ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಆರ್‌ಸಿಬಿ ತಂಡದ ಅನುಭವಿ ಆಟಗಾರರಾದ ಫಾಫ್ ಡು ಪ್ಲೆಸಿಸ್ ಹಾಗೂ ಗ್ಲೆನ್ ಮ್ಯಾಕ್ಸ್‌ವೆಲ್ ಜೋಡಿ ಮತ್ತೊಮ್ಮೆ ಮಿಂಚಿದ್ದಾರೆ. ಟಾಸ್ ಸೋತು ಮೊದಲಿಗೆ ಬ್ಯಾಟಿಂಗ್ ನಡಸುವ ಸವಾಲು ಸ್ವೀಕರಿಸಿದ ಆರ್‌ಸಿಬಿ ತಂಡ ಹಂಗಾಮಿ ನಾಯಕ ವಿರಾಟ್ ಕೊಹ್ಲಿ ವಿಕೆಟನ್ನು ಮೊದಲ ಎಸೆತದಲ್ಲಿಯೇ ಕಳೆದುಕೊಂಡಿತು. ನಂತರ ಬಂದ ಮಹಿಪಾಲ್ ಲೋಮ್ರೋರ್ ಕೂಡ ಶೂನ್ಯಕ್ಕೆ ವಿಕೆಟ್ ಕಳೆದುಕೊಂಡರು. ಆದರೆ ಆರ್‌ಸಿಬಿ ತಂಡಕ್ಕೆ ಮತ್ತೊಂದು ಬಾರಿ ಆಸರೆಯಾಗಿದ್ದು ಫಾಫ್ ಹಾಗೂ ಗ್ಲೆನ್ ಮ್ಯಾಕ್ಸ್‌ವೆಲ್ ಜೋಡಿ.
ಫಾಫ್ ಹಾಗೂ ಮ್ಯಾಕ್ಸಿ ಜೋಡಿ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಮೂರನೇ ವಿಕೆಟ್‌ಗೆ ದಾಖಲೆಯ ಜೊತೆಯಾಟವನ್ನು ನೀಡಿದರು. ಐಪಿಎಲ್ ಇIPL 2023: ಟ್ರೋಲ್ ಆದ ಪಂದ್ಯದಲ್ಲೇ ಕೊಹ್ಲಿಯ ದೊಡ್ಡ ದಾಖಲೆ ಮುರಿದ ಕೆಎಲ್ ರಾಹುಲ್!
ತಿಹಾಸದಲ್ಲಿ ಆರ್‌ಸಿಬಿ ಪರವಾಗಿ ಮೂರನೇ ವಿಕೆಟ್‌ಗೆ ಅತ್ಯಂತ ಹೆಚ್ಚು ರನ್‌ಗಳ ಜೊತೆಯಾಟ ನೀಡಿದ ದಾಖಲೆಯನ್ನು ಬರೆದಿದ್ದಾರೆ. ಕುತೂಹಲಕಾರಿ ಅಂಶವೆಂದರೆ ಕಳೆದವಾರವಷ್ಟೇ ಇದೇ ಜೋಡಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಈ ದಾಖಲೆಯನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದರು. ಇದೀಗ ತಮ್ಮದೇ ದಾಖಲೆ ಮುರಿದಿದ್ದಾರೆ ಈ ಜೋಡಿ.

ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ಧ ಬೆಂಗಳೂರಿನಲ್ಲಿ ಏಪ್ರಿಲ್ 17ರಂದು ನಡೆದ ಪಂದ್ಯದಲ್ಲಿ ಫಾಫ್ ಹಾಗೂ ಮ್ಯಾಕ್ಸ್‌ವೆಲ್ ಜೋಡಿ 126 ರನ್‌ಗಳ ಜೊತೆಯಾಟವನ್ನು ನೀಡಿದ್ದರು. ಈ ಮೂಲಕ ಗುಜರಾತ್ ಲಯ್ಸ್ ವಿರುದ್ಧ ವಿರಾಟ್ ಕೊಹ್ಲಿ ಹಾಗೂ ಕೆಎಲ್ ರಾಹುಲ್ 2017ರಲ್ಲಿ ಬರೆದಿದ್ದ ದಾಖಲೆ ಮುರಿದಿದ್ದರು. ಇದೀಗ ಸಿಎಸ್‌ಕೆ ವಿರುದ್ಧದ ಪಂದ್ಯದ ಆರು ದಿನಗಳ ಬಳಿಕ ಫಾಫ್ ಮ್ಯಾಕ್ಸ್‌ವೆಲ್ ಜೋಡಿ ತಮ್ಮ ದಾಖಲೆಯನ್ನು ಮುರಿದಿದ್ದಾರೆ.
ರಾಜಸ್ಥಾನ್ ರಾಯಲ್ಸ್ ವಿರುದದ ಪಂದ್ಯದಲ್ಲಿ ಫಾಫ್ ಡು ಪ್ಲೆಸಿಸ್ ಹಾಗೂ ಗ್ಲೆನ್ ಮ್ಯಾಕ್ಸ್‌ವೆಲ್ ಜೋಡಿ 127ರನ್‌ಗಳ ಜೊತೆಯಾಟ ನೀಡಿದೆ. ಇದು ಆರ್‌ಸಿಬಿ ಪರವಾಗಿ ಒಟ್ಟಾರೆಯಾಗಿ ಯಾವುದೇ ವಿಕೆಟ್‌ಗೆ ದಾಖಲಾದ 15ನೇ ಗರಿಷ್ಠ ಜೊತೆಯಾಟ ಎನಿಸಿಕೊಂಡಿದೆ. ವಿರಾಟ್ ಕೊಹ್ಲಿ ಹಾಗೂ ಶಹ್ಬಾಜ್ ಅಹ್ಮದ್ ವಿಕೆಟನ್ನು ಅಗ್ಗಕ್ಕೆ ಕಳೆದುಕೊಂಡ ಬಳಿಕ ಈ ಜೊಡಿ ಆರ್‌ಸಿಬಿ ತಂಡವನ್ನು ಸಂಕಷ್ಟದಿಂದ ಪಾರುಮಾಡಿದ್ದಲ್ಲದೆ ಬೃಹತ್ ಮೊತ್ತದತ್ತ ಹೆಜ್ಜೆಹಾಕುವಂತೆ ಮಾಡಿದರು.
ಇನ್ನು ಈ ಪಂದ್ಯದಲ್ಲಿ ಅಮೋಘ ಪ್ರದರ್ಶನ ನೀಡಿದ ಗ್ಲೆನ್ ಮ್ಯಾಕ್ಸ್‌ವೆಲ್ 44 ಎಸೆತಗಳಲ್ಲಿ 77 ರನ್‌ಗಳನ್ನು ಸಿಡಿಸಿ ಅಬ್ಬರಿಸಿದರು. ಈ ಭರ್ಜರಿ ಇನ್ನಿಂಗ್ಸ್‌ನಲ್ಲಿ 4 ಭರ್ಜರಿ ಸಿಕ್ಸರ್ ಹಾಗೂ 6 ಬೌಂಡರಿಗಳು ಇದ್ದವು. ಇನ್ನು ನಾಯಕ ಫಾಫ್ ಡು ಪ್ಲೆಸಿಸ್ 39 ಎಸೆತಗಳನ್ನು ಎದುರಿಸಿ 62 ರನ್ ಬಾರಿಸಿದ್ದಾರೆ. ಇದರಲ್ಲಿ 8 ಬೌಂಡರಿ ಹಾಗೂ 2 ಸಿಕ್ಸರ್‌ಗಳು ಇದ್ದವು. ಈ ಮೂಲಕ ಫಾಫ್ ಟಿ20 ಕ್ರಿಕೆಟ್‌ನಲ್ಲಿ 9000 ರನ್‌ಗಳನ್ನು ಪೂರೈಸಿದ್ದಾರೆ. ಈ ಸಾಧನೆ ಮಾಡಿದ 17ನೇ ಕ್ರಿಕೆಟಿಗ ಎನಿಸಿಕೊಂಡಿದ್ದಾರೆ.
ಇನ್ನು ರಾಜಸ್ಥಾನ್ ರಾಯಲ್ಸ್ ವಿರುದ್ಧದ ಈ ಪಂದ್ಯದಲ್ಲಿ ಆರ್‌ಸಿಬಿ ತಂಡ ಅಮೋಘ ಗೆಲುವು ಸಾಧಿಸಿದೆ. ಬೌಲಿಂಗ್‌ನಲ್ಲಿಯೂ ಉತ್ತಮ ಪ್ರದರ್ಶನ ನೀಡಿದ ಆರ್‌ಸಿಬಿ 7 ರನ್‌ಗಳ ಅಂತರದ ಗೆಲುವು ಸಾಧಿಸಿದೆ. ಈ ಮೂಲಕ ಆಡಿದ 7 ಪಂದ್ಯಗಳಲ್ಲಿ 4ನೇ ಗೆಲುವು ಸಾಧಿಸಿ ಮಿಂಚಿದೆ.