ಟಾಸ್ ಗೆದ್ದ RCB ಬೌಲಿಂಗ್ ಆಯ್ಕೆ: ತಂಡದಲ್ಲಿ ಇಲ್ಲ ಬದಲಾವಣೆ
ವಡೋದರಾ: ನಾಲ್ಕನೇ ಆವೃತ್ತಿಯ ಮಹಿಳಾ ಪ್ರೀಮಿಯರ್ ಲೀಗ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡ ಮಹತ್ವದ ಪಂದ್ಯದಲ್ಲಿ ಟಾಸ್ ಗೆದ್ದಿದೆ. ಮುಂಬೈ ಇಂಡಿಯನ್ಸ್ ವಿರುದ್ದದ ಲೀಗ್ ಹಂತದ ಪಂದ್ಯದಲ್ಲಿ ಸ್ಮೃತಿ ಮಂಧಾನ ಟಾಸ್ ಗೆದ್ದು ಫೀಲ್ಡಿಂಗ್ ಮಾಡಲು ಮುಂದಾಗಿದೆ. ಈ ಪಂದ್ಯದಲ್ಲಿ ಜಯ ಸಾಧಿಸಿ ನೇರವಾಗಿ ಫೈನಲ್‌ಗೆ ಪ್ರವೇಶ ಪಡೆಯುವ ಕನಸನ್ನು ಆರ್‌ಸಿಬಿ ಹೊಂದಿದೆ. ಹೀಗಾಗಿ ಈ ಮಹತ್ವದ ಪಂದ್ಯಕ್ಕಾಗಿ ಆರ್‌ಸಿಬಿ ತಂಡದಲ್ಲಿ ಯಾವುದೇ ಬದಲಾವಣೆ ಇಲ್ಲ. ಮುಂಬೈ ತಂಡ ಮಹತ್ವದ ಪಂದ್ಯಕ್ಕಾಗಿ ಒಂದು ಬದಲಾವಣೆಯನ್ನು ಮಾಡಿಕೊಂಡಿದೆ.
ಪ್ರಸಕ್ತ ಲೀಗ್‌ನಲ್ಲಿ ಅಡಿದ ಆರನೇ ಪಂದ್ಯದಲ್ಲಿ ಆರ್‌ಸಿಬಿ ಡೆಲ್ಲಿ ಕ್ಯಾಪಿಟಲ್ಸ್ ಸ್ಥಿರ ಪ್ರದರ್ಶನ ನೀಡುವಲ್ಲಿ ವಿಫಲವಾಗಿತ್ತು. ಪರಿಣಾಮ ಲೀಗ್‌ನಲ್ಲಿ ಆರ್‌ಸಿಬಿ ಮೊದಲ ಸೋಲಿನ ಕಹಿಯನ್ನು ಕಂಡಿತ್ತು. ಸೋಮವಾರ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಸ್ಥಿರ ಪ್ರದರ್ಶನ ನೀಡಿ, 2 ಅಂಕವನ್ನು ಕಲೆ ಹಾಕಿ ಅಂಕ ಪಟ್ಟಿಯಲ್ಲಿ ಅಗ್ರ ಸ್ಥಾನವನ್ನು ಭಧ್ರ ಪಡಿಸಿಕೊಳ್ಳುವ ಆಸೆಯನ್ನು ಹೊಂದಿದೆ.

ಒಂದು ಬದಲಾವಣೆ
ಮುಂಬೈ ತಂಡಕ್ಕೆ ಇದು ಮಹತ್ವದ ಪಂದ್ಯವಾಗಿದೆ. ಮುಂಬೈ ಅಂಕ ಪಟ್ಟಿಯಲ್ಲಿ ಕೊನೆಯಿಂದ ಎರಡನೇ ಸ್ಥಾನದಲ್ಲಿದ್ದು, ಈ ಪಂದ್ಯವನ್ನು ಗೆದ್ದು ಅಂಕ ಪಟ್ಟಿಯಲ್ಲಿ ಬಡ್ತಿ ಪಡೆಯುವ ಆಸೆ ಮುಂಬೈ ತಂಡದ್ದಾಗಿದೆ. ಇನ್ನು ಮುಂಬೈ ಪಂದ್ಯಕ್ಕೆ ಮುಂದಿನ ಎಲ್ಲ ಪಂದ್ಯಗಳು ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ಮುಂದಿನ ಎರಡೂ ಪಂದ್ಯಗಳಲ್ಲಿ ಜಯ ಸಾಧಿಸಿದರೆ ಮಾತ್ರ ಹರ್ಮನ್ ಪ್ರೀತ್ ಪಡೆ ಲೀಗ್‌ನ ಮುಂದಿನ ಹಂತಕ್ಕೆ ಪ್ರವೇಶ ಪಡೆಯಬಹುದಾಗಿದೆ. ಇನ್ನು ಮುಂಬೈ ಇಂಡಿಯನ್ಸ್ ತಂಡದ ಅಮೆಲಿಯಾ ಕೆರ್ ತಂಡಕ್ಕೆ ಮರಳಿದ್ದು ತಂಡಕ್ಕೆ ಆಸೆ ಬಲ ಬಂದಂತಾಗಿದೆ.
ಆರ್‌ಸಿಬಿ ತಂಡ: ಸ್ಮೃತಿ ಮಂಧಾನ (ನಾಯಕಿ), ಗ್ರೇಸ್ ಹ್ಯಾರಿಸ್, ಜಾರ್ಜಿಯಾ ವೋಲ್, ಗೌತಮಿ ನಾಯಕ್, ರಿಚಾ ಘೋಷ್ (ವಿಕೆಟ್ ಕೀಪರ್), ರಾಧಾ ಯಾದವ್, ನಡಿನ್ ಡಿ ಕ್ಲರ್ಕ್, ಸಯಾಲಿ ಸತ್ಘರೆ, ಅರುಂಧತಿ ರೆಡ್ಡಿ, ಶ್ರೇಯಾಂಕಾ ಪಾಟೀಲ್, ಲಾರೆನ್ ಬೆಲ್.
ಮುಂಬೈ ತಂಡ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಎಸ್ ಸಜನಾ, ಹೇಯ್ಲಿ ಮ್ಯಾಥ್ಯೂಸ್, ನ್ಯಾಟ್ ಸಿವರ್-ಬ್ರಂಟ್, ಅಮೆಲಿಯಾ ಕೆರ್, ಅಮಂಜೋತ್ ಕೌರ್, ಸಂಸ್ಕೃತಿ ಗುಪ್ತಾ, ಪೂನಂ ಖೇಮ್ನಾರ್, ರಹಿಲಾ ಫಿರ್ದೌಸ್ (ವಿಕೆಟ್ ಕೀಪರ್), ಶಬ್ನಿಮ್ ಇಸ್ಮಾಯಿಲ್, ವೈಷ್ಣವಿ ಶರ್ಮಾ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications