Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IPL 2023 RCB vs Mumbai Indians: ಆರ್‌ಸಿಬಿ vs ಮುಂಬೈ ಇಂಡಿಯನ್ಸ್ ಸಂಭಾವ್ಯ ಬಲಿಷ್ಠ ಆಡುವ 11ರ ಬಳಗ

IPL 2023 RCB vs Mumbai Indians: ಶುಕ್ರವಾರ, ಮಾರ್ಚ್ 31ರ ಸಂಜೆ 6.30 ಗಂಟೆಗೆ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ 2023ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ 16ನೇ ಋತು ಆರಂಭಕ್ಕೆ ಚಾಲನೆ ಸಿಗಲಿದೆ. ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಗುಜರಾತ್ ಟೈಟನ್ಸ್ ಮತ್ತು ಮಾಜಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಸೆಣಸಾಡಲಿವೆ.

ಇನ್ನು ಫಾಫ್ ಡು ಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡ ತನ್ನ ಮೊದಲ ಪಂದ್ಯವನ್ನು ರೋಹಿತ್ ಶರ್ಮಾ ನಾಯಕತ್ವದ ಮುಂಬೈ ಇಂಡಿಯನ್ಸ್ ವಿರುದ್ಧ ಏಪ್ರಿಲ್ 2ರಂದು ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಡಲಿದೆ. ಇನ್ನು ಟೂರ್ನಿ ಆರಂಭಕ್ಕೂ ಮುನ್ನ ಆರ್‌ಸಿಬಿ ಮತ್ತು ಮುಂಬೈ ಇಂಡಿಯನ್ಸ್ ತಂಡಗಳಿಗೆ ಗಾಯದ ಸಮಸ್ಯೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

RCBvsMumbaiIndians

2022ರ ಐಪಿಎಲ್‌ನಲ್ಲಿ ಪ್ಲೇಆಫ್ ಹಂತಕ್ಕೆ ಪ್ರವೇಶಿಸಿದ್ದ ಫಾಫ್ ಡು ಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡ ಈ ಬಾರಿ ತನ್ನ ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾದ ಜೋಶ್ ಹ್ಯಾಝಲ್‌ವುಡ್ ಮತ್ತು ಗ್ಲೆನ್ ಮ್ಯಾಕ್ಸ್‌ವೆಲ್ ಅವರ ಅನುಪಸ್ಥಿತಿಯಲ್ಲಿ ಕಣಕ್ಕಿಳಿಯಲಿದೆ. ಜೋಶ್ ಹ್ಯಾಝಲ್‌ವುಡ್ ಕೆಲವು ಪಂದ್ಯಗಳಿಗೆ ಅಲಭ್ಯರಾಗಲಿದ್ದರೆ, ಗ್ಲೆನ್ ಮ್ಯಾಕ್ಸ್‌ವೆಲ್ ಎರಡನೇ ಪಂದ್ಯಕ್ಕೆ ಮರಳಲಿದ್ದಾರೆ.

ಆರ್‌ಸಿಬಿ ತಂಡದ ಪ್ರಮುಖ ಆಲ್‌ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ ಆರಂಭಿಕ ಪಂದ್ಯದಿಂದ ಹೊರಗುಳಿಯುವ ಮುನ್ಸೂಚನೆ ನೀಡಿದ್ದಾರೆ. ಕಳೆದ ನವೆಂಬರ್‌ನಲ್ಲಿ ಅಪಘಾತದ ನಂತರ ಕಾಲು ನೋವಿನಿಂದಾಗಿ ಕೆಲವು ತಿಂಗಳಿನಿಂದ ಕ್ರಿಕೆಟ್ ಆಡಿರದ ಗ್ಲೆನ್ ಮ್ಯಾಕ್ಸ್‌ವೆಲ್, ಭಾರತದ ವಿರುದ್ಧದ ಮೊದಲ ಏಕದಿನ ಪಂದ್ಯವಾಡಿದ್ದರು. ಆದರೆ, ಅಂತಿಮ ಎರಡು ಏಕದಿನ ಅಂತಾರಾಷ್ಟ್ರೀಯ ಪಂದ್ಯಗಳಿಂದ ಹೊರಗುಳಿದಿದ್ದರು.

RCBvsMumbaiIndians


ಮುಂಬೈ ಇಂಡಿಯನ್ಸ್ ವಿರುದ್ಧದ ಭಾನುವಾರದ ಪಂದ್ಯಕ್ಕೆ ಸಿದ್ಧವಾಗಲು ಗ್ಲೆನ್ ಮ್ಯಾಕ್ಸ್‌ವೆಲ್ ಆರ್‌ಸಿಬಿಯೊಂದಿಗೆ ಜಿಮ್‌ನಲ್ಲಿ ಸಾಕಷ್ಟು ಬೆವರು ಹರಿಸುತ್ತಿದ್ದಾರೆ. ಮುಂಬೈ ಇಂಡಿಯನ್ಸ್ ಪರ ಆಲ್‌ರೌಂಡರ್ ಕ್ಯಾಮೆರಾನ್ ಗ್ರೀನ್ ಐಪಿಎಲ್‌ಗೆ ಪಾದಾರ್ಪಣೆ ಮಾಡಲಿದ್ದಾರೆ,'' ಎಂದು ಕ್ರಿಕೆಟ್ ಆಸ್ಟ್ರೇಲಿಯಾ ಆಯ್ಕೆಗಾರ ಜಾರ್ಜ್ ಬೈಲಿ ಹೇಳಿದರು.

ಅತ್ತ ಮುಂಬೈ ಇಂಡಿಯನ್ಸ್ ತಂಡದಲ್ಲಿಯೂ ಗಾಯಾಳುಗಳ ಸಂಖ್ಯೆ ಹೆಚ್ಚಿದೆ. ವೇಗಿ ಜಸ್ಪ್ರೀತ್ ಬುಮ್ರಾ 2023ರ ಐಪಿಎಲ್ ಟೂರ್ನಿಯಿಂದ ಸಂಪೂರ್ಣ ಹೊರಗುಳಿದಿದ್ದಾರೆ. ಇನ್ನು ಅರ್ಜುನ್ ತೆಂಡೂಲ್ಕರ್ ತಮ್ಮ ಚೊಚ್ಚಲ ಪ್ರವೇಶ ಮಾಡಬಹುದು ಎನ್ನಲಾಗಿತ್ತು. ಆದರೆ ತಂಡದ ಮೊದಲ ಪಂದ್ಯಕ್ಕೆ ಲಭ್ಯವಿರುವುದಿಲ್ಲ ಎಂದು ಮುಖ್ಯ ಕೋಚ್ ಮಾರ್ಕ್ ಬೌಚರ್ ಖಚಿತಪಡಿಸಿದ್ದಾರೆ.

ಗಾಯದ ಕಾರಣದಿಂದಾಗಿ 2022ರ ಐಪಿಎಲ್ ಪಂದ್ಯಾವಳಿಯನ್ನು ತಪ್ಪಿಸಿಕೊಂಡಿದ್ದ ಜೋಫ್ರಾ ಆರ್ಚರ್ ಅಂತಿಮವಾಗಿ ಆರ್‌ಸಿಬಿ ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಪರ ತಮ್ಮ ಚೊಚ್ಚಲ ಪಂದ್ಯವನ್ನು ಆಡಲು ಲಭ್ಯವಿರಲಿದ್ದಾರೆ.

RCBvsMumbaiIndians

ಆರ್‌ಸಿಬಿ ತಂಡದ ಪರ ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್, ದಿನೇಶ್ ಕಾರ್ತಿಕ್, ಫಿನ್ ಅಲೆನ್, ಹರ್ಷಲ್ ಪಟೇಲ್ ಸೇರಿದಂತೆ ಹಲವು ಆಟಗಾರರು ಆಡಲಿದ್ದರೆ, ಮುಂಬೈ ಇಂಡಿಯನ್ಸ್ ತಂಡದಲ್ಲಿ ನಾಯಕ ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಟಿಮ್ ಡೇವಿಡ್, ಕ್ಯಾಮೆರಾನ್ ಗ್ರೀನ್ ಅವರಂತಹ ಆಟಗಾರರರು ಕಣಕ್ಕಿಳಿಯಲಿದ್ದಾರೆ.

ಟಿವಿ ಮತ್ತು ಲೈವ್ ಸ್ಟ್ರೀಮಿಂಗ್
2023ರ ಐಪಿಎಲ್ ಪಂದ್ಯಾವಳಿಯ ಆರ್‌ಸಿಬಿ vs ಮುಂಬೈ ಇಂಡಿಯನ್ಸ್ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ನೇರಪ್ರಸಾರ ಮಾಡಲಾಗುವುದು. ಇನ್ನು Jio Cinema ಅಪ್ಲಿಕೇಶನ್‌ನಲ್ಲಿ ಲೈವ್ ಸ್ಟ್ರೀಮ ಆಗಿ ವೀಕ್ಷಿಸಬಹುದು.

ಆರ್‌ಸಿಬಿ vs ಮುಂಬೈ ಇಂಡಿಯನ್ಸ್ ತಂಡಗಳ ಸಂಭಾವ್ಯ ಆಡುವ 11ರ ಬಳಗ
ಆರ್‌ಸಿಬಿ ತಂಡ: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಫಿನ್ ಅಲೆನ್, ಮಹಿಪಾಲ್ ಲೊಮ್ರೋರ್, ಡೇವಿಡ್ ವಿಲ್ಲಿ, ಶಹಬಾಜ್ ಅಹ್ಮದ್, ಹರ್ಷಲ್ ಪಟೇಲ್, ರೀಸ್ ಟೋಪ್ಲೆ, ಮೊಹಮ್ಮದ್ ಸಿರಾಜ್, ಕರ್ಣ್ ಶರ್ಮಾ.

ಮುಂಬೈ ಇಂಡಿಯನ್ಸ್ ತಂಡ: ರೋಹಿತ್ ಶರ್ಮಾ (ನಾಯಕ), ಕ್ಯಾಮೆರಾನ್ ಗ್ರೀನ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಟಿಮ್ ಡೇವಿಡ್, ಹೃತಿಕ್ ಶೊಕೀನ್, ಜೋಫ್ರಾ ಆರ್ಚರ್, ಶಾಮ್ಸ್ ಮುಲಾನಿ, ಪಿಯೂಶ್ ಚಾವ್ಲಾ, ಜೆಸನ್ ಬೆಹ್ರೆಂಡಾರ್ಫ್

Story first published: Thursday, March 30, 2023, 18:42 [IST]
Other articles published on Mar 30, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+