Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

RCB vs RR: ಐಪಿಎಲ್‌ನ 8ನೇ ಶತಕ ಸಿಡಿಸಿದ ವಿರಾಟ್ ಕೊಹ್ಲಿ; ರಾಯಲ್ಸ್‌ಗೆ ಬೃಹತ್ ಗುರಿ ನೀಡಿದ ಆರ್‌ಸಿಬಿ

ಶನಿವಾರ, ಏಪ್ರಿಲ್ 6ರಂದು ಜೈಪುರದ ಸವಾಯಿ ಮಾನ್‌ಸಿಂಗ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 19ನೇ ಪಂದ್ಯದಲ್ಲಿ ಆತಿಥೇಯ ರಾಜಸ್ಥಾನ್ ರಾಯಲ್ಸ್ (ಆರ್‌ಆರ್‌) ತಂಡದ ವಿರುದ್ಧ ಪ್ರವಾಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡ ಬೃಹತ್ ಮೊತ್ತ ಗಳಿಸಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ವಿರಾಟ್ ಕೊಹ್ಲಿ ಅವರ ಭರ್ಜರಿ ಶತಕ ಮತ್ತು ಫಾಫ್ ಡು ಪ್ಲೆಸಿಸ್ ಅವರ ಅಮೋಘ ಬ್ಯಾಟಿಂಗ್ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 183 ರನ್‌ಗಳನ್ನು ಕಲೆಹಾಕಿದ್ದು, ರಾಜಸ್ಥಾನ್ ರಾಯಲ್ಸ್ ತಂಡಕ್ಕೆ 184 ರನ್‌ಗಳ ಗುರಿ ನೀಡಿದೆ.

RCB vs RR IPL 2024 Virat Kohli s Century Helps To RCB To Set Huge Target For Rajasthan Royals

ಪಿಂಕ್‌ಪ್ರಾಮಿಸ್ ಪಂದ್ಯದಲ್ಲಿ ಆರ್‌ಸಿಬಿ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಅವರು ಐಪಿಎಲ್ 2024ರಲ್ಲಿ ಶತಕ ಸಿಡಿಸಿದ ಮೊದಲ ಬ್ಯಾಟರ್ ಎನಿಸಿದರು. ಅಲ್ಲದೆ, ಐಪಿಎಲ್ ಇತಿಹಾಸದಲ್ಲಿ 8ನೇ ಶತಕ ಬಾರಿಸಿದರು.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಇನ್ನಿಂಗ್ಸ್ ಆರಂಭಿಸಿದ ನಾಯಕ ಫಾಫ್ ಡು ಪ್ಲೆಸಿಸ್ ಮತ್ತು ವಿರಾಟ್ ಕೊಹ್ಲಿ ಭರ್ಜರಿ ಆರಂಭ ಒದಗಿಸಿದರು. ಈ ಜೋಡಿ ಮೊದಲ ವಿಕೆಟ್‌ಗೆ 14 ಓವರ್‌ಗಳಲ್ಲಿ 125 ರನ್‌ಗಳ ಬೃಹತ್ ಜೊತೆಯಾಟ ನಿರ್ಮಿಸಿತು.

RCB vs RR IPL 2024 Virat Kohli s Century Helps To RCB To Set Huge Target For Rajasthan Royals

ಫಾಫ್ ಡು ಪ್ಲೆಸಿಸ್ 33 ಎಸೆತಗಳಲ್ಲಿ 2 ಬೌಂಡರಿ ಹಾಗೂ 2 ಸಿಕ್ಸರ್ ಸಮೇತ 44 ರನ್ ಗಳಿಸಿ ಔಟಾದರು. ನಂತರ ಬಂದ ಗ್ಲೆನ್ ಮ್ಯಾಕ್ಸ್‌ವೆಲ್ ಮತ್ತೊಮ್ಮೆ ವೈಫಲ್ಯ ಕಂಡರು ಮತ್ತು ಕೇವಲ 1 ರನ್ ಗಳಿಸಿದರು. ಚೊಚ್ಚಲ ಐಪಿಎಲ್ ಪಂದ್ಯವಾಡಿದ ಸೌರವ್ ಚೌಹಾಣ್ 6 ಎಸೆತಗಳಲ್ಲಿ 9 ರನ್ ಗಳಿಸಿದರು. ಉಳಿದಂತೆ ಕ್ಯಾಮೆರಾನ್ ಗ್ರೀನ್ ಅಜೇಯ 6 ರನ್ ಗಳಿಸಿದರು.

ಇನ್ನು ಎಂದಿನಂತೆ ತಂಡದ ಬ್ಯಾಟಿಂಗ್ ಇನ್ನಿಂಗ್ಸ್‌ ಅನ್ನು ಮತ್ತೊಮ್ಮೆ ಏಕಾಂಗಿಯಾಗಿ ಮುನ್ನಡೆಸಿದ ವಿರಾಟ್ ಕೊಹ್ಲಿ ಅಮೋಘ ಶತಕ ಬಾರಿಸಿದರು. 72 ಎಸೆತಗಳನ್ನು ಎದುರಿಸಿ 12 ಬೌಂಡರಿಗಳು ಹಾಗೂ 4 ಸಿಕ್ಸರ್‌ಗಳ ನೆರವಿನಿಂದ ಅಜೇಯ 113 ರನ್ ಕಲೆಹಾಕಿದರು.

ಅಲ್ಲದೆ, ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಇತಿಹಾಸದಲ್ಲಿ 7500 ರನ್‌ಗಳ ಮೈಲುಗಲ್ಲನ್ನು ತಲುಪಿದ ಮೊದಲ ಬ್ಯಾಟರ್ ಎಂಬ ಹೆಗ್ಗಳಿಕೆಗೆ ವಿರಾಟ್ ಕೊಹ್ಲಿ ಪಾತ್ರರಾದರು. ರಾಜಸ್ಥಾನ್ ರಾಯಲ್ಸ್ 34 ರನ್‌ ಗಳಿಸುತ್ತಿದ್ದಂತೆಯೇ ಬೃಹತ್ ದಾಖಲೆ ನಿರ್ಮಿಸಿದರು.

ಬೌಲಿಂಗ್‌ನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಪರ ಯುಜ್ವೇಂದ್ರ ಚಹಾಲ್ 4 ಓವರ್‌ಗಳಲ್ಲಿ 34 ರನ್ ನೀಡಿ 2 ವಿಕೆಟ್ ಪಡೆದರೆ, ನಾಂದ್ರೆ ಬರ್ಗರ್ 4 ಓವರ್‌ಗಳಲ್ಲಿ 33 ರನ್ ನೀಡಿ 1 ವಿಕೆಟ್ ಪಡೆದರು. ಉಳಿದ ಬೌಲರ್‌ಗಳು ವಿಕೆಟ್ ರಹಿತರಾದರು ಮತ್ತು ಹೆಚ್ಚಿನ ರನ್ ಬಿಟ್ಟುಕೊಟ್ಟರು.

Story first published: Saturday, April 6, 2024, 21:17 [IST]
Other articles published on Apr 6, 2024
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+