RCB vs RR IPL 2025: ಆರ್‌ಸಿಬಿಗೆ 174 ರನ್ ಗುರಿ ನೀಡಿದ ರಾಜಸ್ಥಾನ
ಭರವಸೆಯ ಬ್ಯಾಟರ್ ಯಶಸ್ವಿ ಜೈಸ್ವಾಲ್ ಅವರು ಬಾರಿಸಿದ ಅರ್ಧಶತಕದ ಬಲದಿಂದ ರಾಜಸ್ಥಾನ ರಾಯಲ್ಸ್, 18ನೇ ಆವೃತ್ತಿಯ 28ನೇ ಪಂದ್ಯದಲ್ಲಿ 174 ರನ್‌ಗಳ ಗುರಿಯನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ನೀಡಿದೆ. ರಾಜಸ್ಥಾನ ರಾಯಲ್ಸ್ ಮೊದಲು ಬ್ಯಾಟ್ ಮಾಡಿ 20 ಓವರ್‌ಗಳಲ್ಲಿ 4 ವಿಕೆಟ್‌ಗೆ 173 ರನ್ ಸಿಡಿಸಿತು.
ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ ರಾಯಲ್ಸ್ ತಂಡದ ಆರಂಭ ಉತ್ತಮವಾಗಿತ್ತು. ರಾಜಸ್ಥಾನ ರಾಯಲ್ಸ್ ತಂಡದ ಆರಂಭಿಕರಾದ ಯಶಸ್ವಿ ಜೈಸ್ವಾಲ್ ಹಾಗೂ ಸಂಜು ಸ್ಯಾಮ್ಸನ್ ಜೋಡಿ ಪವರ್ ಪ್ಲೇನಲ್ಲಿ ಉತ್ತಮ ಜೊತೆಯಾಟದ ಕಾಣಿಕೆ ನೀಡಿತು. ಈ ಅವಧಿಯಲ್ಲಿ ಯಾವುದೇ ವಿಕೆಟ್ ಬೀಳದಂತೆ ಕಾಯ್ದುಕೊಂಡು ಬ್ಯಾಟ್ ಮಾಡಿದ ಸಂಜು, ಯಶಸ್ವಿ ಮೊದಲ ಆರು ಓವರ್‌ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 45 ರನ್ ಸಿಡಿಸಿದೆ.

ಆದರೆ ಪವರ್ ಪ್ಲೇ ಬಳಿಕ ಮೊದಲ ಓವರ್‌ನ್ನು ಮಾಡಲು ಕೃನಾಲ್ ಪಾಂಡ್ಯ ಮುಂದಾದರು. ಈ ವೇಳೆ ಕೃನಾಲ್ ಅವರ ಮೊದಲ ನಾಲ್ಕು ಎಸೆತದಲ್ಲಿ ಸಿಂಗಲ್ ತೆಗೆದುಕೊಂಡು ರನ್ ಹಿಗ್ಗಿಸಿತು. ಆದರೆ ಐದನೇ ಎಸೆತವನ್ನು ಎದುರಿಸುವಲ್ಲಿ ಸಂಜು ಸ್ಯಾಮ್ಸನ್ ವಿಫಲರಾದರು. ಅಲ್ಲದೆ ಕೃನಾಲ್ ಬೌಲಿಂಗ್‌ನಲ್ಲಿ ಬಿಗ್ ಹಿಟ್ ಬಾರಿಸಲು ಹೋಗಿ ಸ್ಟಂಪ್ ಔಟ್ ಆದರು.
ಸಂಜು ಸ್ಯಾಮ್ಸನ್ ಔಟ್ ಆಗುತ್ತಿದ್ದಂತೆ ಮೈದಾನಕ್ಕೆ ಇಳಿದ ರಿಯಾನ್ ಪರಾಗ್ ಹಾಗೂ ಯಶಸ್ವಿ ಜೈಸ್ವಾಲ್ ಜೋಡಿ ತಂಡಕ್ಕೆ ಉತ್ತಮ ಜೊತೆಯಾಟದ ಕಾಣಿಕೆ ನೀಡಿತು. ಈ ಜೋಡಿ 39 ಎಸೆತಗಳಲ್ಲಿ 56 ರನ್‌ಗಳ ಜೊತೆಯಾಟದ ಕಾಣಿಕೆ ನೀಡಿತು. ಈ ಜೊತೆಯಾಟವನ್ನು ಬೇರ್ಪಡಿಸುವಲ್ಲಿ ಯಶ್ ದಯಾಳ್ ಯಶಸ್ವಿಯಾದರು. ರಿಯನ್ ಪರಾಗ್ 30 ರನ್ ಬಾರಿಸಿ ಔಟ್ ಆದರು.
ಯಶಸ್ವಿ ಜೈಸ್ವಾಲ್ ಅರ್ಧಶತಕ
ಆರಂಭಿಕ ಯಶಸ್ವಿ ಜೈಸ್ವಾಲ್ ಅವರು ಬೆಂಗಳೂರು ವಿರುದ್ಧದ ಪಂದ್ಯದಲ್ಲಿ ತಮ್ಮ ಅನುಭವ ಬಳಸಿಕೊಂಡು ಬ್ಯಾಟ್ ಮಾಡಿದರು. ಇವರ ಆಟಕ್ಕೆ ಕಡಿವಾಣ ಹಾಕುವಲ್ಲಿ ಆರ್‌ಸಿಬಿ ಬೌಲರ್‌ಗಳು ವಿಫಲರಾದರು. ಇವರು 47 ಎಸೆತಗಳಲ್ಲಿ 10 ಬೌಂಡರಿ, 2 ಸಿಕ್ಸರ್ ನೆರವಿನಿಂದ 75 ರನ್ ಸಿಡಿಸಿ ಔಟ್ ಆದರು. ಇವರಿಗೆ ಜೋಶ್ ಹ್ಯಾಜಲ್‌ವುಡ್ ಖೆಡ್ಡಾ ತೋಡುವಲ್ಲಿ ಸಫಲರಾದರು.

ಧ್ರುವ್ ಜುರೇಲ್ 2 ಬೌಂಡರಿ, 2 ಸಿಕ್ಸರ್ ಸಹಾಯದಿಂದ ಅಜೇಯ 35 ರನ್ ಸಿಡಿಸಿದರು. ಶಿಮ್ರೋನ್ ಹೆಟ್ಮೆಯರ್ ದೊಡ್ಡ ಇನಿಂಗ್ಸ್ ಕಟ್ಟುವಲ್ಲಿ ವಿಫಲರಾದರು. ಆರ್‌ಸಿಬಿ ಪರ ಭುವನೇಶ್ವರ್ ಕುಮಾರ್, ಯಶ್ ದಯಾಳ್, ಜೋಶ್ ಹ್ಯಾಜಲ್‌ವುಡ್, ಕೃನಾಲ್ ಪಾಂಡ್ಯ ತಲಾ ಒಂದು ವಿಕೆಟ್ ಪಡೆದರು.
ರಾಜಸ್ಥಾನ ರಾಯಲ್ಸ್ ತಂಡದ ಪರ ಫಜಲ್ಹಕ್ ಫಾರೂಕಿ ಅವರ ಬದಲಿಗೆ ವನಿಂದು ಹಸರಂಗಾ ಅವರನ್ನು ತಂಡದಲ್ಲಿ ಸ್ಥಾನ ನೀಡಲಾಗಿದೆ. ಉಳಿದಂತೆ ತಂಡದಲ್ಲಿ ಯಾವುದೇ ಬದಲಾವಣೆ ಇಲ್ಲ. ಉಳಿದಂತೆ ಆರ್‌ಸಿಬಿ ತಂಡ ಈ ಪಂದ್ಯಕ್ಕಾಗಿ ಗ್ರೀನ್ ಜೆರ್ಸಿಯಲ್ಲಿ ಕಣಕ್ಕೆ ಇಳಿಯಲಿದೆ.
ರಾಜಸ್ಥಾನ್ ರಾಯಲ್ಸ್ ತಂಡ: ಸಂಜು ಸ್ಯಾಮ್ಸನ್ (ನಾಯಕ, ವಿಕೆಟ್ ಕೀಪರ್), ಯಶಸ್ವಿ ಜೈಸ್ವಾಲ್, ನಿತೀಶ್ ರಾಣಾ, ರಿಯಾನ್ ಪರಾಗ್, ಧ್ರುವ್ ಜುರೆಲ್, ಶಿಮ್ರಾನ್ ಹೆಟ್ಮೆಯರ್, ವನಿಂದು ಹಸರಂಗ, ಜೋಫ್ರಾ ಆರ್ಚರ್, ಮಹೇಶ್ ತೀಕ್ಷಣ, ತುಷಾರ್ ದೇಶಪಾಂಡೆ, ಸಂದೀಪ್ ಶರ್ಮಾ
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ಫಿಲ್ ಸಾಲ್ಟ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್ (ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಟಿಮ್ ಡೇವಿಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಜೋಶ್ ಹ್ಯಾಜಲ್‌ವುಡ್, ಯಶ್ ದಯಾಳ್, ಸುಯೇಶ್ ಶರ್ಮಾ,
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications