ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾನುವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ರಾಜಸ್ಥಾನ್ ರಾಯಲ್ಸ್ ಕಣಕ್ಕಿಳಿದಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡ ಇನ್ನಿಂಗ್ಸ್‌ನ ಮೊದಲ ಎಸೆತದಲ್ಲಿಯೇ ದೊಡ್ಡ ಯಶಸ್ಸು ಸಾಧಿಸಿದೆ. ಈ ಬಾರಿಯ ಐಪಿಎಲ್‌ನಲ್ಲಿ ಅದ್ಭುತವಾಗಿ ರನ್‌ಗಳಿಸುತ್ತಿರುವ ವಿರಾಟ್ ಕೊಹ್ಲಿ ಮೊದಲ ಎಸೆತದಲ್ಲಿಯೇ ವಿಕೆಟ್ ಕಳೆದುಕೊಂಡಿದ್ದಾರೆ.
ಟ್ರೆಂಟ್ ಬೋಲ್ಟ್ ಎಸೆದ ಎಸೆತದಲ್ಲಿ ವಿರಾಟ್ ಕೊಹ್ಲಿ ಎಲ್‌ಬಿಡಬ್ಲ್ಯುಗೆ ಬಲಿಯಾಗಿದ್ದಾರೆ. ಈ ಮೂಲಕ ರಾಜಸ್ಥಾನ್ ರಾಯಲ್ಸ್ ತಂಡದ ವೇಗಿ ಟ್ರೆಂಟ್ ಬೋಲ್ಟ್ ಐಪಿಎಲ್‌ನಲ್ಲಿ ದೊಡ್ಡ ಮೈಲಿಗಲ್ಲೊಂದನ್ನು ಸಾಧಿಸಿದ್ದಾರೆ. ವಿರಾಟ್ ಕೊಹ್ಲಿ ವಿಕೆಟ್ ಪಡೆದ ಬೋಲ್ಟ್ ಐಪಿಎಲ್‌ನಲ್ಲಿ 100ನೇ ವಿಕೆಟ್ ಪಡೆದಂತಾಗಿದೆ.

ಆರಂಭಿಕ ಯಶಸ್ಸು ಪಡೆದ ಆರ್‌ಆರ್
ಇನ್ನು ಈ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಬೌಲಿಂಗ್‌ನಲ್ಲಿ ಆರಂಭದಲ್ಲಿಯೇ ಯಶಸ್ಸು ಸಾಧಿಸಿದೆ. ಮೊದಲ ಓವರ್‌ನ ಮೊದಲ ಎಸೆತದಲ್ಲಿ ಟ್ರೆಂಟ್ ಬೋಲ್ಟ್ ವಿರಾಟ್ ಕೊಹ್ಲಿ ವಿಕೆಟ್ ಪಡೆದರೆ ಪಂದ್ಯದ ಮೂರನೇ ಓವರ್ ಎಸೆಯಲು ಬಂದ ಬೋಲ್ಡ್ ಈ ಓವರ್‌ನ ಮೊದಲ ಎಸೆತದಲ್ಲಿಯೂ ಮತ್ತೊಂದು ವಿಕೆಟ್ ಪಡೆದರು. ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಶಹ್ಬಾಜ್ ಅಹ್ಮದ್ ಸುಲಭ ಕ್ಯಾಚ್ ನೀಡಿ ನಿರ್ಗಮಿಸಿದ್ದಾರೆ.
ಆರ್‌ಸಿಬಿಗೆ ಯಶಸ್ಸು ನೀಡಿದ್ದ ಕೊಹ್ಲಿ- ಫಾಫ್ ಜೋಡಿ
ಈ ಬಾರಿಯ ಐಪಿಎಲ್‌ನಲ್ಲಿ ಆರ್‌ಸಿಬಿ ತಂಡದ ಯಶಸ್ಸಿನಲ್ಲಿ ದೊಡ್ಡ ಪಾತ್ರವಹಿಸಿದ್ದು ಆರಂಬಿಕ ಆಟಗಾರರಾದ ವಿರಾಟ್ ಕೊಹ್ಲಿ ಹಾಗೂ ಫಾಫ್ ಡು ಪ್ಲೆಸಿಸ್ ಜೋಡಿ. ಬಹುತೇಕ ಪಂದ್ಯಗಳಲ್ಲಿ ಈ ಜೊಡಿಯಿಂದ ಅಮೋಘ ಪ್ರದರ್ಶನ ಬಂದಿತ್ತು. ಹೀಗಾಗಿ ಆರ್‌ಆರ್ ವಿರುದ್ಧವೂ ಸಾಕಷ್ಟು ನಿರೀಕ್ಷೆಯಿತ್ತು. ಆದರೆ ಕೊಹ್ಲಿ ವಿಕೆಟನ್ನು ಅಗ್ಗಕ್ಕೆ ಪಡೆಯುವ ಮೂಲಕ ಆರ್‌ಆರ್ ಆಘಾತ ನೀಡಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು: ವಿರಾಟ್ ಕೊಹ್ಲಿ (ನಾಯಕ), ಫಾಫ್ ಡು ಪ್ಲೆಸಿಸ್, ಮಹಿಪಾಲ್ ಲೊಮ್ರೊರ್, ಗ್ಲೆನ್ ಮ್ಯಾಕ್ಸ್‌ವೆಲ್, ಶಹಬಾಜ್ ಅಹ್ಮದ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಸುಯಶ್ ಪ್ರಭುದೇಸಾಯಿ, ಡೇವಿಡ್ ವಿಲ್ಲಿ, ವನಿಂದು ಹಸರಂಗ, ಮೊಹಮ್ಮದ್ ಸಿರಾಜ್, ವಿಜಯಕುಮಾರ್ ವೈಶಾಕ್
ಬೆಂಚ್: ಹರ್ಷಲ್ ಪಟೇಲ್, ಫಿನ್ ಅಲೆನ್, ಆಕಾಶ್ ದೀಪ್, ಕರ್ಣ್ ಶರ್ಮಾ, ಅನುಜ್ ರಾವತ್, ಸಿದ್ದಾರ್ಥ್ ಕೌಲ್, ಮೈಕೆಲ್ ಬ್ರೇಸ್‌ವೆಲ್, ಸೋನು ಯಾದವ್, ಮನೋಜ್ ಭಾಂಡಗೆ, ರಾಜನ್ ಕುಮಾರ್, ಅವಿನಾಶ್ ಸಿಂಗ್, ಹಿಮಾಂಶು ಶರ್ಮಾ, ವೇಯ್ನ್ ಪಾರ್ನೆಲ್
ರಾಜಸ್ಥಾನ್ ರಾಯಲ್ಸ್: ಜೋಸ್ ಬಟ್ಲರ್, ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್ (ನಾಯಲ & ವಿಕೆಟ್ ಕೀಪರ್), ದೇವದತ್ ಪಡಿಕ್ಕಲ್, ಶಿಮ್ರಾನ್ ಹೆಟ್ಮೆಯರ್, ಧ್ರುವ ಜುರೆಲ್, ರವಿಚಂದ್ರನ್ ಅಶ್ವಿನ್, ಜೇಸನ್ ಹೋಲ್ಡರ್, ಟ್ರೆಂಟ್ ಬೌಲ್ಟ್, ಸಂದೀಪ್ ಶರ್ಮಾ, ಯುಜ್ವೇಂದ್ರ ಚಾಹಲ್
ಬೆಂಚ್: ಅಬ್ದುಲ್ ಬಸಿತ್, ಆಕಾಶ್ ವಸಿಷ್ಟ್, ಡೊನಾವನ್ ಫೆರೇರಾ, ಮುರುಗನ್ ಅಶ್ವಿನ್, ಕೆಎಂ ಆಸಿಫ್, ರಿಯಾನ್ ಪರಾಗ್, ಜೋ ರೂಟ್, ಆಡಮ್ ಝಂಪಾ, ನವದೀಪ್ ಸೈನಿ, ಕೆಸಿ ಕಾರಿಯಪ್ಪ, ಓಬೇದ್ ಮೆಕಾಯ್, ಕುಲದೀಪ್ ಯಾದವ್, ಕುಲದೀಪ್ ಸೇನ್, ಕುನಾಲ್ ಸಿಂಗ್ ರಾಥೋಡ್