಸಾಧಿಸಿದ್ದು, 6 ಅಂಕಗಳೊಂದಿಗೆ 9ನೇ ಸ್ಥಾನದಲ್ಲಿದೆ.


19ನೇ ಆವೃತ್ತಿ ಐಪಿಎಲ್‌ನಲ್ಲಿ ಆರ್‌ಸಿಬಿ ಪರ ಸ್ಥಿರ ಪ್ರದರ್ಶನ ನೀಡಿದ ಆಟಗಾರರು ಯಾರು?

ಬೆಂಗಳೂರು ತಂಡದ ಪರ ಸ್ಥಿರ ಬ್ಯಾಟಿಂಗ್ ಪ್ರದರ್ಶನ ನೀಡಿದ ವಿರಾಟ್‌ ಕೊಹ್ಲಿ ಆಡಿದ 10 ಪಂದ್ಯಗಳಲ್ಲಿ 379 ರನ್‌ ಕಲೆ ಹಾಕಿದ್ದಾರೆ. ಭುವನೇಶ್ವರ್ ಕುಮಾರ್ 17 ವಿಕೆಟ್‌ ಪಡೆದಿದ್ದಾರೆ.

ಆರ್‌ಸಿಬಿ ತಂಡದ ಯಾರಿಗೆಲ್ಲಾ ಅವಕಾಶವನ್ನು ನೀಡಬಹುದು?

ವಿರಾಟ್ ಕೊಹ್ಲಿ, ಜಾಕೋಬ್ ಬೆಥೆಲ್, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್ (ನಾಯಕ), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಟಿಮ್ ಡೇವಿಡ್, ರೊಮಾರಿಯೋ ಶೆಫರ್ಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಜೋಶ್ ಹ್ಯಾಜಲ್‌ವುಡ್, ಸುಯಶ್ ಶರ್ಮಾ, ರಸಿಖ್ ಸಲಾಮ್.

ಮುಂಬೈ ಇಂಡಿಯನ್ಸ್ ಪ್ಲೇಯಿಂಗ್‌ ಇಲೆವೆನ್‌ ಹೇಗಿರಲಿದೆ?

ರೋಹಿತ್ ಶರ್ಮಾ, ರಯಾನ್ ರಿಕಲ್ಟನ್ (ವಿಕೆಟ್ ಕೀಪರ್), ನಮನ್ ಧೀರ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ (ನಾಯಕ)/ಕೊರ್ಬಿನ್ ಬಾಷ್, ರಾಬಿನ್ ಮಿಂಜ್/ರಾಜ್ ಬಾವಾ, ದೀಪಕ್ ಚಾಹರ್, ಟ್ರೆಂಟ್ ಬೌಲ್ಟ್, ಎ ಎಮ್ ಗಜನ್‌ಫರ್, ಜಸ್ಪ್ರೀತ್ ಬುಮ್ರಾ, ರಘು ಶರ್ಮಾ.

ಆರ್‌ಸಿಬಿ, ಮುಂಬೈ ನಡುವಣ ಪಂದ್ಯವನ್ನು ಎಲ್ಲಿ ವೀಕ್ಷಿಸಬಹುದು?

19ನೇ ಆವೃತ್ತಿ ಐಪಿಎಲ್‌ನ 54ನೇ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ ವರ್ಕ್‌ನಲ್ಲಿ ನೇರ ಪ್ರಸಾರದಲ್ಲಿ ವೀಕ್ಷಿಸಬಹುದು. ಇನ್ನು ಆನ್‌ಲೈನ್‌ನಲ್ಲಿ ಜಿಯೋ ಹಾಟ್‌ ಸ್ಟಾರ್‌ನಲ್ಲಿ ನೋಡಬಹುದು.

ಪಂದ್ಯ ಆರಂಭವಾಗುವುದು ಯಾವಾಗ?

ಆರ್‌ಸಿಬಿ ಹಾಗೂ ಮುಂಬೈ ಇಂಡಿಯನ್ಸ್ ನಡುವಣ ಪಂದ್ಯ ಸಂಜೆ 7.30ಕ್ಕೆ ನಡೆಯಲಿದೆ. ಪಂದ್ಯ ಆರಂಭಕ್ಕೂ ಅರ್ಧಗಂಟೆ ಮುನ್ನ ಟಾಸ್ ನಡೆಯಲಿದೆ.

Story first published: Sunday, May 10, 2026, 8:05 [IST]
Other articles published on May 10, 2026
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+