RCB vs RR IPL 2024: ಆರ್‌ಸಿಬಿ vs ರಾಜಸ್ಥಾನ್ ರಾಯಲ್ಸ್ ಹೆಡ್-ಟು-ಹೆಡ್ ಇತಿಹಾಸ ಹೇಗಿದೆ?
ಶನಿವಾರ, ಏಪ್ರಿಲ್ 6ರಂದು ಜೈಪುರದ ಸವಾಯಿ ಮಾನ್‌ಸಿಂಗ್ ಸ್ಟೇಡಿಯಂನಲ್ಲಿ ನಡೆಯಲಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 19ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ (ಆರ್‌ಆರ್) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡಗಳು ರೋಚಕ ಕದನಕ್ಕೆ ಸಜ್ಜಾಗಿವೆ.
ಸದ್ಯ ನಡೆಯುತ್ತಿರುವ ಐಪಿಎಲ್ 2024ರ ಋತುವಿನಲ್ಲಿ ಹೆಣಗಾಡುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ತಮ್ಮ ಎರಡನೇ ಗೆಲುವಿನ ಹುಡುಕಾಟದಲ್ಲಿದ್ದರೆ, ರಾಜಸ್ಥಾನ್ ರಾಯಲ್ಸ್ ತಂಡ ತಮ್ಮ ನಾಲ್ಕನೇ ಗೆಲುವನ್ನು ಎದುರು ನೋಡುತ್ತಿದೆ.

ಐಪಿಎಲ್ 2024ರ ಅಂಕಪಟ್ಟಿಯಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಆಡಿದ ಮೂರು ಪಂದ್ಯಗಳನ್ನು ಗೆದ್ದು, 6 ಅಂಕಗಳೊಂದಿಗೆ 2ನೇ ಸ್ಥಾನದಲ್ಲಿದ್ದರೆ, ಆರ್‌ಸಿಬಿ ತಂಡ ಆಡಿದ ನಾಲ್ಕು ಪಂದ್ಯಗಳಲ್ಲಿ ಒಂದು ಗೆಲುವು ಮತ್ತು ಮೂರು ಸೋಲು ಕಂಡಿದ್ದು, 2 ಅಂಕಗಳೊಂದಿಗೆ 8ನೇ ಸ್ಥಾನದಲ್ಲಿದೆ.
ಸಂಜು ಸ್ಯಾಮ್ಸನ್ ನಾಯಕತ್ವದ ರಾಜಸ್ಥಾನ್ ರಾಯಲ್ಸ್ ತಂಡ ಯಾವಾಗಲೂ ತಮ್ಮ ತವರಿನ ಅಂಗಳದಲ್ಲಿ ಬಲಿಷ್ಠವಾಗಿದೆ. ಈ ಋತುವಿನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಜೈಪುರದಲ್ಲಿ ಎರಡು ಪಂದ್ಯಗಳನ್ನು ಆಡಿದ್ದು, ಎರಡರಲ್ಲೂ ಗೆದ್ದು ಬೀಗಿದ್ದಾರೆ.

ಮುಂಬೈನ ಐಕಾನಿಕ್ ವಾಂಖೆಡೆಯಲ್ಲಿ ಕೊನೆಯ ಬಾರಿಗೆ ರಾಜಸ್ಥಾನ್ ರಾಯಲ್ಸ್ ತಂಡವು ಮುಂಬೈ ಇಂಡಿಯನ್ಸ್ ವಿರುದ್ಧ ಆಡಿತ್ತು. ಇದು ಕಡಿಮೆ ಸ್ಕೋರಿಂಗ್ ಪಂದ್ಯವಾಗಿದ್ದು ಮತ್ತು ಪ್ರವಾಸಿ ತಂಡ ಆರು ವಿಕೆಟ್‌ಗಳ ಗೆಲುವು ಸಾಧಿಸಿತ್ತು.
ಮತ್ತೊಂದೆಡೆ, ಫಾಫ್ ಡು ಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವು ತನ್ನ ಬ್ಯಾಟಿಂಗ್‌ನ ಅಸ್ಥಿರತೆಯಿಂದ ಬಳಲುತ್ತಿದೆ. ಆವೃತ್ತಿಯ ಆರಂಭಿಕ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಸೋತ ನಂತರ, ಪಂಜಾಬ್ ಕಿಂಗ್ಸ್ ತಂಡವನ್ನು ತವರಿನಲ್ಲಿ ನಾಲ್ಕು ವಿಕೆಟ್‌ಗಳಿಂದ ಸೋಲಿಸಿ ಗೆಲುವಿನ ಹಳಿಗೆ ಮರಳಿತ್ತು.

ಆದರೆ, ಆರ್‌ಸಿಬಿ ತಂಡ ಮುಂದಿನ ಎರಡು ಪಂದ್ಯಗಳಲ್ಲಿ ಅದೇ ಆವೇಗವನ್ನು ಮುಂದುವರಿಸಲು ವಿಫಲವಾಯಿತು. ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಮವಾಗಿ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಸೋಲು ಕಂಡಿತು. ಎರಡೂ ಪಂದ್ಯಗಳಲ್ಲಿ ಆರ್‌ಸಿಬಿ ತಂಡದ ಬ್ಯಾಟಿಂಗ್ ವಿಭಾಗ ನೀರಸ ಪ್ರದರ್ಶನ ನೀಡಿದೆ.
ಆರ್‌ಸಿಬಿ vs ರಾಜಸ್ಥಾನ್ ರಾಯಲ್ಸ್ ಹೆಡ್-ಟು-ಹೆಡ್ ಮುಖಾಮುಖಿ
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಇತಿಹಾಸಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಈವರೆಗೆ ಅವರ 30 ಬಾರಿ ಮುಖಾಮುಖಿಯಾಗಿವೆ.
ಅದರಲ್ಲಿ ಆರ್‌ಸಿಬಿ ತಂಡ 15 ಪಂದ್ಯಗಳಲ್ಲಿ ಗೆಲುವು ದಾಖಲಿಸಿದ್ದರೆ, ರಾಜಸ್ಥಾನ್ ರಾಯಲ್ಸ್ ತಂಡ 12 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಇದೇ ವೇಳೆ ಮೂರು ಪಂದ್ಯಗಳು ಯಾವುದೇ ಫಲಿತಾಂಶ ಕಾಣದೆ ರದ್ದುಗೊಂಡಿವೆ.
ಆರ್‌ಸಿಬಿ vs ರಾಜಸ್ಥಾನ್ ರಾಯಲ್ಸ್ ಸಂಭಾವ್ಯ ಆಡುವ 11ರ ಬಳಗ
ರಾಜಸ್ಥಾನ್ ರಾಯಲ್ಸ್: ಜೋಸ್ ಬಟ್ಲರ್, ಯಶಸ್ವಿ ಜೈಸ್ವಾಲ್, ರಿಯಾನ್ ಪರಾಗ್, ಸಂಜು ಸ್ಯಾಮ್ಸನ್(ನಾಯಕ/ ವಿಕೆಟ್ ಕೀಪರ್), ಶಿಮ್ರಾನ್ ಹೆಟ್ಮೆಯರ್, ಧ್ರುವ್ ಜುರೆಲ್, ಟ್ರೆಂಟ್ ಬೌಲ್ಟ್, ಅವೇಶ್ ಖಾನ್, ನಾಂದ್ರೆ ಬರ್ಗರ್, ರವಿಚಂದ್ರನ್ ಅಶ್ವಿನ್, ಯುಜ್ವೇಂದ್ರ ಚಾಹಲ್.
ರಾಯಲ್ ಚಾಲೆಂಜರ್ಸ್ ಬೆಂಗಳೂರು: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ಗ್ಲೆನ್ ಮ್ಯಾಕ್ಸ್‌ವೆಲ್, ಕ್ಯಾಮೆರಾನ್ ಗ್ರೀನ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ರಜತ್ ಪಾಟಿದಾರ್, ರೀಸ್ ಟೋಪ್ಲೆ, ಮನೋಜ್ ಭಾಂಡಗೆ, ಮೊಹಮ್ಮದ್ ಸಿರಾಜ್, ಕರ್ಣ್ ಶರ್ಮಾ, ವಿಜಯ್‌ಕುಮಾರ್ ವೈಶಾಕ್. ಇಂಪ್ಯಾಕ್ಟ್ ಪ್ಲೇಯರ್; ವಿಲ್ ಜ್ಯಾಕ್ಸ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications