RCB vs PBKS IPL Final: ಟಾಸ್ ಗೆದ್ದ ಪಂಜಾಬ್ ಫೀಲ್ಡಿಂಗ್ ಆಯ್ಕೆ
18ನೇ ಆವೃತ್ತಿಯ ಐಪಿಎಲ್‌ಗೆ ಇಂದು ತೆರೆ ಬೀಳಲಿದೆ. ಇಂದು ಅಹಮದಾಬಾದ್‌ನಲ್ಲಿ ನಡೆಯಲಿರುವ ಐಪಿಎಲ್ 2025 ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಕಾದಾಟ ನಡೆಸಲಿವೆ. ಅತಿ ಕುತೂಹಲ ಹೆಚ್ಚಿಸಿರುವ ಪಂದ್ಯದಲ್ಲಿ ಟಾಸ್ ಪಂಜಾಬ್ ಕಿಂಗ್ಸ್ ಪಾಲಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ತಂಡ ಫೀಲ್ಡಿಂಗ್ ಮಾಡಲು ಮುಂದಾಗಿದೆ.
ಈಗಾಗಲೇ ಲೀಗ್‌ನಲ್ಲಿ ಸ್ಥಿರ ಪ್ರದರ್ಶನವನ್ನು ನೀಡಿದ್ದ ಆರ್‌ಸಿಬಿ ಹಾಗೂ ಪಂಜಾಬ್ ತಂಡಗಳು ಫೈನಲ್‌ಗೆ ಅರ್ಹತೆ ಪಡೆದಿವೆ. ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಆರ್‌ಸಿಬಿ 8 ವಿಕೆಟ್‌ಗಳಿಂದ ಪಂಜಾಬ್ ತಂಡವನ್ನು ಮಣಿಸಿ ಫೈನಲ್ ಪ್ರವೇಶಿಸಿತ್ತು. ಇದೇ ಅಂಗಳದಲ್ಲಿ ನಡೆದ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿ ಜಯ ಸಾಧಿಸಿತ್ತು. ಅಲ್ಲದೆ ನೇರವಾಗಿ ಫೈನಲ್‌ಗೆ ಅರ್ಹತೆ ಪಡೆಯಿತು. ಈ ಮೂಲಕ ಎರಡನೇ ಬಾರಿಗೆ ಫೈನಲ್ ತಲುಪಿದ ಇತಿಹಾಸ ನಿರ್ಮಿಸಿದೆ.

ಆರ್‌ಸಿಬಿ ತಂಡ 9 ವರ್ಷಗಳ ಬಳಿಕ ಟೂರ್ನಿಯ ಫೈನಲ್‌ಗೆ ಅರ್ಹತೆ ಪಡೆದಿದೆ. 2016ರಲ್ಲಿ ಆರ್‌ಸಿಬಿ ಕೊನೆಯ ಬಾರಿಗೆ ಐಪಿಎಲ್ ಫೈನಲ್ ಪ್ರವೇಶಿಸಿತ್ತು. ಇನ್ನು ಆರ್‌ಸಿಬಿ ನಾಲ್ಕನೇ ಬಾರಿಗೆ ಆರ್‌ಸಿಬಿ ಫೈನಲ್‌ಗೆ ಪ್ರವೇಶವನ್ನು ಪಡೆದಿದೆ. ಇನ್ನು ಚೊಚ್ಚಲ ಟ್ರೋಫಿ ಗೆಲುವಿನ ಕನಸಿನಲ್ಲಿರುವ ಆರ್‌ಸಿಬಿ, ಪಂಜಾಬ್ ತಂಡಗಳು ಭರ್ಜರಿ ತಯಾರಿ ನಡೆಸಿವೆ.
ಆರ್‌ಸಿಬಿ ತಂಡ: ಫಿಲ್ ಸಾಲ್ಟ್, ವಿರಾಟ್ ಕೊಹ್ಲಿ, ಮಯಾಂಕ್ ಅಗರ್ವಾಲ್, ರಜತ್ ಪಾಟಿದಾರ್ (ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ರೊಮಾರಿಯೋ ಶೆಫರ್ಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಯಶ್ ದಯಾಲ್, ಜೋಶ್ ಹ್ಯಾಜಲ್‌ವುಡ್
ಪಂಜಾಬ್ ತಂಡ; ಪ್ರಿಯಾಂಶ್ ಆರ್ಯ, ಶ್ರೇಯಸ್ ಅಯ್ಯರ್ (ನಾಯಕ), ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ನೆಹಾಲ್ ವಧೇರಾ, ಶಶಾಂಕ್ ಸಿಂಗ್, ಮಾರ್ಕಸ್ ಸ್ಟೊಯಿನಿಸ್, ವಿಜಯ್‌ಕುಮಾರ್ ವೈಶಾಕ್, ಅಜ್ಮತುಲ್ಲಾ ಒಮರ್ಜಾಯ್, ಕೈಲ್ ಜೇಮಿಸನ್, ಅರ್ಷ್‌ದೀಪ್ ಸಿಂಗ್, ಯುಜುವೇಂದ್ರ ಚಾಹಲ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications