For Quick Alerts
ALLOW NOTIFICATIONS  
For Daily Alerts
 

RCB vs SRH IPL 2024: SRH ವಿರುದ್ಧ RCB ತಂಡಕ್ಕೆ 'ಮಾಡು ಇಲ್ಲವೇ ಮಡಿ' ಪಂದ್ಯ; ಸಂಭಾವ್ಯ ಆಡುವ 11ರ ಬಳಗ

ಸೋಮವಾರ, ಏಪ್ರಿಲ್ 15ರಂದು ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 30ನೇ ಹಣಾಹಣಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವು ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಎದುರಿಸಲಿದೆ.

ಫಾಫ್ ಡು ಪ್ಲೆಸಿಸ್ ನಾಯಕತ್ವದ ಆರ್‌ಸಿಬಿ ತಂಡವು ತವರು ಮೈದಾನದ ಲಾಭವನ್ನು ಪಡೆದುಕೊಳ್ಳಲು ಹೆಣಗಾಡುತ್ತಿದೆ. ಐಪಿಎಲ್ 2024ರಲ್ಲಿ ಆಡಿದ 6 ಪಂದ್ಯಗಳಲ್ಲಿ ಕೇವಲ ಒಂದು ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ.

RCB vs SRH IPL 2024 RCB s Do or Die Match Against SRH Probable Playing XI Both Teams

ಆವೃತ್ತಿಯುದ್ದಕ್ಕೂ ಕಳಪೆ ಪ್ರದರ್ಶನ ನೀಡುತ್ತಿರುವ ಆರ್‌ಸಿಬಿ ತಂಡ ಸೋಲಿನ ವಿಮೋಚನೆ ಮಾಡಬೇಕಿದೆ ಮತ್ತು ಪ್ರವಾಸಿ ಸನ್‌ರೈಸರ್ಸ್ ಹೈದರಾಬಾದ್ ತಂಡವು ಬಲಿಷ್ಠವಾಗಿರುವುದರಿಂದ ಗೆಲುವು ಕಷ್ಟಸಾಧ್ಯವಾಗಿದೆ.

ಈಗಾಗಲೇ ಐಪಿಎಲ್‌ನ ಅತ್ಯಧಿಕ 277 ರನ್‌ಗಳನ್ನು ಬಾರಿಸಿರುವ ಸನ್‌ರೈಸರ್ಸ್ ಹೈದರಾಬಾದ್ ಬ್ಯಾಟ್ಸ್‌ಮನ್‌ಗಳು ಬೆಂಗಳೂರಿನಲ್ಲಿ ಔಟ್‌ ಆಫ್ ಫಾರ್ಮ್ ಆರ್‌ಸಿಬಿ ಬೌಲಿಂಗ್ ದಾಳಿಯನ್ನು ಸುಲಭವಾಗಿ ಎದುರಿಸುವ ನಿರೀಕ್ಷೆಯಿದೆ.

ಕಳೆದ ಗುರುವಾರ ವಾಂಖೆಡೆ ಸ್ಟೇಡಿಯಂನಲ್ಲಿ ಮುಂಬೈ ಇಂಡಿಯನ್ಸ್ ತಂಡದ ವಿರುದ್ಧದ ಸೋಲಿನ ನಂತರ, ಆರ್‌ಸಿಬಿ ತಂಡ ಪಂದ್ಯಾವಳಿಯ ಪ್ಲೇಆಫ್ ಅವಕಾಶವನ್ನು ಕಠಿಣವಾಗಿಸಿಕೊಂಡಿದೆ. ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಉತ್ತಮ ಫಾರ್ಮ್‌ನಲ್ಲಿದ್ದರೂ, ಉಳಿದವರಿಂದ ನಿರೀಕ್ಷಿತ ಪ್ರದರ್ಶನ ಹೊರಹೊಮ್ಮುತ್ತಿಲ್ಲ.

RCB vs SRH IPL 2024 RCB s Do or Die Match Against SRH Probable Playing XI Both Teams


ಆದರೆ, ನಾಯಕ ಫಾಫ್ ಡು ಪ್ಲೆಸಿಸ್, ಭಾರತದ ಬ್ಯಾಟರ್ ರಜತ್ ಪಾಟಿದಾರ್ ಫಾರ್ಮ್‌ಗೆ ಮರಳಿದಂತೆ ಕಂಡುಬಂದರು. ಮಧ್ಯಮ ಕ್ರಮಾಂಕದಲ್ಲಿ ದಿನೇಶ್ ಕಾರ್ತಿಕ್ ಮಾತ್ರ ತಮ್ಮ ಅದ್ಭುತ ಫಿನಿಶಿಂಗ್ ಆಟವನ್ನು ಮುಂದುವರೆಸಿದ್ದಾರೆ.

ಆದರೆ, ಆರ್‌ಸಿಬಿ ತಂಡದ ಬೌಲಿಂಗ್ ದೌರ್ಬಲ್ಯವು ತಲೆಕೆಡಿಸಿಕೊಳ್ಳಬೇಕಾದ ವಿಷಯವಾಗಿದೆ. ಹೀಗಾಗಿ ನಾಯಕ ಫಾಫ್ ಡು ಪ್ಲೆಸಿಸ್ ಆರ್‌ಸಿಬಿ ಬ್ಯಾಟರ್‌ಗಳು ಪ್ರತಿ ಪಂದ್ಯವನ್ನು ಸರಿದೂಗಿಸಲು 10-20 ಹೆಚ್ಚುವರಿ ರನ್‌ಗಳನ್ನು ಗಳಿಸಬೇಕಾಗಬಹುದು ಎಂದು ಒಪ್ಪಿಕೊಂಡರು.

ಮತ್ತೊಂದೆಡೆ, ಮುಲ್ಲನ್‌ಪುರದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ 2 ರನ್‌ಗಳ ರೋಚಕ ಗೆಲುವಿನ ಹಿನ್ನೆಲೆಯಿಂದ ಸನ್‌ರೈಸರ್ಸ್ ಹೈದರಾಬಾದ್ ತಂಡ ಈ ಪಂದ್ಯಕ್ಕೆ ಬರುತ್ತಿದೆ. ಟ್ರಾವಿಸ್ ಹೆಡ್, ಐಡೆನ್ ಮಾರ್ಕ್ರಾಮ್ ಮತ್ತು ಹೆನ್ರಿಚ್ ಕ್ಲಾಸೆನ್ ಅವರಂತಹ ಸ್ಫೋಟಕ ಬ್ಯಾಟರ್‌ಗಳನ್ನು ಒಳಗೊಂಡಿದೆ.

RCB vs SRH IPL 2024 RCB s Do or Die Match Against SRH Probable Playing XI Both Teams

ಅಷ್ಟೇ ಅಲ್ಲದೆ, 2016ರ ಐಪಿಎಲ್ ಚಾಂಪಿಯನ್ ತಂಡದಲ್ಲಿ ನಿತೀಶ್ ಕುಮಾರ್ ರೆಡ್ಡಿಯವರ ಅವರಂತಹ ಮ್ಯಾಚ್ ಫಿನಿಶಿಂಗ್ ಬ್ಯಾಟರ್‌ಗಳನ್ನು ಹೊಂದಿದೆ. ಸನ್‌ರೈಸರ್ಸ್ ಹೈದರಾಬಾದ್ ತಂಡದ ಬೌಲಿಂಗ್ ವಿಭಾಗದ ಸುಧಾರಣೆಯೊಂದಿಗೆ 3ನೇ ಗೆಲುವನ್ನು ಸಾಧಿಸಲು ಎದುರು ನೋಡುತ್ತಿದೆ.

ಆರ್‌ಸಿಬಿ vs ಎಸ್‌ಆರ್‌ಎಚ್ ಹೆಡ್-ಟು-ಹೆಡ್ ದಾಖಲೆ

ಐಪಿಎಲ್ ಇತಿಹಾಸದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಒಟ್ಟಾರೆ 23 ಬಾರಿ ಮುಖಾಮುಖಿಯಾಗಿವೆ. ಇದರಲ್ಲಿ ಆರ್‌ಸಿಬಿ ತಂಡ 10 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದರೆ, ಸನ್ ರೈಸರ್ಸ್ ಹೈದರಾಬಾದ್ ತಂಡ 12 ಬಾರಿ ಗೆದ್ದು ಮುನ್ನಡೆ ಸಾಧಿಸಿದ್ದು, ಒಂದು ಪಂದ್ಯ ಫಲಿತಾಂಶವಿಲ್ಲದೆ ಅಂತ್ಯಗೊಂಡಿದೆ.

ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ RCB vs SRH ಹೆಡ್-ಟು-ಹೆಡ್

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಐಪಿಎಲ್ ಪಂದ್ಯಾವಳಿಯಲ್ಲಿ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 8 ಬಾರಿ ಮುಖಾಮುಖಿಯಾಗಿವೆ;

ಆತಿಥೇಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐದು ಪಂದ್ಯಗಳಲ್ಲಿ ಗೆದ್ದರೆ, ಸನ್ ರೈಸರ್ಸ್ ಹೈದರಾಬಾದ್ ತಂಡ ಎರಡು ಪಂದ್ಯಗಳನ್ನು ಗೆದ್ದರೆ, ಒಂದು ಪಂದ್ಯ ಯಾವುದೇ ಫಲಿತಾಂಶವಿಲ್ಲದೆ ಕೊನೆಗೊಂಡಿದೆ.

ಆರ್‌ಸಿಬಿ vs ಎಸ್‌ಆರ್‌ಎಚ್ ಸಂಭಾವ್ಯ ಆಡುವ 11ರ ಬಳಗ

ರಾಯಲ್ ಚಾಲೆಂಜರ್ಸ್ ಬೆಂಗಳೂರು: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ವಿಲ್ ಜಾಕ್ಸ್, ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್‌ವೆಲ್, ಮಹಿಪಾಲ್ ಲೊಮ್ರೋರ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಲಾಕಿ ಫರ್ಗ್ಯುಸನ್, ವಿಜಯ್‌ಕುಮಾರ್ ವೈಶಾಕ್, ಆಕಾಶ್ ದೀಪ್, ರಾಜನ್ ಕುಮಾರ್.

ಸನ್ ರೈಸರ್ಸ್ ಹೈದರಾಬಾದ್: ಟ್ರಾವಿಸ್ ಹೆಡ್, ಅಭಿಷೇಕ್ ಶರ್ಮಾ, ಏಡೆನ್ ಮಾರ್ಕ್ರಾಮ್, ನಿತೀಶ್ ರೆಡ್ಡಿ, ಹೆನ್ರಿಚ್ ಕ್ಲಾಸೆನ್ (ವಿಕೆಟ್ ಕೀಪರ್), ಅಬ್ದುಲ್ ಸಮದ್, ಶಹಬಾಜ್ ಅಹ್ಮದ್, ಪ್ಯಾಟ್ ಕಮ್ಮಿನ್ಸ್ (ನಾಯಕ), ಭುವನೇಶ್ವರ್ ಕುಮಾರ್, ಜಯದೇವ್ ಉನಾದ್ಕಟ್, ಟಿ. ನಟರಾಜನ್.

Story first published: Monday, April 15, 2024, 14:42 [IST]
Other articles published on Apr 15, 2024
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+