RCB ನೇರವಾಗಿ ಫೈನಲ್ ತಲುಪಲು ಇಂದು ಕೊನೆಯ ಅವಕಾಶ
ವಡೋದರಾ: ಮಹಿಳಾ ಪ್ರೀಮಿಯರ್ ಲೀಗ್‌ನ ಆರಂಭದಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಕಳೆದ ಎರಡು ಪಂದ್ಯಗಳನ್ನು ಸೋತು ನಿರಾಸೆ ಅನುಭವಿಸಿದೆ. ಲೀಗ್‌ನ ಆರಂಭದಲ್ಲಿ ಹ್ಯಾಟ್ರಿಕ್ ಗೆಲುವಿನ ನಗೆ ಬೀರಿದ್ದ ಆರ್‌ಸಿಬಿಗೆ ಈಗ ಸೋಲಿನ ಹ್ಯಾಟ್ರಿಕ್ ಭೀತಿಯಲ್ಲಿದೆ. ಗುರುವಾರ ನಡೆಯುವ ಪಂದ್ಯದಲ್ಲಿ ಆರ್‌ಸಿಬಿ ಹಾಗೂ ಯುಪಿ ವಾರಿಯರ್ಸ್ ನಡುವೆ ಬಿಗ್ ಫೈಟ್ ನಡೆಯಲಿದೆ. ಲೀಗ್‌ನ ಎಂಟನೇ ಪಂದ್ಯದಲ್ಲಿ ಆರ್‌ಸಿಬಿ ಗೆಲುವು ದಾಖಲಿಸಿ ನೇರವಾಗಿ ಲೀಗ್‌ನ ಫೈನಲ್‌ಗೆ ಅರ್ಹತೆ ಪಡೆಯುವ ಕನಸು ಕಾಣುತ್ತಿದೆ.
ಆರ್‌ಸಿಬಿ ಆಡಿದ 7 ಪಂದ್ಯಗಳಲ್ಲಿ 5 ಜಯ, 2 ಸೋಲು ಕಂಡಿದ್ದು 10 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. ಕೊನೆಯ ಲೀಗ್ ಪಂದ್ಯದಲ್ಲಿ ಜಯ ಸಾಧಿಸಿದರೆ ಆರ್‌ಸಿಬಿ ನೇರವಾಗಿ ಫೈನಲ್‌ಗೆ ಪ್ರವೇಶ ಪಡೆಯಲಿದೆ. ಇನ್ನು ಯುಪಿ ವಾರಿಯರ್ಸ್ ಆಡಿದ 6 ಪಂದ್ಯಗಳಲ್ಲಿ 4 ಅಂಕಗಳನ್ನು ಕಲೆ ಹಾಕಿದೆ. ಯುಪಿಗೆ ಇನ್ನು ಲೀಗ್ ಹಂತದಲ್ಲಿ ಎರಡು ಪಂದ್ಯಗಳು ಉಳಿದಿದ್ದು, ಈ ಎರಡೂ ಪಂದ್ಯಗಳಲ್ಲಿ ಜಯ ಸಾಧಿಸಿದರೆ, ಪ್ಲೇ ಆಫ್ ಪ್ರವೇಶಿಸಬಹುದಾಗಿದೆ.

ಆರ್‌ಸಿಬಿ ತಂಡದಲ್ಲಿರುವ ಸ್ಟಾರ್ ಆಟಗಾರ್ತಿಯರು ಕೊನೆಯ ಲೀಗ್ ಪಂದ್ಯದಲ್ಲಿ ಅಬ್ಬರಿಸುವ ಅನಿವಾರ್ಯತೆ ಇದೆ. ಆರಂಭಿಕ ಆಟಗಾರ್ತಿ ಗ್ರೇಸ್ ಹ್ಯಾರಿಸ್, ಸ್ಮೃತಿ ಮಂಧಾನ ಜೋಡಿ ಸ್ಥಿರ ಬ್ಯಾಟಿಂಗ್ ನಡೆಸಿ ತಂಡಕ್ಕೆ ನೆರವಾಗಬೇಕಿದೆ. ಇನ್ನು ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಮಾಡುವ ಆಟಗಾರರು ಅನಿವಾರ್ಯತೆ ಇದೆ. ಇನ್ನು ರಿಚಾ ಘೋಷ್ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಬೌಲಿಂಗ್ ವಿಭಾಗದಲ್ಲಿ ಲಾರೆನ್ ಬೆಲ್ ಬಲ ತುಂಬ ಬಲ್ಲ ಆಟಗಾರ್ತಿ. ಉಳಿದಂತೆ ಸ್ಪಿನ್ ಬೌಲರ್‌ಗಳು ಬಿಗುವಿನ ದಾಳಿ ನಡೆಸಿ ತಂಡದ ಜಯದಲ್ಲಿ ಮಿಂಚಬೇಕಿದೆ.
ಯುಪಿ ವಾರಿಯರ್ಸ್ ತಂಡದಲ್ಲೂ ಸ್ಟಾರ್ ಆಟಗಾರ್ತಿಯರ ದಂಡೇ ಇದೆ. ಆದರೆ ಈ ಆಟಗಾರ್ತಿಯರು ತಮ್ಮ ಸ್ಥಿರ ಪ್ರದರ್ಶನವನ್ನು ಲೀಗ್‌ನಲ್ಲಿ ನೀಡದಿರುವು ಮ್ಯಾನೇಜ್ಮೆಂಟ್ ಚಿಂತೆಯನ್ನು ಹೆಚ್ಚಿಸಿದೆ. ನಾಯಕಿ ಮೆಗ್ ಲ್ಯಾನಿಂಗ್ ಜವಾಬ್ದಾರಿಯುತ ಆಟವನ್ನು ಆಡಬೇಕಿದೆ. ಇನ್ನು ಆಲ್‌ರೌಂಡರ್ ದೀಪ್ತಿ ಶರ್ಮಾ ಅವರ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಅನುಭವಿ ಆಟಗಾರ್ತಿಯರು ಜವಾಬ್ದಾರಿ ಅರಿತು ಆಡಬೇಕಿದೆ.
ಹೇಗಿರಲಿದೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ?
ಗ್ರೇಸ್ ಹ್ಯಾರಿಸ್, ಸ್ಮೃತಿ ಮಂಧಾನ, ಜಾರ್ಜಿಯಾ ವೋಲ್, ಗೌತಮಿ ನಾಯಕ್, ರಿಚಾ ಘೋಷ್, ರಾಧಾ ಯಾದವ್, ನಾಡಿನ್ ಡಿ ಕ್ಲರ್ಕ್, ಸಯಾಲಿ ಸತ್ಘರೆ, ಅರುಂಧತಿ ರೆಡ್ಡಿ, ಶ್ರೇಯಾಂಕ ಪಾಟೀಲ್, ಲಾರೆನ್ ಬೆಲ್.
ಯುಪಿ ವಾರಿಯರ್ಸ್ ಆಡುವ ಬಳಗದಲ್ಲಿ ಯಾರಿಗೆಲ್ಲಾ ಅವಕಾಶ?
ಸಂಭಾವ್ಯ ತಂಡ: ಮೆಗ್ ಲ್ಯಾನಿಂಗ್, ಕಿರಣ್ ನವಗಿರೆ ಅಥವಾ ಜಿ ತ್ರಿಶಾ, ಆಮಿ ಜೋನ್ಸ್, ಹರ್ಲೀನ್ ಡಿಯೋಲ್, ಕ್ಲೋಯ್ ಟ್ರಯಾನ್, ದೀಪ್ತಿ ಶರ್ಮಾ, ಶ್ವೇತಾ ಸೆಹ್ರಾವತ್, ಸೋಫಿ ಎಕ್ಲೆಸ್ಟೋನ್, ಆಶಾ ಶೋಭನಾ, ಶಿಖಾ ಪಾಂಡೆ, ಕ್ರಾಂತಿ ಗೌಡ್.
ಪಿಚ್ ಹೇಗಿರಲಿದೆ?
ವಡೋದರಾದಲ್ಲಿ ಕೊನೆಗೂ ರನ್‌ಗಳ ಮಳೆ ನಿರೀಕ್ಷಿಸಬಹುದಾಗಿದೆ. ಈ ಮೈದಾನದಲ್ಲಿ ಇಬ್ಬನಿ ಬೀಳಲಿದ್ದು, ಟಾಸ್ ಮಹತ್ವದ ಪಾತ್ರವನ್ನು ವಹಿಸಲಿದೆ.

ಆರ್‌ಸಿಬಿ ಹಾಗೂ ಯುಪಿ ತಂಡಗಳ ನಡುವಣ ಪಂದ್ಯವನ್ನು ಎಲ್ಲಿ ವೀಕ್ಷಿಸಬಹುದು?
ಆರ್‌ಸಿಬಿ, ಯುಪಿ ವಾರಿಯರ್ಸ್ ನಡುವಣ ಹೈ ವೋಲ್ಟೇಜ್ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ವೀಕ್ಷಿಸಬಹುದಾಗಿದೆ. ಅಲ್ಲದೆ ಆನ್‌ಲೈನ್‌ನಲ್ಲಿ ಜಿಯೋಹಾಟ್‌ಸ್ಟಾರ್‌ನಲ್ಲಿ ನೋಡಬಹುದಾಗಿದೆ.
ಪಂದ್ಯ ನಡೆಯುವ ಸಮಯ ಯಾವಾಗ?
ಮಹಿಳಾ ಪ್ರೀಮಿಯರ್ ಲೀಗ್‌ನ 18ನೇ ಪಂದ್ಯ 7.30ಕ್ಕೆ ಆರಂಭವಾಗಲಿದೆ. ಪಂದ್ಯಕ್ಕೂ ಅರ್ಧಗಂಟೆ ಮುನ್ನ ಟಾಸ್ ನಡೆಯಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications