ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ 41ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ (ಎಸ್‌ಆರ್‌ಹೆಚ್) ತಂಡ ಹಾಗು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವು ಮುಖಾಮುಖಿಯಾಗಿವೆ.
ಟಾಸ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ಫಾಫ್ ಡು ಪ್ಲೆಸಿಸ್ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ. ಹೀಗಾಗಿ ಪ್ಯಾಟ್ ಕಮ್ಮಿನ್ಸ್ ಮುನ್ನೆಡೆಸುತ್ತಿರುವ ಸನ್‌ರೈಸರ್ಸ್ ಹೈದರಾಬಾದ್ ತಂಡವು ಬೌಲಿಂಗ್ ಮಾಡಲಿದೆ.

17ನೇ ಆವೃತ್ತಿ ಅದ್ಭುತ ಪ್ರದರ್ಶನ ನೀಡುತ್ತಿರುವ ಸನ್‌ರೈಸರ್ಸ್ ಹೈದರಾಬಾದ್ ಆಡಿರುವ ಏಳು ಪಂದ್ಯಗಳಲ್ಲಿ 5 ಪಂದ್ಯಗಳನ್ನು ಗೆದ್ದು ಬೀಗಿದ್ದು, ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಇತ್ತ ಟೂರ್ನಿಯಲ್ಲಿ ಸೋಲಿನ ಸರಪಳಿಯಲ್ಲಿ ಸಿಲುಕಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಕೇವಲ ಒಂದು ಗೆಲುವಿಗೆ ತೃಪ್ತಿ ಪಟ್ಟು, ಏಳು ಪಂದ್ಯಗಳನ್ನು ಕೈ ಚೆಲ್ಲಿ ಕೊನೆಯ ಸ್ಥಾನ ಪಡೆದುಕೊಂಡಿದೆ.
ಸನ್‌ರೈಸರ್ಸ್ ಹೈದರಾಬಾದ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ನಡುವೆ ಆರಂಭವಾಗಿರುವ ಐಪಿಎಲ್ ಪಂದ್ಯವನ್ನು ಭಾರತದಲ್ಲಿ ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್ ಚಾನೆಲ್‌ನಲ್ಲಿ ನೇರಪ್ರಸಾರ ಮಾಡಲಿದ್ದು, ಮೊಬೈಲ್‌ನಲ್ಲಿ ಜಿಯೋಸಿನಿಮಾ ಅಫ್ಲಿಕೇಶನ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಆಗಲಿದೆ.
ಆರ್‌ಸಿಬಿ vs ಎಸ್‌ಆರ್‌ಹೆಚ್ ತಂಡಗಳ ಆಡುವ 11ರ ಬಳಗ :
ಸನ್‌ರೈಸರ್ಸ್ ಹೈದರಾಬಾದ್ : ಅಭಿಷೇಕ್ ಶರ್ಮಾ, ಏಡೆನ್ ಮಾರ್ಕ್‌ರಾಮ್, ಹೆನ್ರಿಚ್ ಕ್ಲಾಸೆನ್ (ವಿ.ಕೀ) ನಿತೀಶ್ ರೆಡ್ಡಿ, ಅಬ್ದುಲ್ ಸಮದ್, ಶಹಬಾಜ್ ಅಹ್ಮದ್, ಪ್ಯಾಟ್ ಕಮಿನ್ಸ್ (ನಾಯಕ), ಭುವನೇಶ್ವರ್ ಕುಮಾರ್, ಜಯದೇವ್ ಉನದ್ಕತ್, ಮಯಾಂಕ್ ಮಾರ್ಕಂಡೆ, ಟಿ ನಟರಾಜನ್
ರಾಯಲ್ ಚಾಲೆಂಜರ್ಸ್ ಬೆಂಗಳೂರು : ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ವಿಲ್ ಜಾಕ್ಸ್, ರಜತ್ ಪಾಟಿದಾರ್, ಕ್ಯಾಮೆರಾನ್ ಗ್ರೀನ್, ದಿನೇಶ್ ಕಾರ್ತಿಕ್ (ವಿ.ಕೀ), ಮಹಿಪಾಲ್ ಲೊಮ್ರೋರ್, ಕರಣ್ ಶರ್ಮಾ, ಲಾಕಿ ಫರ್ಗುಸನ್, ಮೊಹಮ್ಮದ್ ಸಿರಾಜ್, ಯಶ್ ದಯಾಳ್