RCB vs RR IPL 2025: ಜೈಪೂರದಲ್ಲಿ ಆರ್‌ಸಿಬಿ ಗೆಲುವಿನ ಜೈಕಾರ
ತವರಿನ ಅಂಗಳದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಪಂದ್ಯದಲ್ಲಿ ನಿರಾಸೆ ಅನುಭವಿಸಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಭಾನುವಾರ ಗೆಲುವಿನ ಟ್ರ್ಯಾಕ್‌ಗೆ ಮರಳಿದೆ. ರಾಜಸ್ಥಾನ ರಾಯಲ್ಸ್ ತವರಿನಲ್ಲಿ ಜಯ ಸಾಧಿಸುವ ಕನಸು ಕಮರಿದೆ. ಭರ್ಜರಿ ಪ್ರದರ್ಶನ ನೀಡಿರುವ ಆರ್‌ಸಿಬಿ 9 ವಿಕೆಟ್‌ಗಳಿಂದ ಆತಿಥೇಯ ತಂಡವನ್ನು ಮಣಿಸಿ ಅಬ್ಬರಿಸಿದೆ. ಈ ಮೂಲಕ ಅಂಕ ಪಟ್ಟಿಯಲ್ಲಿ ಬಡ್ತಿ ಪಡೆದಿದೆ.
ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ 20 ಓವರ್‌ಗಳಲ್ಲಿ 4 ವಿಕೆಟ್‌ಗೆ 173 ರನ್ ಕಲೆ ಹಾಕಿತು. ಇದಕ್ಕುತ್ತರವಾಗಿ ಬ್ಯಾಟ್ ಮಾಡಿದ ಬೆಂಗಳೂರು ತಂಡ 17.3 ಓವರ್‌ಗಳಲ್ಲಿ 1 ವಿಕೆಟ್ ಕಳೆದುಕೊಂಡು ಗೆಲುವಿನ ಗೆರೆ ದಾಟಿತು. ಈ ಗೆಲುವಿನ ಮೂಲಕ ಆರ್‌ಸಿಬಿ ಮೂರನೇ ಸ್ಥಾನಕ್ಕೆ ಬಡ್ತಿ ಪಡೆದಿದೆ. ಆಡಿದ ಆರು ಪಂದ್ಯಗಳಲ್ಲಿ 4 ಜಯ, 2 ಸೋಲು ಕಂಡಿರುವ ಆರ್‌ಸಿಬಿ 8 ಅಂಕ ಕಲೆ ಹಾಕಿದೆ.

ಚೆನ್ನೈ, ಮುಂಬೈ, ಕೋಲ್ಕತ್ತಾದಲ್ಲಿ ಆತಿಥೇಯರನ್ನು ಸೋಲಿಸಿದ್ದ, ಬಳಿಕ ಜೈಪುರದಲ್ಲಿ ಆರ್‌ಸಿಬಿ ಗೆಲುವು ದಾಖಲಿಸಿದೆ. ಈ ಮೂಲಕ ಆರ್‌ಸಿಬಿ ಅಮೋಘ ಪ್ರದರ್ಶನ ನೀಡಿದೆ. ರಾಜಸ್ಥಾನ ನೀಡಿದ್ದ 174 ರನ್ ಗುರಿಯನ್ನು ಬೆನ್ನಟ್ಟಿದ ಆರ್‌ಸಿಬಿ ತಂಡದ ಆರಂಭ ಅಮೋಘವಾಗಿತ್ತು. ಆರ್‌ಸಿಬಿ ತಂಡದ ಆರಂಭಿಕರಾದ ವಿರಾಟ್ ಕೊಹ್ಲಿ, ಫಿಲ್ ಸಾಲ್ಟ್ ಜೋಡಿ ತಂಡಕ್ಕೆ ಭರ್ಜರಿ ಜೊತೆಯಾಟದ ಕಾಣಿಕೆ ನೀಡಿದರು. ಈ ಜೋಡಿ ಪವರ್ ಪ್ಲೇನಲ್ಲಿ ಅಮೋಘ ಜೊತೆಯಾಟದ ಕಾಣಿಕೆ ನೀಡಿತು. ಈ ಜೋಡಿ ಮೊದಲ ವಿಕೆಟ್‌ಗೆ 52 ಎಸೆತಗಳಲ್ಲಿ 92 ರನ್‌ಗಳ ಕಾಣಿಕೆ ನೀಡಿ ಅಬ್ಬರಿಸಿತು.
ಸಾಲ್ಟ್, ಕೊಹ್ಲಿ ಅರ್ಧಶತಕ
ಬೆಂಗಳೂರಿನಲ್ಲಿ ಇಲ್ಲದ ರನ್ ಕದಿಯಲು ಹೋಗಿ ಔಟ್ ಆಗಿದ್ದ ಫಿಲ್ ಸಾಲ್ಟ್ ರಾಜಸ್ಥಾನ ವಿರುದ್ಧದ ಪಂದ್ಯದಲ್ಲಿ ಸೊಗಸಾದ ಪ್ರದರ್ಶನ ನೀಡಿದರು. 33 ಎಸೆತಗಳಲ್ಲಿ 5 ಬೌಂಡರಿ, 6 ಸಿಕ್ಸರ್ ಸಹಾಯದಿಂದ 65 ರನ್ ಸೇರಿಸಿ ಔಟ್ ಆದರು.
ಆರಂಭಿಕರಾದ ವಿರಾಟ್ ಕೊಹ್ಲಿ ತಮ್ಮ ಕ್ಲಾಸಿಕ್ ಬ್ಯಾಟಿಂಗ್ ಪ್ರದರ್ಶನ ಮುಂದುವರೆಸಿದರು. ಇವರು ಐಪಿಎಲ್‌ನಲ್ಲಿ ತಮ್ಮ ಸ್ಥಿರ ಪ್ರದರ್ಶನ ಮುಂದುವರೆಸಿದ್ದು, ಜೈಪುರ್ ಬೌಲರ್‌ಗಳನ್ನು ಕಾಡಿದರು. ಇವರು 4 ಬೌಂಡರಿ, 2 ಸಿಕ್ಸರ್ ಸಹಾಯದಿಂದ ಅಜೇಯ 62 ರನ್ ಸಿಡಿಸಿದರು. ಈ ಮೂಲಕ ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್‌ನಲ್ಲಿ 100ನೇ ಅರ್ಧಶತಕ ಬಾರಿಸಿದ ಹಿರಿಮೆ ತಮ್ಮದಾಗಿಸಿಕೊಂಡರು. ಇವರಿಗೆ ದೇವದತ್ ಪಡಿಕ್ಕಲ್ ಉತ್ತಮ ಸಾಥ್ ನೀಡಿದರು. ಇವರು ಅಜೇಯ 40 ರನ್ ಬಾರಿಸಿದ ಪರಿಣಾಮ ಪಂದ್ಯ ಏಕಪಕ್ಷೀಯವಾಯಿತು.

ಯಶಸ್ವಿ ಜೈಸ್ವಾಲ್ ಮಿಂಚು
ರಾಜಸ್ಥಾನ ರಾಯಲ್ಸ್ ತಂಡದ ಪರ ಯಾರೊಬ್ಬ ಬ್ಯಾಟರ್ ಸ್ಥಿರ ಬ್ಯಾಟಿಂಗ್ ಪ್ರದರ್ಶನ ನೀಡಲಿಲ್ಲ. ಆರಂಭಿಕ ಯಶಸ್ವಿ ಜೈಸ್ವಾಲ್ 10 ಬೌಂಡರಿ, 2 ಸಿಕ್ಸರ್ ಸಹಾಯದಿಂದ 75 ರನ್ ಸಿಡಿಸಿ ತಂಡಕ್ಕೆ ಆಧಾರವದರು. ಉಳಿದಂತೆ ಸಂಜು ಸ್ಯಾಮ್ಸನ್ 15, ರಿಯಾನ್ ಪರಾಗ್ 30, ಧ್ರುವ್ ಜುರೇಲ್ ಅಜೇಯ 35 ರನ್ ಬಾರಿಸಿ ತಂಡದ ಮೊತ್ತವನ್ನು ಹಿಗ್ಗಿಸಿದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications