Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Virat Kohli: ನೆಟ್ಸ್‌ನಲ್ಲಿ ಕೊಹ್ಲಿಅಬ್ಬರಕ್ಕೆ ತಬ್ಬಿಬ್ಬಾದ ನಾಯಕ ಫಾಫ್ ಡು ಪ್ಲೆಸಿಸ್: ವಿಡಿಯೋ

16ನೇ ಆವೃತ್ತಿಯ ಐಪಿಎಲ್ ಟೂರ್ನಿ ಭರ್ಜರಿ ಆರಂಭವನ್ನು ಪಡೆದುಕೊಂಡಿದೆ. ಶುಕ್ರವಾರ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಗುಜರಾತ್ ಟೈಟನ್ಸ್ ತಂಡಗಳು ಮುಖಾಮುಖಿಯಾಗುವುದರ ಮೂಲಕ ಈ ಚಾಲನೆ ದೊರೆತಿದೆ. ಆದರೆ ಆರ್‌ಸಿಬಿ ತಂಡ ತನ್ನ ಮೊದಲ ಪಂದ್ಯವನ್ನು ಭಾನುವಾರ ಆಡಲಿದ್ದು ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದ ಮೂಲ ಅಭಿಯಾನ ಆರಂಭಿಸಲಿದೆ. ಈ ಹಿನ್ನೆಲೆಯಲ್ಲಿ ಆರ್‌ಸಿಬಿ ತಂಡ ಭರ್ಜರಿ ಸಿದ್ಧತೆಯನ್ನು ನಡೆಸುತ್ತಿದ್ದು ನೆಟ್ಸ್‌ನಲ್ಲಿ ಆಟಗಾರರು ಬೆವರಿಳಿಸುತ್ತಿದ್ದಾರೆ.

ಇನ್ನು ಈ ಆವೃತ್ತಿಯ ಪ್ರಥಮ ಪಂದ್ಯಕ್ಕಾಗಿ ಆರ್‌ಸಿಬಿ ತಂಡದ ಅನುಭವಿ ಆಟಗಾರ ವಿರಾಟ್ ಕೊಹ್ಲಿ ಅದ್ಭುತವಾಗಿ ಸಿದ್ಧತೆ ನಡೆಸುತ್ತಿದ್ದಾರೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿರಾಟ್ ಕೊಹ್ಲಿ ನೆಟ್ಸ್‌ನಲ್ಲಿ ಅಭ್ಯಾಸ ನಡೆಸುತ್ತಿದ್ದರೆ ಮೈದಾನದ ಸುತ್ತಲಿದ್ದ ಎಲ್ಲರ ಚಿತ್ತವೂ ಕೊಹ್ಲಿ ಮೇಲೆಯೇ ನೆಟ್ಟಿತ್ತು ಎಂದರೆ ಅತಿಶಯೋಕ್ತಿಯಲ್ಲ. ವಿರಾಟ್ ಕೊಹ್ಲಿ ನೆಟ್ಸ್ ಅಭ್ಯಾಸದಿಂದಾಗಿ ಸಂದರ್ಶನದಲ್ಲಿ ಭಾಗಿಯಾಗಿದ್ದ ನಾಯಕ ಫಾಫ್ ಡು ಪ್ಲೆಸಿಸ್ ಕೂಡ ತಬ್ಬಿಬ್ಬಾಗಿರುವುದು ಐಪಿಎಲ್‌ನ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿರುವ ವಿಡಿಯೋದಲ್ಲಿ ಸ್ಪಷ್ಟವಾಗಿದೆ.

RCB vs MI: Virat Kohli batting in nets Faf du Plessis gets distracted during interview

ಅಂದಹಾಗೆ ಆರ್‌ಸಿಬಿ ನಾಯಕ ಫಾಫ್ ಡು ಪ್ಲೆಸಿಸ್ ಮೊದಲ ಪಂದ್ಯಕ್ಕೆ ತಂಡದ ಸಿದ್ಧತೆಯ ಬಗ್ಗೆ ಸಂದರ್ಶನ ನೀಡುತ್ತಿದ್ದರು. ಈ ಸಂದರ್ಭದಲ್ಲಿ ನೆಟ್ಸ್‌ನಲ್ಲಿ ಅಭ್ಯಾಸ ನಡೆಸುತ್ತಿದ್ದ ವಿರಾಟ್ ಕೊಹ್ಲಿ ಸತತವಾಗಿ ಚೆಂಡನ್ನು ಗಾಳಿಯಲ್ಲಿ ಬಾರಿಸುತ್ತಿದ್ದರು. ಕೊಹ್ಲಿ ಈ ರೀತಿ ಚೆಂಡು ಬಾರಿಸುತ್ತಿದ್ದರೆ ಪ್ರತಿ ಬಾರಿಯೂ ಫಾಫ್ ಚೆಂಡು ತಮ್ಮ ಮೇಲೆ ಬಂದು ಬೀಳುತ್ತದೋ ಎಂದು ಬೆಚ್ಚಿ ತಬ್ಬಿಬ್ಬಾಗುತ್ತಿದ್ದರು. ಪದೇ ಪದೇ ವಿರಾಟ್ ಕೊಹ್ಲಿ ಬ್ಯಾಟಿಂಗ್‌ನತ್ತ ಅವರ ಚಿತ್ತ ಹರಿಯುತ್ತಿತ್ತು. ಈ ವಿಡಿಯೋವನ್ನು ಐಪಿಎಲ್‌ನ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ.

ಇನ್ನು ಈ ಸಂದರ್ಭದಲ್ಲಿ ಆರ್‌ಸಿಬಿ ನಾಯಕ 38ರ ಹರೆಯದ ಫಾಫ್ ಡು ಪ್ಲೆಸಿಸ್ ತಂಡ ನೂತನ ಆವೃತ್ತಿಗೆ ಸರ್ವ ರೀತಿಯಲ್ಲೂ ಸಜ್ಜಾಗಿದೆ ಎಂಬುದನ್ನು ಹೇಳಿಕೊಂಡಿದ್ದಾರೆ. ಈ ಆವೃತ್ತಿಯಲ್ಲಿ ತಂಡ ಉತ್ತಮ ಪ್ರದರ್ಶನ ನೀಡುವ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದ್ದಾರೆ. "ನಾವು ತಂಡವಾಗಿ ಬಹಳ ತೃಪ್ತಿಯಿಂದ ಇದ್ದು ಈ ಆವೃತ್ತಿಗೆ ಸಂಪೂರ್ನವಾಗಿ ಸಿದ್ಧವಾಗಿದ್ದೇವೆ. ಆಟಗಾರರ ದೃಷ್ಟಿಯಿಂದ ಹೇಳುವುದಾದರೆ ಈ ಬಾರಿ ಬರುವ ಎಲ್ಲಾ ಅವಕಾಶವನ್ನು ಕೂಡ ಸದುಪಯೋಗಪಡಿಸಿಕೊಳ್ಳುತ್ತೇವೆ ಎಂದು ಭರವಸೆ ನೀಡುತ್ತೇನೆ" ಎಂದಿದ್ದಾರೆ ಆರ್‌ಸಿಬಿ ನಾಯಕ.

ಇನ್ನು ಆರ್‌ಸಿಬಿ ನಾಯಕ ವಿರಾಟ್ ಕೊಹ್ಲಿ ಈ ಬಾರಿಯ ಐಪಿಎಲ್ ಟೂರ್ನಿಗೂ ಮು್ನನ ಅದ್ಭುತ ಲಯದಲ್ಲಿದ್ದಾರೆ. ಕಳೆದ ಆವೃತ್ತಿಯಲ್ಲಿ ಕಳೆಗುಂದಿದ್ದ ಕೊಹ್ಲಿ ಈ ಬಾರಿಯ ಟೂರ್ನಿಗೂ ಮುನ್ನ ಎಲ್ಲಾ ಮಾದರಿಯಲ್ಲಿಯೂ ಲಯವನ್ನು ಕಂಡುಕೊಂಡಿದ್ದು ಆರ್‌ಸಿಬಿ ಅಭಿಮಾನಿಗಳು ಕಾತುರದಿಂದ ಕಾಯುವಂತೆ ಮಾಡಿದ್ದಾರೆ. ಕಳೆದ ಟಿ20 ವಿಶ್ವಕಪ್‌ನಲ್ಲಿ ವಿರಾಟ್ ಕೊಹ್ಲಿ ನೀಡಿದ ಕೆಲ ಸ್ಮರಣೀಯ ಇನ್ನಿಂಗ್ಸ್‌ಗಳು ಆರ್‌ಸಿಬಿ ಅಭಿಮಾನಿಗಳ ಪುಳಕ ಹೆಚ್ಚಿಸಿರುವುದು ಸುಳ್ಳಲ್ಲ.

ಭಾನುವಾರ ನಡೆಯಲಿದೆ ಮೊದಲ ಪಂದ್ಯ: ಇನ್ನು ಆರ್‌ಸಿಬಿ ತಂಡ ಈ ಬಾರಿಯ ಆವೃತ್ತಿಯ ಮೊದಲ ಪಂದ್ಯವನ್ನು ಮುಂಬೈ ಇಂಡಿಯನ್ಸ್ ವಿರುದ್ಧ ಆಡಲಿದ್ದು ಏಪ್ರಿಲ್ 2 ಭಾನುವಾರ ಈ ಪಂದ್ಯ ಆಯೋಜನೆಯಾಗಲಿದೆ. ನಾಲ್ಕು ವರ್ಷಗಳ ಬಳಿಕ ಬೆಂಗಳೂರಿನ ಚಿನ್ನ ಸ್ವಾಮಿ ಕ್ರೀಡಾಂಗಣದಲ್ಲಿ ಈ ಪಂದ್ಯಗಳು ನಡೆಯುತ್ತಿದ್ದು ಅಭಿಮಾನಿಗಳು ಕಾತುರದಿಂದ ಕಾಯುವಂತೆ ಮಾಡಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು: ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಮಹಿಪಾಲ್ ಲೋಮ್ರೋರ್, ಗ್ಲೆನ್ ಮ್ಯಾಕ್ಸ್‌ವೆಲ್, ಮೈಕೆಲ್ ಬ್ರೇಸ್‌ವೆಲ್, ವನಿಂದು ಹಸರಂಗ, ಶಹಬಾಜ್ ಅಹ್ಮದ್, ಡೇವಿಡ್ ವಿಲ್ಲಿ, ಫಿನ್ ಅಲೆನ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಆಕಾಶ್ ದೀಪ್, ಅವಿನಾಶ್ ಸಿಂಗ್, ಜೋಶ್ ಹ್ಯಾಜಲ್‌ವುಡ್, ಸಿದ್ದಾರ್ಥ್ ಕೌಲ್, ಮೊಹಮ್ಮದ್ ಸಿರಾಜ್, ಹರ್ಷಲ್ ಪಟೇಲ್, ರಾಜನ್ ಕುಮಾರ್, ಹಿಮಾಂಶು ಶರ್ಮಾ, ಕರ್ಣ್ ಶರ್ಮಾ, ಸೋನು ಯಾದವ್, ರೀಸ್ ಟೋಪ್ಲಿ

Story first published: Saturday, April 1, 2023, 15:01 [IST]
Other articles published on Apr 1, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+