RCB vs SRH IPL 2024: ಚಿನ್ನಸ್ವಾಮಿಯಲ್ಲಿ ರಾಯಲ್ ತಂಡಕ್ಕೆ ಸನ್‌ರೈಸರ್ಸ್ ಚಾಲೆಂಜ್!; ಹೆಡ್-ಟು-ಹೆಡ್ ದಾಖಲೆ
ಸೋಮವಾರ, ಏಪ್ರಿಲ್ 15ರಂದು ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 30ನೇ ಪಂದ್ಯದಲ್ಲಿ ಆತಿಥೇಯ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಮತ್ತು ಸನ್ ರೈಸರ್ಸ್ ಹೈದರಾಬಾದ್ (ಎಸ್‌ಆರ್‌ಎಚ್) ತಂಡಗಳು ರೋಚಕ ಹಣಾಹಣಿ ನಡೆಸಲಿವೆ.
ಪ್ರಮುಖವಾಗಿ, ಐಪಿಎಲ್ 2024ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಈವರೆಗೆ ಅತ್ಯಂತ ನಿರಾಶಾದಾಯಕ ಪ್ರದರ್ಶನ ನೀಡಿದೆ ಮತ್ತು ಈ ಪಂದ್ಯದ ಮೊದಲು ಸತತ ನಾಲ್ಕು ಪಂದ್ಯಗಳಲ್ಲಿ ಸೋಲು ಅನುಭವಿಸಿದೆ. ತನ್ನ ಕೊನೆಯ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ 7 ವಿಕೆಟ್‌ಗಳಿಂದ ಹೀನಾಯ ಸೋಲು ಕಂಡಿತು.

ಪ್ರಸಕ್ತ ಪಂದ್ಯಾವಳಿಯಲ್ಲಿ ಫಾಫ್ ಡು ಪ್ಲೆಸಿಸ್ ನಾಯಕತ್ವದ ಆರ್‌ಸಿಬಿ ತಂಡ ಆಡಿದ ಆರು ಪಂದ್ಯಗಳಲ್ಲಿ ಕೇವಲ ಒಂದು ಗೆಲುವು ಮತ್ತು ಐದು ಸೋಲುಗಳನ್ನು ಕಂಡಿದ್ದು, ಎರಡು ಅಂಕಗಳು ಮತ್ತು -1.124 ನೆಟ್ ರನ್ ರೇಟ್‌ನೊಂದಿಗೆ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ.
ಮತ್ತೊಂದೆಡೆ, ಪ್ಯಾಟ್ ಕಮ್ಮಿನ್ಸ್ ನಾಯಕತ್ವದ ಸನ್ ರೈಸರ್ಸ್ ಹೈದರಾಬಾದ್ ತಂಡ ಈ ಪಂದ್ಯಕ್ಕೂ ಮುನ್ನ ಸತತ ಎರಡು ಪಂದ್ಯಗಳನ್ನು ಗೆದ್ದಿದೆ. ಕೊನೆಯ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು 2 ರನ್‌ಗಳಿಂದ ಸೋಲಿಸಿತ್ತು.
ಐಪಿಎಲ್ 2024ರಲ್ಲಿ ಸನ್ ರೈಸರ್ಸ್ ಹೈದರಾಬಾದ್ ಆಡಿದ ಐದು ಪಂದ್ಯಗಳನ್ನು ಆಡಿದ್ದು, ಮೂರು ಗೆಲುವು ಮತ್ತು ಎರಡು ಸೋಲುಗಳನ್ನು ಕಂಡಿದೆ. ಈ ಮೂಲಕ 6 ಅಂಕಗಳು ಮತ್ತು +0.344 ನೆಟ್ ರನ್ ರೇಟ್‌ನೊಂದಿಗೆ ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ.
ಉಭಯ ತಂಡಗಳ ಹಣಾಹಣಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ರೈಸರ್ಸ್ ಹೈದರಾಬಾದ್ ಹೆಡ್-ಟು-ಹೆಡ್ ದಾಖಲೆಗಳ ನೋಟ ಇಲ್ಲಿದೆ.
ಆರ್‌ಸಿಬಿ vs ಎಸ್‌ಆರ್‌ಎಚ್ ಹೆಡ್-ಟು-ಹೆಡ್ ದಾಖಲೆ
ಐಪಿಎಲ್ ಇತಿಹಾಸದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಒಟ್ಟಾರೆ 23 ಬಾರಿ ಮುಖಾಮುಖಿಯಾಗಿವೆ. ಇದರಲ್ಲಿ ಆರ್‌ಸಿಬಿ ತಂಡ 10 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದರೆ, ಸನ್ ರೈಸರ್ಸ್ ಹೈದರಾಬಾದ್ ತಂಡ 12 ಬಾರಿ ಗೆದ್ದು ಮುನ್ನಡೆ ಸಾಧಿಸಿದ್ದು, ಒಂದು ಪಂದ್ಯ ಫಲಿತಾಂಶವಿಲ್ಲದೆ ಅಂತ್ಯಗೊಂಡಿದೆ.
ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ RCB vs SRH ಹೆಡ್-ಟು-ಹೆಡ್
ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಐಪಿಎಲ್ ಪಂದ್ಯಾವಳಿಯಲ್ಲಿ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 8 ಬಾರಿ ಮುಖಾಮುಖಿಯಾಗಿವೆ;

ಆತಿಥೇಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐದು ಪಂದ್ಯಗಳಲ್ಲಿ ಗೆದ್ದರೆ, ಸನ್ ರೈಸರ್ಸ್ ಹೈದರಾಬಾದ್ ತಂಡ ಎರಡು ಪಂದ್ಯಗಳನ್ನು ಗೆದ್ದರೆ, ಒಂದು ಪಂದ್ಯ ಯಾವುದೇ ಫಲಿತಾಂಶವಿಲ್ಲದೆ ಕೊನೆಗೊಂಡಿದೆ.
ಎಸ್‌ಆರ್‌ಎಚ್ vs ಆರ್‌ಸಿಬಿ ಸಂಭಾವ್ಯ ಆಡುವ 11ರ ಬಳಗ
ರಾಯಲ್ ಚಾಲೆಂಜರ್ಸ್ ಬೆಂಗಳೂರು: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ವಿಲ್ ಜಾಕ್ಸ್, ರಜತ್ ಪಾಟಿದಾರ್, ಕ್ಯಾಮೆರಾನ್ ಗ್ರೀನ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಮಹಿಪಾಲ್ ಲೊಮ್ರೋರ್, ಲಾಕಿ ಫರ್ಗ್ಯುಸನ್, ವಿಜಯ್‌ಕುಮಾರ್ ವೈಶಾಕ್, ರಾಜನ್ ಕುಮಾರ್, ಯಶ್ ದಯಾಳ್.
ಸನ್‌ರೈಸರ್ಸ್ ಹೈದರಾಬಾದ್: ಟ್ರಾವಿಸ್ ಹೆಡ್, ಅಭಿಷೇಕ್ ಶರ್ಮಾ, ಏಡೆನ್ ಮಾರ್ಕ್ರಾಮ್, ಹೆನ್ರಿಚ್ ಕ್ಲಾಸೆನ್ (ವಿಕೆಟ್ ಕೀಪರ್), ನಿತೀಶ್ ರೆಡ್ಡಿ, ಅಬ್ದುಲ್ ಸಮದ್, ಶಹಬಾಜ್ ಅಹ್ಮದ್, ಪ್ಯಾಟ್ ಕಮ್ಮಿನ್ಸ್ (ನಾಯಕ), ಜಯದೇವ್ ಉನಾದ್ಕಟ್, ಭುವನೇಶ್ವರ್ ಕುಮಾರ್, ಟಿ. ನಟರಾಜನ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications