ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

RCB vs SRH: ದಿನೇಶ್ ಕಾರ್ತಿಕ್ ಸಿಡಿಲಬ್ಬರದ ಬ್ಯಾಟಿಂಗ್‌ ಕಂಡ ವಿರಾಟ್ ಕೊಹ್ಲಿ ಮಾಡಿದ್ದೇನು? ವಿಡಿಯೋ

RCB vs SRH: After Dinesh Karthiks whirlwind knock against SRH, see what Virat Kohli did

ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸರ್ವಾಂಗೀಣ ಪ್ರದರ್ಶನ ನೀಡಿ ಸೇಡು ತೀರಿಸಿಕೊಂಡಿದೆ. ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡೂ ವಿಭಾಗದಲ್ಲಿಯೂ ಆರ್‌ಸಿಬಿ ಭರ್ಜರಿ ಪ್ರದರ್ಶನ ನೀಡುವ ಮೂಲಕ ಸನ್‌ರೈಸರ್ಸ್ ಹೈದರಾಬಾದ್ ತಂಡಕ್ಕೆ ಯಾವುದೇ ಅವಕಾಶವಿಲ್ಲದಂತೆ ಮಾಡಿತು. ಬ್ಯಾಟಿಂಗ್‌ನಲ್ಲಿ ಆರಂಭದಲ್ಲಿ ನಾಯಕ ಫಾಫ್ ಡು ಪ್ಲೆಸಿಸ್ ಹಾಗೂ ರಜತ್ ಪಾಟೀದಾರ್ ಕೊಡುಗೆ ನೀಡಿದರೆ ಅಂತಿಮ ಹಂತದಲ್ಲಿ ಅನುಭವಿ ದಿನೇಶ್ ಕಾರ್ತಿಕ್ ಮತ್ತೊಮ್ಮೆ ಸ್ಪೋಟಕ ಪ್ರದರ್ಶನ ನೀಡಿದರು.

ದಿನೇಶ್ ಕಾರ್ತಿಕ್ ಈ ಪಂದ್ಯದಲ್ಲಿ ಕೇವಲ 8 ಎಸೆತಗಳನ್ನು ಮಾತ್ರವೇ ಎದುರಿಸಿದರು. ಆದರೆ ಇದರಲ್ಲಿ ನಾಲ್ಕು ಸಿಕ್ಸರ್ ಹಾಗೂ ಒಂದು ಬೌಂಡರಿ ಬಾರಿಸಿದ ಡಿಕೆ ಭರ್ಜರಿ 30 ರನ್‌ಗಳ ಕೊಡುಗೆಯನ್ನು ನೀಡಿದರು. ಈ ಸ್ಪೋಟಕ ಬ್ಯಾಟಿಂಗ್‌ನಿಂದಾಗಿ ಆರ್‌ಸಿಬಿ 192 ರನ್‌ಗಳನ್ನು ಗಳಿಸಲು ಸಾಧ್ಯವಾಯಿತು. ಭರ್ಜರಿ 375ರ ಸ್ಟ್ರೈಕ್‌ರೇಟ್‌ನಲ್ಲಿ ಡಿಕೆ ಬ್ಯಾಟಿಂಗ್ ಮಾಡಿದ್ದಾರೆ.

ವಿರಾಟ್ ಕೊಹ್ಲಿ ಕಳಪೆ ಫಾರ್ಮ್; ಆದರೂ ಭಾರತ ತಂಡದಿಂದ ವಿಶ್ರಾಂತಿ ಬೇಡವೆಂದ ಮಾಜಿ ಕ್ರಿಕಟಿಗವಿರಾಟ್ ಕೊಹ್ಲಿ ಕಳಪೆ ಫಾರ್ಮ್; ಆದರೂ ಭಾರತ ತಂಡದಿಂದ ವಿಶ್ರಾಂತಿ ಬೇಡವೆಂದ ಮಾಜಿ ಕ್ರಿಕಟಿಗ

ಈ ಬ್ಯಾಟಿಂಗ್ ಪ್ರದರ್ಶನದ ನಂತರ ಫೆವಿಲಿಯನ್‌ಗೆ ತೆರಳಿದ ಸಂದರ್ಭದಲ್ಲಿ ವಿರಾಟ್ ಕೊಹ್ಲಿ ದಿನೇಶ್ ಕಾರ್ತಿಕ್ ಅವರನ್ನು ಬರಮಾಡಿಕೊಂಡ ರೀತಿ ಈಗ ವೈರಲ್ ಆಗಿದೆ. ದಿನೇಶ್ ಕಾರ್ತಿಕ್ ಡ್ರೆಸ್ಸಿಂಗ್ ರೂಮ್‌ಗೆ ಕಾಲಿಡುತ್ತಿದ್ದಂತೆಯೇ ಅಲ್ಲಿ ನಿಂತಿದ್ದ ವಿರಾಟ್ ಕೊಹ್ಲಿ ತಲೆಬಾಗಿ ಅಪ್ಪಿ ಕೊಂಡಿದ್ದಾರೆ. ಈ ಮೂಲಕ ಅನುಭವಿ ಆಟಗಾರನ ಬ್ಯಾಟಿಂಗ್‌ಗೆ ಮಾಜಿ ನಾಯಕ ಕೊಹ್ಲಿ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ.

18.2ನೇ ಓವರ್‌ನಲ್ಲಿ ಗ್ಲೆನ್ ಮ್ಯಾಕ್ಸ್‌ವೆಲ್ ಕಾರ್ತಿಕ್ ತ್ಯಾಗಿ ಎಸೆತದಲ್ಲಿ ಕ್ಯಾಚ್ ನೀಡಿ ನಿರ್ಗಮಿಸಿದರು. ನಂತರ ಕ್ರೀಸ್‌ಗೆ ಇಳಿದ ದಿನೇಶ್ ಕಾರ್ತಿಕ್ ಮುಂದಿನ 10 ಎಸೆತಗಳ ಪೈಕಿ 8 ಎಸೆತಗಳನ್ನು ತಾವೇ ಎದುರಿಸಿದರು. ಕಾರ್ತಿಕ್ ತ್ಯಾಗಿಯ ಈ ಓವರ್‌ನಲ್ಲಿ ಒಂದು ಸಿಕ್ಸರ್ ಸಿಡಿಸಿದ ಕಾರ್ತಿಕ್ ಅಂತಿಮ ಓವರ್‌ನಲ್ಲಿ ನಾಲ್ಕು ಎಸೆತಗಳನ್ನು ಎದುರಿಸಿ ಹ್ಯಾಟ್ರಿಕ್ ಸಿಕ್ಸರ್ ಜೊತೆಗೆ ಒಂದು ಬೌಂಡರಿ ಸಿಡಿಸಿ ಇನ್ನಿಂಗ್ಸ್ ಮುಗಿಸಿದರು. ಫಜಲ್ಲಾಹ್ ಫಾರೂಕಿ ಎಸೆದ ಅಂತಿಮ ಓವರ್‌ನಲ್ಲಿ ಒಟ್ಟು 25 ರನ್‌ಗಳನ್ನು ಆರ್‌ಸಿಬಿ ಗಳಿಸಲು ಯಶಸ್ವಿಯಾಗಿತ್ತು. ಇದರಲ್ಲಿ 22 ರನ್‌ಗಳನ್ನು ದಿನೇಶ್ ಕಾರ್ತಿಕ್ ಗಳಿಸಿದ್ದಾರೆ.

ಇನ್ನು ಈ ಅದ್ಭುತ ಇನ್ನಿಂಗ್ಸ್‌ನ ನಂತರ ಕೊಹ್ಲಿ ದಿನೇಶ್ ಕಾರ್ತಿಕ್ ಅವರನ್ನು ಬರಮಾಡಿಕೊಂಡ ರೀತಿ ಸಾಮಾಜಿಕ ಜಾಲತಾಣದಲ್ ವೈರಲ್ ಆಗಿದೆ. ಅಭಿಮಾನಿಗಳು ಈ ಬಗ್ಗೆ ತಮ್ಮ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದಾರೆ. ವಿರಾಟ್ ಕೊಹ್ಲಿ ಈ ಪಂದ್ಯದಲ್ಲಿ ಆರಂಭಿಕ ಎಸೆತದಲ್ಲಿಯೇ ವಿಕೆಟ್ ಕಳೆದುಕೊಳ್ಳುವ ಮೂಲಕ ನಿರಾಸೆ ಅನುಭವಿಸಿದರು. ಈ ಆವೃತ್ತಿಯಲ್ಲಿ ಮೂರನೇ ಬಾರಿ ಗೋಲ್ಡನ್ ಡಕ್‌ಗೆ ಬಲಿಯಾಗಿದ್ದಾರೆ.

ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಿಂದ ರವೀಂದ್ರ ಜಡೇಜಾ ಹೊರಗುಳಿದಿದ್ದು ಯಾಕೆ? ಇಲ್ಲಿದೆ ಕಾರಣಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಿಂದ ರವೀಂದ್ರ ಜಡೇಜಾ ಹೊರಗುಳಿದಿದ್ದು ಯಾಕೆ? ಇಲ್ಲಿದೆ ಕಾರಣ

ಇನ್ನು ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದು ಅಂತಿಮ ಹಂತದವರೆಗೂ ಅಜೇಯವಾಗುಳಿದ ನಾಯಕ ಫಾಫ್ ಡು ಪ್ಲೆಸಿಸ್ 50 ಎಸೆತಗಳನ್ನು ಎದುರಿಸಿ 73 ರನ್‌ಗಳ ಕೊಡುಗೆ ನೀಡಿದ್ದಾರೆ. ರಜತ್ ಪಾಟೀದಾರ್ ಕೂಡ ಉತ್ತಮ ಪ್ರದರ್ಶನ ನೀಡಿದ್ದು 38 ಎಸೆತಗಳಲ್ಲಿ 48 ರನ್‌ ಗಳಿಸಿದರು.

ಇನ್ನು ಈ ಪಂದ್ಯದಲ್ಲಿ ಆರ್‌ಸಿಬಿ ನೀಡಿದ 193 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಸನ್‌ರೈಸರ್ಸ್ ಹೈದರಾಬಾದ್ ತಂಡದ ಪರವಾಗಿ ರಾಹುಲ್ ತ್ರಿಪಾಠಿ ಮಾತ್ರವೇ ಅರ್ಧ ಶತಕ ಸಿಡಿಸಿ ಮಿಂಚದರು, ಉಳಿದ ಯಾವ ಆಟಗಾರನೂ ಪ್ರತಿರೋಧವೊಡ್ಡಲು ವಿಫಲವಾಗಿದ್ದು ಕೇವಲ 125 ರನ್‌ಗಳಿಗೆ ಆಲೌಟ್ ಆಯಿತು.

Story first published: Monday, May 9, 2022, 16:36 [IST]
Other articles published on May 9, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X