19ನೇ ಆವೃತ್ತಿಯ ಐಪಿಎಲ್‌ನ 16ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಹಾಗೂ ರಾಜಸ್ಥಾನ್ ರಾಯಲ್ಸ್ (ಆರ್‌ಆರ್) ತಂಡಗಳು ಗುವಾಹಟಿಯಲ್ಲಿ ಕಣಕ್ಕೆ ಇಳಿಯಲಿವೆ. ಆದರೆ ಈ ಪಂದ್ಯದ ಆರಂಭಕ್ಕೂ ಮುನ್ನ ಮಳೆ ಆರಂಭವಾಗಿತ್ತು. ಹೀಗಾಗಿ 7 ಗಂಟೆಗೆ ನಡೆಯಬೇಕಿದ್ದ ಟಾಸ್ ಮುಂದೂಡಲಾಗಿತ್ತು. ರಾತ್ರಿ 8 ಗಂಟೆಗೆ ನಡೆದ ಟಾಸ್ ನಡೆಯಿತು. ಈ ವೇಳೆ ರಾಯಲ್ಸ್ ಟಾಸ್ ಗೆದ್ದಿದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಲು ಮುಂದಾಗಿವೆ.
ಉಭಯ ತಂಡಗಳು ಈ ಬಾರಿಯ ಐಪಿಎಲ್‌ನಲ್ಲಿ ಅಮೋಘ ಪ್ರದರ್ಶನ ನೀಡುತ್ತಿವೆ. ರಾಜಸ್ಥಾನ್ ಆಡಿದ ಮೂರು ಪಂದ್ಯಗಳನ್ನು ಗೆದ್ದು ಆತ್ಮವಿಶ್ವಾಸದಿಂದ ಬೀಗುತ್ತಿದೆ. ಇನ್ನು ಆರ್‌ಸಿಬಿ ಹ್ಯಾಟ್ರಿಕ್ ಗೆಲುವಿನ ಕನಸು ಕಾಣುತ್ತಿದೆ. ಹೀಗಾಗಿ ಈ ಪಂದ್ಯದ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಈ ಬಾರಿಯ ಐಪಿಎಲ್‌ನಲ್ಲಿ ರಾಜಸ್ಥಾನ್ ಆಡಿದ ಮೂರು ಪಂದ್ಯಗಳನ್ನು ಗೆದ್ದಿದ್ದು ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. ಆರ್‌ಸಿಬಿ 4 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದೆ.

ಆರ್‌ಸಿಬಿ ತಂಡ ಒಂದು ಬದಲಾವಣೆಯೊಂದಿಗೆ ಕಣಕ್ಕೆ ಇಳಿಯಲಿದೆ. ಈ ಪಂದ್ಯದಲ್ಲಿ ಜೇಕಬ್ ಡಫಿ ಅವರನ್ನು ತಂಡದಿಂದ ಕೈ ಬಿಡಲಾಗಿದ್ದು, ಇವರ ಬದಲಿಗೆ ಆಸ್ಟ್ರೇಲಿಯಾ ತಂಡದ ಜೋಶ್ ಹ್ಯಾಜಲ್‌ವುಡ್ ತಂಡಕ್ಕೆ ಸೇರಿಕೊಂಡಿದ್ದಾರೆ.