For Quick Alerts
ALLOW NOTIFICATIONS  
For Daily Alerts
 

RCB vs RR IPL 2024: ರಾಜಸ್ಥಾನ್ ರಾಯಲ್ಸ್‌ಗೆ ಚಾಲೆಂಜ್ ಹಾಕಿದ ಆರ್‌ಸಿಬಿ; ಟಾಸ್ ವರದಿ, ಆಡುವ 11ರ ಬಳಗ

ಶನಿವಾರ, ಏಪ್ರಿಲ್ 6ರಂದು ಜೈಪುರದ ಸವಾಯಿ ಮಾನ್‌ಸಿಂಗ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 19ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ (ಆರ್‌ಆರ್‌) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡಗಳು ಮುಖಾಮುಖಿಯಾಗಿವೆ.

ಟಾಸ್ ಗೆದ್ದ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ ಮೊದಲು ಬೌಲಿಂಗ್ ಮಾಡುವ ನಿರ್ಧಾರ ಮಾಡಿದ್ದಾರೆ. ಹೀಗಾಗಿ ಫಾಫ್ ಡು ಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮೊದಲು ಬ್ಯಾಟಿಂಗ್ ಮಾಡಲಿದೆ.

RCB vs RR IPL 2024 Royal Challengers Bengaluru vs Rajasthan Royals Toss Report and Playing 11

ಟಾಸ್‌ಗೂ ಮೊದಲು ರಾಜಸ್ಥಾನದ ಗ್ರಾಮೀಣ ಮಹಿಳೆಯಿಂದ ಸೋಲಾರ್ ಲ್ಯಾಂಪ್ ಅನ್ನು ಆರ್‌ಸಿಬಿ ನಾಯಕನಿಗೆ ನೀಡಲಾಯಿತು. ಏಕೆಂದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ರಾಜಸ್ಥಾನ್ ರಾಯಲ್ಸ್ "ಪಿಂಕ್ ಪ್ರಾಮಿಸ್' ಪಂದ್ಯವನ್ನು ಆಯೋಜಿಸಿದೆ.

ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿಯು ರಾಜಸ್ಥಾನದಲ್ಲಿ ಮಹಿಳಾ ಸಬಲೀಕರಣ ಬೆಂಬಲಿಸುವ ಅಭಿಯಾನವನ್ನು ಪ್ರಾರಂಭಿಸಿದೆ. ರಾಜಸ್ಥಾನ್ ರಾಯಲ್ಸ್ ಆಟಗಾರರು ವಿಶೇಷವಾದ ಪೂರ್ಣ ಗುಲಾಬಿ ಜೆರ್ಸಿ ಧರಿಸಿ ಆಡಲಿದ್ದಾರೆ.

ಪಿಂಕ್‌ಪ್ರಾಮಿಸ್ ಪಂದ್ಯದ ವೇಳೆ ಎರಡೂ ತಂಡಗಳು ಬಾರಿಸುವ ಪ್ರತಿ ಸಿಕ್ಸ್‌ಗೆ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ 6 ಮನೆಗಳಿಗೆ ಸೋಲಾರ್ ಶಕ್ತಿಯೊಂದಿಗೆ ವಿದ್ಯುತ್ ನೀಡುವುದಾಗಿ ಘೋಷಿಸಿದೆ.

ಸದ್ಯ ನಡೆಯುತ್ತಿರುವ ಐಪಿಎಲ್ 2024ರ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ತಮ್ಮ ಎರಡನೇ ಗೆಲುವಿನ ಹುಡುಕಾಟದಲ್ಲಿದ್ದರೆ, ರಾಜಸ್ಥಾನ್ ರಾಯಲ್ಸ್ ತಂಡ ತಮ್ಮ ನಾಲ್ಕನೇ ಗೆಲುವನ್ನು ಎದುರು ನೋಡುತ್ತಿದೆ.

ರಾಜಸ್ಥಾನ್ ರಾಯಲ್ಸ್ ತಂಡ ಆಡಿದ ಮೂರು ಪಂದ್ಯಗಳನ್ನು ಗೆದ್ದು, 6 ಅಂಕಗಳೊಂದಿಗೆ ಐಪಿಎಲ್ 2024ರ ಅಂಕಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದ್ದರೆ, ಆರ್‌ಸಿಬಿ ತಂಡ ಆಡಿದ ನಾಲ್ಕು ಪಂದ್ಯಗಳಲ್ಲಿ ಒಂದು ಗೆಲುವು ಮತ್ತು ಮೂರು ಸೋಲು ಕಂಡಿದ್ದು, 2 ಅಂಕಗಳೊಂದಿಗೆ 8ನೇ ಸ್ಥಾನದಲ್ಲಿದೆ.

RCB vs RR IPL 2024 Royal Challengers Bengaluru vs Rajasthan Royals Toss Report and Playing 11

ಆರ್‌ಸಿಬಿ vs ರಾಜಸ್ಥಾನ್ ರಾಯಲ್ಸ್ ಪಂದ್ಯದ ಟಿವಿ, ಲೈವ್ ಸ್ಟ್ರೀಮಿಂಗ್ ಮಾಹಿತಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ್ ರಾಯಲ್ಸ್ ನಡುವಿನ ಪಂದ್ಯವನ್ನು ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರಪ್ರಸಾರ ಮಾಡಲಾಗುತ್ತದೆ. ಮೊಬೈಲ್‌ನಲ್ಲಿ ಪಂದ್ಯವನ್ನು ವೀಕ್ಷಿಸಲು ಬಯಸುವ ವೀಕ್ಷಕರು JioCinema ಮೊಬೈಲ್ ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ಲೈವ್ ಸ್ಟ್ರೀಮಿಂಗ್ ನೋಡಬಹುದು.

ಆರ್‌ಸಿಬಿ vs ರಾಜಸ್ಥಾನ್ ರಾಯಲ್ಸ್ ಸಂಭಾವ್ಯ ಆಡುವ 11ರ ಬಳಗ

ರಾಯಲ್ ಚಾಲೆಂಜರ್ಸ್ ಬೆಂಗಳೂರು: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್‌ವೆಲ್, ಕ್ಯಾಮೆರಾನ್ ಗ್ರೀನ್, ದಿನೇಶ್ ಕಾರ್ತಿಕ್(ವಿಕೆಟ್ ಕೀಪರ್), ಸೌರವ್ ಚೌಹಾಣ್, ರೀಸ್ ಟೋಪ್ಲಿ, ಮಯಾಂಕ್ ಡಾಗರ್, ಮೊಹಮ್ಮದ್ ಸಿರಾಜ್, ಯಶ್ ದಯಾಳ್.

ರಾಜಸ್ಥಾನ್ ರಾಯಲ್ಸ್: ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್(ನಾಯಕ/ ವಿಕೆಟ್ ಕೀಪರ್), ರಿಯಾನ್ ಪರಾಗ್, ಧ್ರುವ್ ಜುರೆಲ್, ಶಿಮ್ರಾನ್ ಹೆಟ್ಮೆಯರ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಅವೇಶ್ ಖಾನ್, ನಾಂದ್ರೆ ಬರ್ಗರ್, ಯುಜ್ವೇಂದ್ರ ಚಾಹಲ್.

Story first published: Saturday, April 6, 2024, 19:11 [IST]
Other articles published on Apr 6, 2024
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+