RCB vs MI WPL 2025: ಹ್ಯಾಟ್ರಿಕ್ ಗೆಲುವಿನ ಕನಸಿನಲ್ಲಿ ಆರ್‌ಸಿಬಿ
ಮಹಿಳಾ ಪ್ರೀಮಿಯರ್ ಲೀಗ್‌ನಲ್ಲಿ ಶುಕ್ರವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಕಾದಾಟ ನಡೆಸಲಿವೆ. ಈಗಾಗಲೇ ಉಭಯ ತಂಡಗಳು ತಲಾ ಒಂದು ಬಾರಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದ್ದು, ಕುತೂಹಲ ಹೆಚ್ಚಿಸಿದೆ. ಈ ಲೀಗ್‌ನ ಏಳನೇ ಪಂದ್ಯಕ್ಕೆ ಬೆಂಗಳೂರಿನ ಎಂ ಚಿನ್ನಸ್ವಾಮಿ ಅಂಗಳ ಸಾಕ್ಷಿಯಾಗಲಿದೆ. ಈ ಪಂದ್ಯದಲ್ಲಿ ಜಯ ಸಾಧಿಸಿ ಹ್ಯಾಟ್ರಿಕ್ ಗೆಲುವಿನ ನಗೆ ಬೀರುವ ಕನಸು ಆರ್‌ಸಿಬಿ ತಂಡದ್ದಾಗಿದೆ.
ಪ್ರಸಕ್ತ ಸರಣಿಯಲ್ಲಿ ಆರ್‌ಸಿಬಿ ತಂಡ ಅಮೋಘ ಫಾರ್ಮ್‌ನಲ್ಲಿದೆ. ಆಡಿದ 2 ಪಂದ್ಯಗಳಲ್ಲಿ ಆರ್‌ಸಿಬಿ ಎರಡೂ ಪಂದ್ಯಗಳಲ್ಲಿ ಗೆಲುವು ಸಾಧಿಸಿ 4 ಅಂಕಗಳೊಂದಿಗೆ ಅಗ್ರ ಸ್ಥಾನದಲ್ಲಿದೆ. ಇನ್ನು ಮುಂಬೈ 2 ಪಂದ್ಯಗಳಲ್ಲಿ 1 ಸೋಲು, 1 ಗೆಲುವು ದಾಖಲಿಸಿದ್ದು, 2 ಅಂಕಗಳನ್ನು ಕಲೆ ಹಾಕಿದೆ. ಈ ಪಂದ್ಯದಲ್ಲಿ ಜಯ ಸಾಧಿಸಿ ಪ್ಲೇ ಆಫ್‌ಗೆ ಹತ್ತಿರವಾಗುವ ಕನಸು ಆರ್‌ಸಿಬಿ ತಂಡದ್ದಾಗಿದೆ.

ತವರಿನ ಬೆಂಬಲ
ಬೆಂಗಳೂರಿನ ಎಂ ಚಿನ್ನಸ್ವಾಮಿ ಅಂಗಳದಲ್ಲಿ ನಡೆಯಲಿರುವ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ತವರಿನ ಅಭಿಮಾನಿಗಳ ಬೆಂಬಲ ಸಿಗಲಿದೆ. ಈಗಾಗಲೇ ಎರಡು ಪಂದ್ಯಗಳನ್ನು ಗೆದ್ದಿರುವ ಆರ್‌ಸಿಬಿ ಮೂರನೇ ಗೆಲುವಿನ ಕನಸು ಕಾಣುತ್ತಿದೆ. ಆರ್‌ಸಿಬಿ ತಂಡದ ಸ್ಟಾರ್ ಆಟಗಾರ್ತಿಯರು ಅಮೋಘ ಫಾರ್ಮ್‌ನಲ್ಲಿದ್ದಾರೆ. ನಾಯಕಿ ಸ್ಮೃತಿ ಮಂಧನಾ ಕಳೆದ ಪಂದ್ಯದಲ್ಲಿ ಅಬ್ಬರದ ಬ್ಯಾಟಿಂಗ್ ನಡೆಸಿ ತಂಡದ ಗೆಲುವಿನಲ್ಲಿ ಮಿಂಚಿದ್ದರು. ಹೀಗಾಗಿ ಇವರ ಮೇಲೆ ಭರವಸೆ ಹೆಚ್ಚಿದೆ. ಇವರೊಂದಿಗೆ ಇನಿಂಗ್ಸ್ ಆರಂಭಿಸುವ ಡ್ಯಾನಿ ವೈಟ್ ಅವರ ಮೇಲೂ ಜವಾಬ್ದಾರಿ ಹೆಚ್ಚಿದೆ. ಮಧ್ಯಮ ಕ್ರಮಾಂಕದಲ್ಲಿ ಸ್ಟಾರ್ ಆಟಗಾರ್ತಿ ರಿಚಾ ಗೋಷ್, ಎಲ್ಲಿಸಾ ಪೆರ್ರಿ ತಮ್ಮ ಕ್ಷಮತೆಗೆ ತಕ್ಕ ಆಟವನ್ನು ಆಡಬೇಕಿದೆ.
ಆರ್‌ಸಿಬಿ ತಂಡದ ಬ್ಯಾಟಿಂಗ್ ಶಕ್ತಿ
ಸ್ಮೃತಿ ಮಂಧನಾ, 2 ಪಂದ್ಯ, 90 ರನ್
ರಿಚಾ ಘೋಷ್, 2 ಪಂದ್ಯ, 75 ರನ್
ಎಲ್ಲಿಸಾ ಪೆರ್ರಿ, 2 ಪಂದ್ಯ, 64 ರನ್
ರೇಣುಕಾ ಶಕ್ತಿ
ಆರ್‌ಸಿಬಿ ತಂಡದ ಬೌಲರ್ ರೇಣುಕಾ ಸಿಂಗ್ ಅವರ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಸದ್ಯ ಇವರು ಟೂರ್ನಿಯಲ್ಲಿ ಆಡಿದ 2 ಪಂದ್ಯಗಳಲ್ಲಿ 5 ವಿಕೆಟ್ ಪಡೆದು ಅತಿ ಹೆಚ್ಚು ವಿಕೆಟ್ ಪಡೆದವರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಇವರಿಗೆ ಜಾರ್ಜಿಯಾ ವೇರ್‌ಹ್ಯಾಮ್ ಉತ್ತಮ ಸಾಥ್ ನೀಡಬೇಕಿದೆ.ಇನ್ನು ಏಕ್ತಾ ಬಿಷ್ತ್ ಸೇರಿದಂತೆ ಉಳಿದ ಬೌಲರ್‌ಗಳು ಶಿಸ್ತು ಬದ್ಧ ದಾಳಿಯನ್ನು ಸಂಘಟಿಸಬೇಕಿದೆ. ಆರ್‌ಸಿಬಿ ಬೌಲರ್‌ಗಳು ಬಿಗುವಿನ ದಾಳಿಯನ್ನು ಪಂದ್ಯದ ಎಲ್ಲ ಹಂತದಲ್ಲೂ ಮಾಡುವ ಅವಶ್ಯಕತೆ ಇದೆ.
ಹೆಚ್ಚು ವಿಕೆಟ್ ಪಡೆದವರು
ರೇಣುಕಾ ಸಿಂಗ್, 2 ಪಂದ್ಯ, 5 ವಿಕೆಟ್
ಜಾರ್ಜಿಯಾ ವೇರ್‌ಹ್ಯಾಮ್, 2 ಪಂದ್ಯ, 4 ವಿಕೆಟ್
ಏಕ್ತಾ ಬಿಷ್ತ್, 1 ಪಂದ್ಯ, 2 ವಿಕೆಟ್

ಮಂಗಳವಾರ ನಡೆದ ಪಂದ್ಯದಲ್ಲಿ ಸ್ಥಿರ ಪ್ರದರ್ಶನ ನೀಡಿ ಗೆಲುವಿನ ಟ್ರ್ಯಾಕ್‌ಗೆ ಮರಳಿರುವ ಮುಂಬೈ ಇಂಡಿಯನ್ಸ್ ಮತ್ತೊಂದು ಗೆಲುವಿನ ಕನಸು ಕಾಣುತ್ತಿದೆ. ಆದರೆ ಬಲಿಷ್ಠ ಆರ್‌ಸಿಬಿ ತಂಡದ ಸವಾಲನ್ನು ಬೆಂಗಳೂರಿನಲ್ಲಿ ಎದುರಿಸುತ್ತಿದೆ. ಮುಂಬೈ ತಂಡಕ್ಕೆ ಹ್ಯಾಲಿ ಮ್ಯಾಥ್ಯೂಸ್ ಹಾಗೂ ಆಲ್‌ರೌಂಡರ್ ನ್ಯಾಟ್ ಸ್ಕೀವರ್ ಬ್ರಂಟ್ ಆಧಾರ. ಇವರು ತಮ್ಮ ಮೇಲೆ ತಂಡ ಇಟ್ಟ ನಂಬಿಕೆಗೆ ಪೂರಕವಾಗಿ ಬ್ಯಾಟ್ ಮಾಡಿದ್ದಾರೆ. ಹೀಗಾಗಿ ಇವರ ಮೇಲೆ ಜವಾಬ್ದಾರಿ ಹೆಚ್ಚಿದೆ. ಇನ್ನು ಹರ್ಮನ್ ಪ್ರೀತ್ ಕೌರ್ ಬ್ಯಾಟಿಂಗ್ ಲಯಕ್ಕೆ ಮರಳಿದ್ದಾರೆ. ಉಳಿದ ಆಟಗಾರರು ಸ್ಥಿರ ಪ್ರದರ್ಶನ ನೀಡುವ ಅನಿವಾರ್ಯತೆ ಇದೆ.
ಮುಂಬೈ ಬ್ಯಾಟಿಂಗ್ ಬಲ
ನ್ಯಾಟ್ ಸ್ಕೀವರ್ ಬ್ರಂಟ್, 2 ಪಂದ್ಯ, 137 ರನ್
ಹರ್ಮನ್ ಪ್ರೀತ್ ಕೌರ್, 2 ಪಂದ್ಯ, 46 ರನ್
ಅಮೆಲಿಯಾ ಕೆರ್, 2 ಪಂದ್ಯ, 28 ರನ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications