WPL 2026: RCB ಗೆದ್ದರೆ ಫೈನಲ್‌ಗೆ, ಡೆಲ್ಲಿಗೆ ಮಹತ್ವದ ಪಂದ್ಯ: ಪಂದ್ಯದ ಸಮಯ, ನೇರಪ್ರಸಾರದ ಮಾಹಿತಿ
ವಡೋದರಾ: ನಾಲ್ಕನೇ ಆವೃತ್ತಿಯ ಮಹಿಳಾ ಪ್ರೀಮಿಯರ್ ಲೀಗ್‌ನಲ್ಲಿ ಅಮೋಘ ಪ್ರದರ್ಶನ ನೀಡುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ, ಶನಿವಾರ ಲೀಗ್ ಹಂತದ ಆರನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಕಾದಾಟ ನಡೆಸಲಿದೆ. ಉಭಯ ತಂಡಗಳಿಗೆ ಈ ಪಂದ್ಯ ಮಹತ್ವದಾಗಿದೆ. ಆರ್‌ಸಿಬಿ ಈ ಪಂದ್ಯ ಗೆದ್ದು ನೇರವಾಗಿ ಫೈನಲ್ ಪ್ರವೇಶಿಸುವ ಕನಸು ಕಾಣುತ್ತಿದ್ದರೆ, ಮುಂಬೈ ಈ ಪಂದ್ಯದಲ್ಲಿ ಜಯ ಸಾಧಿಸಿ ಅಂಕ ಪಟ್ಟಿಯಲ್ಲಿ ಬಡ್ತಿ ಪಡೆಯುವ ಆಸೆಯನ್ನು ಹೊಂದಿದೆ.
ಈಗಾಗಲೇ ಉಭಯ ತಂಡಗಳು ಉದ್ಘಾಟನಾ ಪಂದ್ಯದಲ್ಲಿ ಮುಖಾಮುಖಿ ಆಗಿದ್ದವು. ಈ ಪಂದ್ಯದಲ್ಲಿ ಆರ್‌ಸಿಬಿ ಭರ್ಜರಿ ಜಯ ಸಾಧಿಸಿತ್ತು. ಮೊದಲ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ್ದ ಮುಂಬೈ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 154 ರನ್ ಸೇರಿಸಿತು. ಇದಕ್ಕುತ್ತರವಾಗಿ ಬ್ಯಾಟ್ ಮಾಡಿದ ಆರ್‌ಸಿಬಿ 20 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 157 ರನ್ ಕಲೆ ಹಾಕಿ ಗೆಲುವಿನ ನಗೆ ಬೀರಿತ್ತು. ಆರ್‌ಸಿಬಿ ಸದ್ಯ ಲೀಗ್‌ನಲ್ಲಿ ಆಡಿರುವ ಐದೂ ಪಂದ್ಯಗಳನ್ನು ಗೆದ್ದು ಮುಂದಿನ ಹಂತಕ್ಕೆ ಕ್ವಾಲಿಫೈ ಆಗಿದೆ. ಶನಿವಾರ ನಡೆಯಲಿರುವ ಪಂದ್ಯದಲ್ಲಿ ಆರ್‌ಸಿಬಿ ಜಯ ಸಾಧಿಸಿದರೆ, ನೇರವಾಗಿ ಪ್ರಶಸ್ತಿ ಸುತ್ತಿಗೆ ಅರ್ಹತೆ ಪಡೆಯಬಹುದಾಗಿದೆ.

ಮುಂಬೈ ಇಂಡಿಯನ್ಸ್ ತಂಡ ಆಡಿದ 6 ಪಂದ್ಯಗಳಲ್ಲಿ 2 ಜಯ, 4 ಸೋಲು ಕಂಡಿದ್ದು 4 ಅಂಕಗಳೊಂದಿಗೆ ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಹರ್ಮನ್ ಪ್ರೀತ್ ಪಡೆ ಮುಂದಿನ ಹಂತಕ್ಕೆ ಪ್ರವೇಶಿಸುವ ಕನಸು ಸಫಲವಾಗಬೇಕಾದಲ್ಲಿ ಮುಂದಿನ ಮೂರು ಪಂದ್ಯಗಳಲ್ಲಿ ಗೆದ್ದರೆ ಸುಲಭವಾಗಿ ನಾಕೌಟ್ ಹಂತ ಪ್ರವೇಶಿಸಬಹುದಾಗಿದೆ.
ಮಧ್ಯಮ ಕ್ರಮಾಂಕವೇ ಬಲ
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಲೀಗ್‌ನಲ್ಲಿ ಅಮೋಘ ಪ್ರದರ್ಶನ ನೀಡಿದೆ. ಯಾವುದೇ ತಂಡ ಆರ್‌ಸಿಬಿ ತಂಡದ ಜಯದ ಓಟಕ್ಕೆ ಬ್ರೇಕ್ ಹಾಕಲು ಸಾಧ್ಯವಾಗಿಲ್ಲ. ತಂಡದ ಸಂಘಟಿತ ಆಟವೇ ತಂಡಕ್ಕೆ ದೊಡ್ಡ ಬಲ ತಂದಿದೆ. ಸ್ಟಾರ್ ಆಟಗಾರ್ತಿ ಎಲ್ಲಿಸ್ ಪೆರ್ರಿ ಅವರ ಅನುಪಸ್ಥಿತಿಯಲ್ಲಿ ತಂಡ ನೀಡುತ್ತಿರುವ ಪ್ರದರ್ಶನ ಅಭಿಮಾನಿಗಳ ಮನ ಗೆದ್ದಿದೆ. ಪ್ರತಿ ಪಂದ್ಯದಲ್ಲೂ ಹೊಸ ಮ್ಯಾಚ್ ವಿನ್ನರ್‌ಗಳು ಆರ್‌ಸಿಬಿ ತಂಡಕ್ಕೆ ಆಧಾರವಾಗಿದ್ದಾರೆ. ತಂಡದ ಪರ ಆರಂಭಿಕರಾಗಿ ಕಣಕ್ಕೆ ಇಳಿಯುವ ನಾಯಕಿ ಸ್ಮೃತಿ ಮಂಧಾನ ಹಾಗೂ ಗ್ರೇಸ್ ಹ್ಯಾರಿಸ್ ಜೋಡಿ ತಂಡಕ್ಕೆ ಭರ್ಜರಿ ಜೊತೆಯಾಟದ ಕಾಣಿಕೆ ನೀಡಿ ಆಧಾರವಾಗಬೇಕಿದೆ.
ಆರ್‌ಸಿಬಿ ತಂಡದ ಮಧ್ಯಮ ಕ್ರಮಾಂಕ ಬಲಾಢ್ಯವಾಗಿದೆ. ಜಾರ್ಜಿಯಾ ವೋಲ್, ಗೌತಮಿ ನಾಯಕ್, ರಿಚಾ ಘೋಷ್ ಯಾವುದೇ ಹಂತದಲ್ಲಾದ್ರೂ ಬ್ಯಾಟಿಂಗ್ ನಡೆಸಿ ರನ್ ವೇಗಕ್ಕೆ ಚುರುಕು ಮುಟ್ಟಿಸಬಲ್ಲ ಕ್ಷಮತೆ ಹೊಂದಿದ್ದಾರೆ. ಆಲ್‌ರೌಂಡರ್‌ಗಳಾದ ನಾಡಿನ್ ಡಿ ಕ್ಲರ್ಕ್ ಮತ್ತು ರಾಧಾ ಯಾದವ್ ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ಸ್ಥಿರ ಪ್ರದರ್ಶನ ನೀಡುತ್ತಿರುವುದು ಚಿಂತೆಯನ್ನು ದೂರ ಮಾಡಿದೆ. ಇನ್ನು ವೇಗದ ಬೌಲಿಂಗ್ ವಿಭಾಗದಲ್ಲಿ ಇಂಗ್ಲೆಂಡ್ ತಂಡದ ಲಾರೆನ್ ಬೆಲ್, ಸಯಾಲಿ ಸತ್ಘರೆ ಬಿಗುವಿನ ದಾಳಿ ನಡೆಸುತ್ತಿದ್ದಾರೆ. ಕನ್ನಡತಿ ಶ್ರೇಯಾಂಕ ಪಾಟೀಲ್ ತಮ್ಮ ಆಫ್ ಸ್ಪಿನ್ ದಾಳಿಯ ಮೂಲಕ ಎದುರಾಳಿಗಳನ್ನು ಕಾಡಬಲ್ಲರು.

ಒತ್ತಡದಲ್ಲಿ ಡೆಲ್ಲಿ
ಡೆಲ್ಲಿ ಕ್ಯಾಪಿಟಲ್ಸ್ ತಂಡ ಈಗ ಭರ್ಜರಿ ಲಯದಲ್ಲಿದೆ. ಈ ತಂಡದ ಪರ ಸ್ಟಾರ್ ಆಟಗಾರರು ತಂಡದ ಗೆಲುವಿನಲ್ಲಿ ಮಿಂಚುತ್ತಿದ್ದಾರೆ. ಲಿಜಲ್ ಲಿ, ನಾಯಕಿ ಜೆಮಿಮಾ ರೊಡ್ರಿಗಸ್ ಮೇಲೆ ಭರವಸೆ ಹೆಚ್ಚಿದೆ. ತಂಡದಲ್ಲಿರುವ ವಿದೇಶಿ ಆಟಗಾರ್ತಿಯರು ಕ್ರೀಸ್‌ನಲ್ಲಿ ನಿಂತು ಬ್ಯಾಟ್ ಮಾಡುವ ಅವಶ್ಯಕತೆ ಇದೆ. ಇನ್ನು ಡೆಲ್ಲಿ ಬೌಲರ್‌ಗಳು ಸಹ ಹಿಂದಿನ ಪಂದ್ಯಗಳಲ್ಲಿ ಮಾಡಿದ ತಪ್ಪುಗಳನ್ನು ಮೆಟ್ಟಿನಿಲ್ಲುವ ಅನಿವಾರ್ಯತೆ ಇದೆ.
ಪಂದ್ಯ ನಡೆಯುವ ಸಮಯ ಯಾವಾಗ?
ಆರ್‌ಸಿಬಿ ಹಾಗೂ ಮುಂಬೈ ಇಂಡಿಯನ್ಸ್ ನಡುವಣ ಪಂದ್ಯ ವಡೋದರಾದಲ್ಲಿ ಸಂಜೆ 7ಕ್ಕೆ ಆರಂಭವಾಗಲಿದೆ. ಅಲ್ಲದೆ ಪಂದ್ಯ ಆರಂಭಕ್ಕೂ ಅರ್ಧಗಂಟೆ ಮುಂಚೆ ಟಾಸ್ ನಡೆಯಲಿದೆ.
ಪಂದ್ಯವನ್ನು ವೀಕ್ಷಿಸುವುದು ಎಲ್ಲಿ?
ಆರ್‌ಸಿಬಿ, ಮುಂಬೈ ನಡುವಣ ಪಂದ್ಯದ ನೇರಪ್ರಸಾರವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ವೀಕ್ಷಿಸಬಹುದು. ಅಲ್ಲದೆ ಆನ್‌ಲೈನ್‌ನಲ್ಲಿ ಜಿಯೋಹಾಟ್‌ಸ್ಟಾರ್ ನಲ್ಲಿ ನೋಡಬಹುದಾಗಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications