RCB vs SRH IPL 2024: ಬೆಂಗಳೂರು vs ಹೈದರಾಬಾದ್ ಕದನ; ಟಾಸ್ ವರದಿ, ಆಡುವ 11ರ ಬಳಗ; ಲಾಕಿ ಫರ್ಗ್ಯಸನ್ ಇನ್
ಸೋಮವಾರ, ಏಪ್ರಿಲ್ 15ರಂದು ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 30ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳು ನಿರ್ಣಾಯಕ ಪಂದ್ಯದಲ್ಲಿ ಸೆಣಸಾಡುತ್ತಿವೆ.
ಟಾಸ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ಫಾಫ್ ಡು ಪ್ಲೆಸಿಸ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು. ಆದ್ದರಿಂದ ಪ್ಯಾಟ್ ಕಮ್ಮಿನ್ಸ್ ನಾಯಕತ್ವದ ಸನ್ ರೈಸರ್ಸ್ ಹೈದರಾಬಾದ್ ತಂಡ ಮೊದಲುಯ ಬ್ಯಾಟಿಂಗ್ ಮಾಡಲಿದೆ.

ಐಪಿಎಲ್ 2024ರಲ್ಲಿ ಆರ್‌ಸಿಬಿ ತಂಡವು ತವರು ಮೈದಾನದ ಲಾಭವನ್ನು ಪಡೆದುಕೊಳ್ಳಲು ಹೆಣಗಾಡುತ್ತಿದೆ. ಅಲ್ಲದೆ, ಈವರೆಗೆ ಆಡಿದ 6 ಪಂದ್ಯಗಳಲ್ಲಿ ಕೇವಲ ಒಂದು ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ.
ಈ ಆವೃತ್ತಿಯುದ್ದಕ್ಕೂ ಕಳಪೆ ಪ್ರದರ್ಶನ ನೀಡುತ್ತಿರುವ ಆರ್‌ಸಿಬಿ ತಂಡ ಸತತ ನಾಲ್ಕು ಸೋಲಿನ ಸರಪಳಿಯಿಂದ ಹೊರಬರಲು ಎದುರು ನೋಡುತ್ತಿದೆ. ಹೀಗಾಗಿ ಸನ್ ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧದ ಪಂದ್ಯವು ಮಾಡು ಇಲ್ಲವೇ ಮಡಿ ಎಂಬಂತಾಗಿದೆ.
ಮತ್ತೊಂದೆಡೆ, ಸನ್ ರೈಸರ್ಸ್ ಹೈದರಾಬಾದ್ ತಂಡ ಐಪಿಎಲ್ 2024ರಲ್ಲಿ ಆಡಿದ 5 ಪಂದ್ಯಗಳಲ್ಲಿ 3 ಗೆಲುವು ಮತ್ತು 2 ಸೋಲುಗಳೊಂದಿಗೆ 6 ಅಂಕಗಳನ್ನು ಕಲೆಹಾಕಿ ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದೆ.
ತನ್ನ ಕೊನೆಯ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ 2 ರನ್‌ಗಳ ರೋಚಕ ಗೆಲುವಿನ ಹಿನ್ನೆಲೆಯಿಂದ ಸನ್‌ರೈಸರ್ಸ್ ಹೈದರಾಬಾದ್ ತಂಡ ಆರ್‌ಸಿಬಿ ವಿರುದ್ಧದ ಪಂದ್ಯಕ್ಕೆ ಬರುತ್ತಿದೆ.
ಗಮನಾರ್ಹವಾಗಿ, ಆರ್‌ಸಿಬಿ ತಂಡ ಗ್ಲೆನ್ ಮ್ಯಾಕ್ಸ್‌ವೆಲ್ ಮತ್ತು ಮೊಹಮ್ಮದ್ ಸಿರಾಜ್ ಅವರನ್ನು ಈ ಪಂದ್ಯದಿಂದ ಕೈಬಿಟ್ಟಿದ್ದು, ಬದಲಾಗಿ, ಲಾಕಿ ಫರ್ಗ್ಯುಸನ್ ಮತ್ತು ಯಶ್ ದಯಾಳ್ ಅವರನ್ನು ಆಯ್ಕೆ ಮಾಡಿದೆ.

ಆರ್‌ಸಿಬಿ vs ಎಸ್‌ಆರ್‌ಎಚ್ ಪಂದ್ಯದ ಟಿವಿ, ಲೈವ್ ಸ್ಟ್ರೀಮಿಂಗ್ ಮಾಹಿತಿ
ಐಪಿಎಲ್ 2024ರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್ ರೈಸರ್ಸ್ ಹೈದರಾಬಾದ್ ನಡುವಿನ ಹೈ-ವೋಲ್ಟೇಜ್ ಪಂದ್ಯವನ್ನು ಭಾರತದಲ್ಲಿ ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ನೇರಪ್ರಸಾರವಾಗಲಿದ್ದರೆ, ಮೊಬೈಲ್‌ನಲ್ಲಿ ಜಿಯೋಸಿನಿಮಾ ಅಪ್ಲಿಕೇಶನ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಇರಲಿದೆ.
ಆರ್‌ಸಿಬಿ vs ಎಸ್‌ಆರ್‌ಎಚ್ ಸಂಭಾವ್ಯ ಆಡುವ 11ರ ಬಳಗ
ರಾಯಲ್ ಚಾಲೆಂಜರ್ಸ್ ಬೆಂಗಳೂರು: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ವಿಲ್ ಜಾಕ್ಸ್, ರಜತ್ ಪಾಟಿದಾರ್, ಸೌರವ್ ಚೌಹಾಣ್, ದಿನೇಶ್ ಕಾರ್ತಿಕ್(ವಿಕೆಟ್ ಕೀಪರ್), ಮಹಿಪಾಲ್ ಲೊಮ್ರೋರ್, ವಿಜಯ್‌ಕುಮಾರ್ ವೈಶಾಕ್, ರೀಸ್ ಟೋಪ್ಲಿ, ಲಾಕಿ ಫರ್ಗುಸನ್, ಯಶ್ ದಯಾಳ್.
ಸನ್ ರೈಸರ್ಸ್ ಹೈದರಾಬಾದ್: ಟ್ರಾವಿಸ್ ಹೆಡ್, ಅಭಿಷೇಕ್ ಶರ್ಮಾ, ಏಡೆನ್ ಮಾರ್ಕ್ರಾಮ್, ನಿತೀಶ್ ರೆಡ್ಡಿ, ಹೆನ್ರಿಚ್ ಕ್ಲಾಸೆನ್ (ವಿಕೆಟ್ ಕೀಪರ್), ಅಬ್ದುಲ್ ಸಮದ್, ಶಹಬಾಜ್ ಅಹ್ಮದ್, ಪ್ಯಾಟ್ ಕಮ್ಮಿನ್ಸ್ (ನಾಯಕ), ಭುವನೇಶ್ವರ್ ಕುಮಾರ್, ಜಯದೇವ್ ಉನಾದ್ಕಟ್, ಟಿ. ನಟರಾಜನ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications