Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

RCB vs MI: ಮುಂಬೈಗೆ ಮಾಡು ಇಲ್ಲವೇ ಮಡಿ ಪಂದ್ಯ; ಆರ್‌ಸಿಬಿಗೆ ಪ್ಲೇ ಆಫ್‌ ಕನಸು

ರಾಯ್‌ಪುರ್‌: 19ನೇ ಆವೃತ್ತಿ ಇಂಡಿಯನ್ ಪ್ರೀಮಿಯರ್ ಲೀಗ್ ( ಐಪಿಎಲ್)ನ 54ನೇ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಹಾಗೂ ಐದು ಬಾರಿ ಐಪಿಎಲ್ ಚಾಂಪಿಯನ್ಸ್ ಮುಂಬೈ ಇಂಡಿಯನ್ಸ್‌ ಕಾದಾಟ ನಡೆಸಲಿವೆ. ಉಭಯ ತಂಡಗಳಲ್ಲಿ ಸ್ಟಾರ್ ಆಟಗಾರರು ಇದ್ದು, ಭಾನುವಾರ ಪಂದ್ಯದ ರೋಚಕತೆ ಹೆಚ್ಚಿಸಿದೆ.

ಆರ್‌ಸಿಬಿ, ಎಂಐ ತಂಡಗಳು ಈಗಾಗಲೇ ಐಪಿಎಲ್‌ನಲ್ಲಿ ಒಟ್ಟಾರೆ 35 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ಆರ್‌ಸಿಬಿ 16 ಪಂದ್ಯಗಳಲ್ಲಿ ಜಯ ಸಾಧಿಸಿದರೆ, ಮುಂಬೈ 19 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. 19ನೇ ಆವೃತ್ತಿಯ ಐಪಿಎಲ್‌ನಲ್ಲಿ ಉಭಯ ತಂಡಗಳು ಲೀಗ್‌ನಲ್ಲಿ ಒಂದು ಬಾರಿ ಎದುರಾಗಿದ್ದವು. ಮುಂಬೈನಲ್ಲಿ ನಡೆದಿದ್ದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ್ದ ಆರ್‌ಸಿಬಿ 20 ಓವರ್‌ಗಳಲ್ಲಿ 2 ವಿಕೆಟ್‌ಗೆ 240 ರನ್‌ ಸೇರಿಸಿತ್ತು. ಇದಕ್ಕೆ ಉತ್ತರವಾಗಿ ಬ್ಯಾಟ್ ಮಾಡಿದ್ದ ಮುಂಬೈ 20 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 222 ರನ್‌ ಕಲೆ ಹಾಕಿತ್ತು. ಆರ್‌ಸಿಬಿ ಈ ಪಂದ್ಯವನ್ನು 18 ರನ್‌ಗಳಿಂದ ಗೆದ್ದು ಕೊಂಡಿತ್ತು.

RCB vs MI

ಆರ್‌ಸಿಬಿ ಲೀಗ್‌ ಹಂತದಲ್ಲಿ ಆರಂಭದಲ್ಲಿ ಭರ್ಜರಿ ಪ್ರದರ್ಶನ ನೀಡಿತ್ತು. ಆದರೆ ಕೊನೆಯ ಎರಡು ಪಂದ್ಯಗಳನ್ನು ಸೋತು ಹ್ಯಾಟ್ರಿಕ್‌ ಸೋಲಿನ ಭೀತಿಯನ್ನು ಎದುರಿಸುತ್ತಿದೆ. ಮುಂಬೈ ಇಂಡಿಯನ್ಸ್, ಎಲ್‌ಎಸ್‌ಜಿ ತಂಡದ ವಿರುದ್ಧ ಜಯ ಸಾಧಿಸಿದೆ. ಈ ಪಂದ್ಯ ಎರಡೂ ತಂಡಗಳಿಗೆ ಮಹತ್ವದಾಗಿದೆ. ಆರ್‌ಸಿಬಿ ಈ ಪಂದ್ಯದಲ್ಲಿ ಜಯ ಸಾಧಿಸಿದರೆ, ಪ್ಲೇ ಆಫ್‌ ಹತ್ತಿರ ಬಂದು ನಿಲ್ಲುತ್ತದೆ.

ರಜತ್‌ ಪಾಟಿದಾರ್ ಆಕರ್ಷಣೆ

ಆರ್‌ಸಿಬಿ ತಂಡದ ಆರಂಭಿಕರಾದ ಜಾಕೊಬ್ ಬೆಥೆಲ್‌ ಹಾಗೂ ವಿರಾಟ್ ಕೊಹ್ಲಿ (379 ರನ್) ಉತ್ತಮ ಆರಂಭವನ್ನು ನೀಡಬೇಕಿದೆ. ಕಳೆದ ಪಂದ್ಯದಲ್ಲಿ ರನ್‌ ಕಲೆ ಹಾಕುವಲ್ಲಿ ಎಡವಿದ್ದ ವಿರಾಟ್‌, ಮುಂಬೈ ವಿರುದ್ಧ ಅಬ್ಬರಿಸುವ ಅನಿವಾರ್ಯತೆ ಇದೆ. ಮಧ್ಯಮ ಕ್ರಮಾಂಕದಲ್ಲಿ ದೇವದತ್ ಪಡಿಕ್ಕಲ್‌ (316 ರನ್) ಹಾಗೂ ನಾಯಕ ರಜತ್ ಪಾಟಿದಾರ್ (318 ರನ್‌) ರನ್‌ ವೇಗವನ್ನು ಹಿಗ್ಗಿಸುವ ಅನಿವಾರ್ಯತೆ ಇದೆ. ಟ್ರಾವಿಸ್ ಹೆಡ್‌, ಜಿತೇಶ್‌ ಶರ್ಮಾ ಪರಿಸ್ಥಿತಿಗೆ ಅನುಗುಣವಾಗಿ ಬ್ಯಾಟ್ ಮಾಡಬೇಕಿದೆ.

RCB vs MI

ಸ್ವಿಂಗ್‌ ಬೌಲರ್‌ ಭುವನೇಶ್ವರ್ ಕುಮಾರ್‌ (17 ವಿಕೆಟ್‌) ಹಾಗೂ ಜೋಶ್‌ ಹ್ಯಾಜಲ್‌ವುಡ್ ಹೊಸ ಚೆಂಡಿನೊಂದಿಗೆ ಎದುರಾಳಿ ಬ್ಯಾಟರ್‌ಗಳ ರನ್‌ ದಾಹಕ್ಕೆ ಬ್ರೇಕ್ ಹಾಕಬಲ್ಲರು. ಮಧ್ಯದ ಓವರ್‌ಗಳಲ್ಲಿ ರಸಿಕ್ ಸಲಾಂ ದಾರ್‌, ಆಲ್‌ರೌಂಡರ್ ಕೃನಾಲ್ ಪಾಂಡ್ಯ, ಸುಯಶ್‌ ಶರ್ಮಾ ಶಿಸ್ತು ಬದ್ಧ ದಾಳಿ ನಡೆಸಬೇಕಿದೆ. ಎಂದಾಗ ಮಾತ್ರ 2 ಅಂಕದ ಕನಸು ನನಸಾಗುತ್ತದೆ.

ಮುಂಬೈ ತಂಡವನ್ನು ಮುನ್ನಡೆಸುವುದು ಯಾರು?

ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇವರು ಆರ್‌ಸಿಬಿ ವಿರುದ್ಧದ ಪಂದ್ಯದಲ್ಲಿ ತಂಡವನ್ನು ಮುನ್ನಡೆಸುತ್ತಾರೋ ಇಲ್ಲವೋ ಎಂಬುದು ಇನ್ನು ಸ್ಪಷ್ಟತೆ ಇಲ್ಲ. ಎಲ್‌ಎಸ್‌ಜಿ ವಿರುದ್ಧದ ಪಂದ್ಯದಲ್ಲಿ ತಂಡವನ್ನು ಮುನ್ನಡೆಸಿದ್ದ ಸೂರ್ಯಕುಮಾರ್ ಯಾದವ್ ಸಹ ಆರ್‌ಸಿಬಿ ಪಂದ್ಯದಲ್ಲಿ ಅಲಭ್ಯರಾಗುವ ಸಾಧ್ಯತೆ ಇದೆ. ಹೀಗಾಗಿ ಮುಂಬೈ ತಂಡವನ್ನು ಮುನ್ನಡೆಸುವುದು ಯಾರು? ಎಂಬ ಪ್ರಶ್ನೆ ಉದ್ಭವಿಸಿದೆ.

ಎಲ್‌ಎಸ್‌ಜಿ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿರುವ ರೋಹಿತ್ ಶರ್ಮಾ, ರಯಾನ್‌ ರಿಕಲ್ಟನ್‌ ಅವರ ಮೇಲೆ ಭರವಸೆ ಹೆಚ್ಚಿದೆ. ತಿಲಕ್ ವರ್ಮಾ, ನಮನ್‌ ಧೀರ್, ವಿಲ್ ಜಾಕ್ಸ್‌ ಸ್ಥಿರ ಬ್ಯಾಟಿಂಗ್ ಪ್ರದರ್ಶನ ನೀಡಬೇಕಿದೆ. ವೇಗದ ಬೌಲಿಂಗ್ ವಿಭಾಗದಲ್ಲಿ ದೀಪಕ್ ಚಹಾರ್, ಜಸ್ಪ್ರೀತ್ ಬುಮ್ರಾ, ಕಾರ್ಬಿನ್ ಬೊಷ್ ವಿಕೆಟ್‌ ಬೇಟೆ ನಡೆಸಬೇಕಿದೆ. ಎ.ಎಂ. ಗಜನ್‌ಫರ್ ಸ್ಪಿನ್ ಬೌಲಿಂಗ್ ದಾಳಿಯ ಮೂಲಕ ಆರ್‌ಸಿಬಿ ಬ್ಯಾಟರ್‌ಗಳನ್ನು ಕಾಡಬೇಕಿದೆ.

Story first published: Saturday, May 9, 2026, 18:15 [IST]
Other articles published on May 9, 2026
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+