ಸೋಮವಾರ, ಏಪ್ರಿಲ್ 15ರಂದು ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 30ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ಬೌಲರ್‌ಗಳನ್ನು ಬೆಂಡೆತ್ತಿದ ಸನ್ ರೈಸರ್ಸ್ ಹೈದರಾಬಾದ್ ತಂಡದ ಬ್ಯಾಟರ್‌ಗಳು ಬೃಹತ್ ಮೊತ್ತ ಕಲೆಹಾಕಿದರು.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಸನ್ ರೈಸರ್ಸ್ ಹೈದರಾಬಾದ್ ತಂಡ ಟ್ರಾವಿಸ್ ಹೆಡ್ ಅವರ ಸಿಡಿಲಬ್ಬರದ ಶತಕ ಮತ್ತು ಹೆನ್ರಿಚ್ ಕ್ಲಾಸೆನ್ ಅವರ ಸ್ಫೋಟಕ ಅರ್ಧಶತಕದ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 287 ರನ್‌ಗಳನ್ನು ಗಳಿಸಿದ್ದು, ಆರ್‌ಸಿಬಿ ತಂಡಕ್ಕೆ 288 ರನ್‌ಗಳ ಬೃಹತ್ ಗುರಿ ನೀಡಿದೆ.

ಗಮನಾರ್ಹವಾಗಿ, ಸನ್ ರೈಸರ್ಸ್ ಹೈದರಾಬಾದ್ ತಂಡವು ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಇತಿಹಾಸದಲ್ಲಿ ಅತ್ಯಧಿಕ 287 ರನ್ ಗಳಿಸುವ ಮೂಲಕ ತಮ್ಮದೇ ದಾಖಲೆಯನ್ನು ಅಳಿಸಿಹಾಕಿತು. ಇದಕ್ಕೂ ಮುನ್ನ ಇದೇ ವರ್ಷ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ 277 ರನ್ ಗಳಿಸಿತ್ತು.
ಸನ್ ರೈಸರ್ಸ್ ಹೈದರಾಬಾದ್ ತಂಡದ ಬ್ಯಾಟಿಂಗ್ ಇನ್ನಿಂಗ್ಸ್ ಆರಂಭಿಸಿದ ಅಭಿಷೇಕ್ ಶರ್ಮಾ ಮತ್ತು ಟ್ರಾವಿಸ್ ಹೆಡ್ ಆಕ್ರಮಣಕಾರಿ ಹಾಗೂ ದೊಡ್ಡ ಆರಂಭ ನೀಡಿದರು. ಈ ಜೋಡಿ ಮೊದಲ ವಿಕೆಟ್‌ಗೆ 8.1 ಓವರ್‌ಗಳಲ್ಲಿ 108 ರನ್‌ಗಳ ಜೊತೆಯಾಟ ನಿರ್ಮಿಸಿತು. ಈ ವೇಳೆ 22 ಎಸೆತಗಳಲ್ಲಿ 2 ಬೌಂಡರಿ ಹಾಗೂ 2 ಸಿಕ್ಸರ್‌ಗಳ ಮೂಲಕ 34 ರನ್ ಗಳಿಸಿ ಔಟಾದರು.

ಬಳಿಕ ಜೊತೆಗೂಡಿದ ಟ್ರಾವಿಸ್ ಹೆಡ್ ಮತ್ತು ಹೆನ್ರಿಚ್ ಕ್ಲಾಸೆನ್ ಸ್ಫೋಟಕ ಆಟಕ್ಕೆ ಮುಂದಾದರು. ಆರಂಭಿಕ ಬ್ಯಾಟರ್ ಟ್ರಾವಿಸ್ ಹೆಡ್ ಐಪಿಎಲ್‌ನಲ್ಲಿ ತಮ್ಮ ಚೊಚ್ಚಲ ಶತಕವನ್ನು ಬಾರಿಸಿದರು ಮತ್ತು ಕೇವಲ 39 ಎಸೆತಗಳಲ್ಲಿ ಈ ಸಾಧನೆ ಮಾಡಿದರು.
ಈ ಮೂಲಕ ಐಪಿಎಲ್ ಇತಿಹಾಸದಲ್ಲಿ ಕ್ರಿಸ್ ಗೇಲ್, ಯೂಸುಫ್ ಪಠಾಣ್ ಮತ್ತು ಡೇವಿಡ್ ಮಿಲ್ಲರ್ ನಂತರ ನಾಲ್ಕನೇ ವೇಗದ ಶತಕ ಗಳಿಸಿದರು. ಅಂತಿಮವಾಗಿ ಟ್ರಾವಿಸ್ ಹೆಡ್ ಕೇವಲ 41 ಎಸೆತಗಳಲ್ಲಿ 9 ಬೌಂಡರಿ ಮತ್ತು 8 ಸಿಕ್ಸರ್‌ಗಳ ಸಮೇತ 102 ರನ್ ಬಾರಿಸಿ 13ನೇ ಓವರ್‌ನಲ್ಲಿ ಲಾಕಿ ಫರ್ಗ್ಯುಸನ್‌ಗೆ ವಿಕೆಟ್ ಒಪ್ಪಿಸಿದರು.
ಇನ್ನು ಹೆನ್ರಿಚ್ ಕ್ಲಾಸೆನ್ ಕೂಡ ಆರ್‌ಸಿಬಿ ಬೌಲರ್‌ಗಳನ್ನು ಬೆವರಿಳಿಸಿದರು ಮತ್ತು 31 ಎಸೆತಗಳಲ್ಲಿ 2 ಬೌಂಡರಿ ಹಾಗೂ 7 ಸಿಕ್ಸರ್‌ಗಳ ನೆರವಿನಿಂದ 67 ರನ್ ಗಳಿಸಿದರು.
ಕೊನೆಯಲ್ಲಿ ಏಡೆನ್ ಮಾರ್ಕ್ರಾಮ್ 17 ಎಸೆತಗಳಲ್ಲಿ 2 ಬೌಂಡರಿ ಹಾಗೂ 2 ಸಿಕ್ಸರ್‌ಗಳ ಸಮೇತ ಅಜೇಯ 32 ರನ್ ಗಳಿಸಿದರೆ, ಅಬ್ದುಲ್ ಸಮದ್ 10 ಎಸೆತಗಳಲ್ಲಿ 4 ಬೌಂಡರಿ ಹಾಗೂ 3 ಸಿಕ್ಸರ್‌ಗಳ ಸಮೇತ ಅಜೇಯ 37 ರನ್ ಬಾರಿಸಿದರು.
ಬೌಲಿಂಗ್‌ನಲ್ಲಿ ಆರ್‌ಸಿಬಿ ಪರ ಲಾಕಿ ಫರ್ಗ್ಯುಸನ್ 4 ಓವರ್‌ಗಳಲ್ಲಿ 52 ರನ್ ನೀಡಿ 2 ವಿಕೆಟ್ ಪಡೆದರೆ, ರೀಸ್ ಟೋಪ್ಲೆ 4 ಓವರ್‌ಗಳಲ್ಲಿ 68 ರನ್ ನೀಡಿ ಒಂದು ವಿಕೆಟ್ ಪಡೆದರು.