Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Jacob Bethel: ಟೆಸ್ಟ್ ಕ್ರಿಕೆಟ್‌ನಲ್ಲಿ ಆರ್‌ಸಿಬಿ ಯಂಗ್ ಬ್ಯಾಟರ್ ಜೇಕಬ್ ಬೆಥೆಲ್ ವಿಶ್ವ ದಾಖಲೆ

ಇಂಗ್ಲೆಂಡ್‌ನ ಯುವ ಸ್ಫೋಟಕ ಬ್ಯಾಟರ್ ಜೇಕಬ್ ಬೆಥೆಲ್ ತಮ್ಮ ಚೊಚ್ಚಲ ಟೆಸ್ಟ್ ಪಂದ್ಯದಲ್ಲೇ ದಾಖಲೆ ನಿರ್ಮಿಸಿದ್ದಾರೆ. ಜೇಕಬ್ ಬೆಥೆಲ್ ಅವರು ಕೇವಲ 37 ಎಸೆತಗಳಲ್ಲಿ ಅರ್ಧಶತಕ ಗಳಿಸುವ ಮೂಲಕ ಟೆಸ್ಟ್‌ನಲ್ಲಿ ಎರಡನೇ ಅತಿ ವೇಗದ ಅರ್ಧಶತಕ ಗಳಿಸಿದ ವಿಶ್ವ ದಾಖಲೆ ಮಾಡಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ 3ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ ಜೇಕಬ್ ಬೆಥೆಲ್ ಅದ್ಭುತ ಪ್ರದರ್ಶನ ನೀಡಿದರು.

ಇಂಗ್ಲೆಂಡ್ ತಂಡದ ಭರವಸೆಯ ಯುವ ಆಲ್‌​​ರೌಂಡರ್ 21 ವರ್ಷದ ಜೇಕಬ್ ಬೆಥೆಲ್ ಅವರನ್ನು ಐಪಿಎಲ್ ಮೆಗಾ ಹರಾಜಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡ 2.6 ಕೋಟಿ ರೂ.ಗೆ ಬಿಡ್ ಮಾಡಿದೆ. ಈ ಖರೀದಿ ಬೆನ್ನಲ್ಲೇ ಬ್ಯಾಟಿಂಗ್ ಅಬ್ಬರ ಶುರು ಮಾಡಿರುವ ಬೆಥೆಲ್ ಈ ಬಾರಿ ಐಪಿಎಲ್‌ನಲ್ಲಿ ಆರ್‌ಸಿಬಿ ಪರ ಮಿಂಚುವ ವಿಶ್ವಾಸದಲ್ಲಿದ್ದಾರೆ. ಈಗ ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಅವರು ತಮ್ಮ ಬ್ಯಾಟಿಂಗ್ ಝಲಕ್ ತೋರಿಸಿದ್ದಾರೆ.

RCB young batsman Jacob Bethel holds world record in Test cricket

ಕಿವೀಸ್ ವಿರುದ್ಧ ಆರಂಭದಿಂದಲೇ ಆಕ್ರಮಣಕಾರಿ ಬ್ಯಾಟಿಂಗ್ ಮಾಡಲು ಮುಂದಾದ ಜೇಕಬ್ ಬೆಥೆಲ್ ಕೇವಲ 37 ಎಸೆತಗಳಲ್ಲಿ 8 ಬೌಂಡರಿ ಮತ್ತು 1 ಸಿಕ್ಸರ್‌ಗಳ ನೆರವಿನಿಂದ ಅಜೇಯ 50 ರನ್ ಬಾರಿಸಿ ಇಂಗ್ಲೆಂಡ್ ತಂಡದ ಗೆಲುವಿಗೆ ನೆರವಾದರು. ಇದರೊಂದಿಗೆ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಚೊಚ್ಚಲ ಪಂದ್ಯದಲ್ಲಿ ಸ್ಪೋಟಕ ಅರ್ಧಶತಕ ಸಿಡಿಸಿದ ಇಂಗ್ಲೆಂಡ್ ಬ್ಯಾಟರ್ ಎಂಬ ದಾಖಲೆಯನ್ನು ತಮ್ಮ ಹೆಸರಿನಲ್ಲಿ ಬೆಥೆಲ್ ಮಾಡಿಕೊಂಡರು.

2015ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಪಾಕಿಸ್ತಾನದ ಮಾಜಿ ಬ್ಯಾಟರ್‌ ಮಿಸ್ಬಾ ಉಲ್ ಹಕ್ 21 ಎಸೆತಗಳಲ್ಲಿ ಟೆಸ್ಟ್ ಇತಿಹಾಸದಲ್ಲೇ ಅತಿ ವೇಗದ ಅರ್ಧಶತಕ ದಾಖಲಿಸಿದ್ದರು. ಇದಾದ ಬಳಿಕ ಬೆನ್ ಸ್ಟೋಕ್ಸ್ ಅವರು ವೆಸ್ಟ್ ಇಂಡೀಸ್ ವಿರುದ್ಧ ಎಡ್ಜ್‌ಬಾಸ್ಟನ್‌ನಲ್ಲಿ 24 ಎಸೆತಗಳಲ್ಲಿ ಈ ಸಾಧನೆ ಮಾಡಿದ್ದಾರೆ.

ಇಂಗ್ಲೆಂಡ್ ಪರ ಬೆಥೆಲ್ ಅವರ ಇಲ್ಲಿಯವರೆಗೆ 7 ಟಿ20 ಪಂದ್ಯಗಳನ್ನು ಆಡಿದ್ದು, 57.66 ಸರಾಸರಿಯಲ್ಲಿ 173 ರನ್ ಗಳಿಸಿದ್ದಾರೆ. ಇದಲ್ಲದೆ, ಅವರು ಏಳು ಏಕದಿನ ಪಂದ್ಯಗಳಲ್ಲಿ 27.83 ಸರಾಸರಿಯಲ್ಲಿ 167 ರನ್ ಕಲೆ ಹಾಕಿದ್ದಾರೆ. ಈಗ ಕ್ರೈಸ್ಟ್‌ಚರ್ಚ್‌ನ ಹ್ಯಾಗ್ಲಿ ಓವಲ್‌ನಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧ ಟೆಸ್ಟ್ ಕ್ರಿಕೆಟ್‌ಗೆ ಎಂಟ್ರಿ ಕೊಟ್ಟಿದ್ದಾರೆ. ಈ ಪಂದ್ಯದಲ್ಲಿ ಭಾನುವಾರ ನ್ಯೂಜಿಲೆಂಡ್ ವಿರುದ್ಧ ಇಂಗ್ಲೆಂಡ್ ಎಂಟು ವಿಕೆಟ್‌ಗಳ ಅದ್ಭುತ ಗೆಲುವು ದಾಖಲಿಸಿತು.

ನ್ಯೂಜಿಲೆಂಡ್ ವಿರುದ್ಧದ ಸರಣಿಯ ಮೊದಲ ಟೆಸ್ಟ್ ಪಂದ್ಯದಲ್ಲಿ 10 ವಿಕೆಟ್‌ಗಳನ್ನು ಬ್ರೈಡೆನ್ ಕಾರ್ಸೆ ಅವರು ಕಬಳಿಸಿದರು. ಈ ಅತ್ಯುತ್ತಮ ಪ್ರದರ್ಶನಕ್ಕಾಗಿ ಅವರು 'ಪಂದ್ಯದ ಆಟಗಾರ' ಪ್ರಶಸ್ತಿ ಪಡೆದರು. ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ನಡುವಿನ ಎರಡನೇ ಟೆಸ್ಟ್ ಪಂದ್ಯ ಡಿಸೆಂಬರ್ 6 ರಂದು ವೆಲ್ಲಿಂಗ್ಟನ್‌ನಲ್ಲಿ ನಡೆಯಲಿದೆ.

Story first published: Sunday, December 1, 2024, 17:01 [IST]
Other articles published on Dec 1, 2024
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+