ಹ್ಯಾಟ್ರಿಕ್ ಐಪಿಎಲ್ ಟ್ರೋಫಿ ಗೆಲ್ಲಲು RCB ಬಿಗ್ ಪ್ಲ್ಯಾನ್; 3 ಆಟಗಾರರನ್ನು ಕೈ ಬಿಡಲು ಚಿಂತನೆ
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2027ಕ್ಕೆ ಇನ್ನು ಬಹಳಷ್ಟು ದಿನಗಳು ಬಾಕಿ ಉಳಿದಿವೆ. ಈ ನಡುವೆ ಹಲವು ತಂಡಗಳು ತಮ್ಮ ತಂಡಗಳನ್ನು ಬಲಿಷ್ಠಗೊಳಿಸಿಕೊಳ್ಳಲು ಬೇಕಾದ ಕಾರ್ಯತಂತ್ರವನ್ನು ಹೆಣೆದುಕೊಳ್ಳುತ್ತಿವೆ. ಇನ್ನು ಸತತ ಎರಡು ಬಾರಿ ಐಪಿಎಲ್ ಟ್ರೋಫಿ ಗೆದ್ದಿರುವ ಆರ್‌ಸಿಬಿ, ಮೂರನೇ ಬಾರಿಗೆ ಟ್ರೋಫಿಗೆ ಮುತ್ತಿಡುವ ಕನಸು ಕಾಣುತ್ತಿದೆ. ಈ ಹಿನ್ನೆಲೆಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತನ್ನ ಕಾರ್ಯತಂತ್ರವನ್ನು ಬದಲಿಸಿಕೊಳ್ಳುವ ಸಾಧ್ಯತೆ ಇದೆ.
ಆರ್‌ಸಿಬಿ ತಂಡ 2025 ಹಾಗೂ 2026ರಲ್ಲಿ ಐಪಿಎಲ್ ಫೈನಲ್ ಗೆದ್ದು ಇತಿಹಾಸ ಬರೆದಿದೆ. ಈ ಮೂಲಕ ಸತತ ಎರಡನೇ ಬಾರಿಗೆ ಟ್ರೋಫಿ ಗೆದ್ದ ಮೂರನೇ ತಂಡ ಎಂಬ ಹೆಗ್ಗಳಿಕೆ ಆರ್‌ಸಿಬಿ ತಂಡದ್ದಾಗಿದೆ. ಆರ್‌ಸಿಬಿ ಈಗ ಹ್ಯಾಟ್ರಿಕ್ ಗೆಲುವಿನ ಕನಸಿನಲ್ಲಿದೆ. ಈ ವೇಳೆ ತನ್ನ ತಂಡವನ್ನು ಮತ್ತಷ್ಟು ಬಲಿಷ್ಠಗೊಳಿಸಿಕೊಳ್ಳಲು ಬೇಕಾದ ಮಾಸ್ಟರ್ ಪ್ಲ್ಯಾನ್ ಮಾಡಿಕೊಳ್ಳುತ್ತಿದೆ.

ಆರ್‌ಸಿಬಿ ತಂಡ ಬಲಿಷ್ಠವಾಗಿದೆ. ಸ್ಟಾರ್ ಆಟಗಾರರನ್ನು ಹೊಂದಿದ್ದು ಅಪಾರ ಅಭಿಮಾನಿಗಳನ್ನು ಹೊಂದಿದೆ. ತಂಡದ ಫೇಸ್ ಆಗಿರುವ ವಿರಾಟ್ ಕೊಹ್ಲಿ ಬ್ಯಾಟಿಂಗ್‌ನಲ್ಲಿ ತಂಡಕ್ಕೆ ಆಧಾರವಾಗಬಲ್ಲ ಕ್ಷಮತೆ ಹೊಂದಿದ್ದಾರೆ. ಇನ್ನು ಬೌಲಿಂಗ್ ವಿಭಾಗದಲ್ಲಿ ಸ್ವಿಂಗ್ ಬೌಲರ್ ಭುವನೇಶ್ವರ್ ಕುಮಾರ್ ಹಾಗೂ ಜೋಶ್ ಹ್ಯಾಜಲ್ ವುಡ್ ಎದುರಾಳಿ ಬ್ಯಾಟರ್‌ಗಳನ್ನು ಕಾಡಬಲ್ಲರು. ಈ ಆಟಗಾರರ ಸ್ಥಿರ ಪ್ರದರ್ಶನದ ಫಲವಾಗಿ ಆರ್‌ಸಿಬಿ ಸತತ ಎರಡು ಬಾರಿ ಐಪಿಎಲ್ ಟ್ರೋಫಿ ಗೆದ್ದಿದೆ. ಈಗ ಹ್ಯಾಟ್ರಿಕ್ ಟ್ರೋಫಿ ಗೆಲ್ಲುವ ಕನಸು ಕಾಣುತ್ತಿದೆ.
ಮೂವರು ಆಟಗಾರರಿಗೆ ಗೇಟ್ ಪಾಸ್
ಹ್ಯಾಟ್ರಿಕ್ ಸಾಧನೆ ಮಾಡಲು ಆರ್‌ಸಿಬಿ ಬಿಗ್ ಪ್ಲ್ಯಾನ್ ಮಾಡಿಕೊಂಡಿದೆ. ಈ ಹಿನ್ನೆಲೆಯಲ್ಲಿ ಆರ್‌ಸಿಬಿ ಮೂರು ಆಟಗಾರರನ್ನು ಕೈ ಬಿಡುವ ಸಾಧ್ಯತೆ ಇದೆ. ಮುಂದಿನ ಆವೃತ್ತಿಗೆ ಆರ್‌ಸಿಬಿ ಜಿತೇಶ್ ಶರ್ಮಾ, ರೊಮಾರಿಯೋ ಶೆಫರ್ಡ್ ಮತ್ತು ಸ್ಪಿನ್ನರ್ ಸುಯಶ್ ಶರ್ಮ ಅವರನ್ನು ರಿಲೀಸ್ ಮಾಡಲು ಫ್ರಾಂಚೈಸಿ ಚಿಂತನೆ ನಡೆಸಿದ ಎಂದು ವರದಿಯಾಗಿದೆ.

ಆರ್‌ಸಿಬಿ ರಿಲೀಸ್ ಮಾಡುವ ಆಟಗಾರರ ಪಟ್ಟಿಯಲ್ಲಿ ವಿಕೆಟ್ ಕೀಪರ್ ಬ್ಯಾಟರ್ ಜಿತೇಶ್ ಶರ್ಮಾ ಅವರ ಹೆಸರು ಅಗ್ರಸ್ಥಾನದಲ್ಲಿದೆ. ಆರ್‌ಸಿಬಿ ಫ್ರಾಂಚೈಸಿಯು ಜಿತೇಶ್ ಅವರನ್ನು ಬರೋಬ್ಬರಿ 11 ಕೋಟಿ ರೂಪಾಯಿಗಳ ಭಾರಿ ಮೊತ್ತಕ್ಕೆ ತಂಡಕ್ಕೆ ಸೇರಿಸಿಕೊಂಡಿತ್ತು. ಆದರೆ ಐಪಿಎಲ್ 2026ರ ಆವೃತ್ತಿಯಲ್ಲಿ ಅವರ ಬ್ಯಾಟಿಂಗ್ ಸಂಪೂರ್ಣ ವೈಫಲ್ಯ ಕಂಡಿತು. ಆಡಿದ ಎಲ್ಲಾ 16 ಪಂದ್ಯಗಳಲ್ಲಿ ಅವರು ಕೇವಲ 116 ರನ್ ಸಿಡಿಸಿದ್ದಾರೆ. ಇವರ ಕಳಪೆ ಫಾರ್ಮ್‌ನಿಂದಾಗಿ ಹರಾಜಿಗೂ ಮುನ್ನ ಅವರನ್ನು ಕೈಬಿಟ್ಟು ಪರ್ಸ್ ಮೌಲ್ಯ ಹೆಚ್ಚಿಸಿಕೊಳ್ಳಲು ಆರ್‌ಸಿಬಿ ಪ್ಲ್ಯಾನ್ ಮಾಡಿಕೊಂಡಿದೆ.
ಆರ್‌ಸಿಬಿ ಲೆಕ್ಕಾಚಾರ ಏನು?
ಮತ್ತೊಂದೆಡೆ ವೆಸ್ಟ್ ಇಂಡೀಸ್‌ನ ಆಲ್‌ರೌಂಡರ್ ರೊಮಾರಿಯೋ ಶೆಫರ್ಡ್ ಸಹ ಲಯ ಕಂಡುಕೊಳ್ಳಲು ಪರದಾಟ ನಡೆಸಿದ್ದಾರೆ. ಇವರು ಕಳೆದ ಆವೃತ್ತಿಯಲ್ಲಿ ಸ್ಥಿರ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದು, 9 ವಿಕೆಟ್ ಪಡೆದು ದುಬಾರಿಯಾಗಿದ್ದರು.
ಆರ್‌ಸಿಬಿ 20ನೇ ಆವೃತ್ತಿಗೂ ಮುನ್ನ ಸ್ಪಿನ್ ಬೌಲರ್ ಸುಯಶ್ ಶರ್ಮಾ ಅವರನ್ನು ಕೈ ಬಿಡುವ ಸಾಧ್ಯತೆ ಇದೆ. ಇವರ ಬದಲಿಗೆ ನುರಿತ ಸ್ಪಿನ್ ಬೌಲರ್ ಒಬ್ಬರನ್ನು ತಂಡಕ್ಕೆ ಸೇರಿಸಿಕೊಳ್ಳುವ ಪ್ಲ್ಯಾನ್ ತಂಡದ್ದಾಗಿದೆ. ಸುಯಶ್ ಶರ್ಮಾ ಐಪಿಎಲ್‌ನಲ್ಲಿ ಆರ್‌ಸಿಬಿ ಹಾಗೂ ಕೆಕೆಆರ್ ತಂಡದ ಪರ ಆಡಿದ ಅನುಭವ ಹೊಂದಿದ್ದಾರೆ. ಇವರು ಆಡಿದ 39 ಪಂದ್ಯಗಳಲ್ಲಿ 27 ವಿಕೆಟ್ ಕಬಳಿಸಿದ್ದಾರೆ. ಆದರೆ ಇವರು ಕಳೆದ ಆವೃತ್ತಿಯಲ್ಲಿ ಆಡಿದ 12 ಪಂದ್ಯಗಳಲ್ಲಿ ಕೇವಲ 9 ವಿಕೆಟ್ ಪಡೆಯುವಲ್ಲಿ ಮಾತ್ರ ಸಫಲರಾಗಿದ್ದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications

