RCB ಸೇರುತ್ತಿದ್ದಂತೆ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆದ ಇಂಗ್ಲೆಂಡ್ ಪ್ಲೇಯರ್
ಐಪಿಎಲ್ ಮೆಗಾ ಹರಾಜು ಎರಡು ದಿನಗಳ ಕಾಲ ಸೌದಿ ಅರೆಬಿಯಾದಲ್ಲಿ ನಡೆಯಿತು. ಈ ವೇಳೆ ಹಲವು ತಂಡಗಳು ಸ್ಟಾರ್ ಆಟಗಾರರಿಗೆ ಮಣೆ ಹಾಕಿದವು. ಆರ್‌ಸಿಬಿ ಸಹ ಹಲವು ಯುವ ಹಾಗೂ ಅನುಭವಿ ಆಟಗಾರರನ್ನು ತನ್ನ ತಂಡದಲ್ಲಿ ಸೇರಿಸಿಕೊಂಡಿದೆ. ಈ ಬಾರಿ ಹರಾಜಿನಲ್ಲಿ ಆರ್‌ಸಿಬಿ ಅಂದುಕೊಂಡಂತಹ ಆಟಗಾರರನ್ನು ಖರೀದಿಸದೇ ಇದ್ದರೂ ಒಳ್ಳೆಯ ತಂಡವನ್ನು ಕಟ್ಟುವಲ್ಲಿ ನಿರತವಾಗಿದೆ. ಆರ್‌ಸಿಬಿ ಈ ಬಾರಿಯ ಹರಾಜಿನಲ್ಲಿ ಇಂಗ್ಲೆಂಡ್ ತಂಡದ ಯುವ ಆಟಗಾರನಿಗೆ ಮಣೆ ಹಾಕಿತ್ತು. ಈ ಆಟಗಾರ ಆರ್‌ಸಿಬಿ ತಂಡದಲ್ಲಿ ಸ್ಥಾನ ಪಡೆಯುತ್ತಿದ್ದಂತೆ ಲಕ್ ಬದಲಾಗಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಒಟ್ಟು 8 ವಿದೇಶಿ ಆಟಗಾರರನ್ನು ತನ್ನ ತಂಡದಲ್ಲಿ ಸೇರಿಸಿಕೊಂಡಿದೆ. ಇದರಲ್ಲಿ ಮೂವರು ಇಂಗ್ಲೆಂಡ್, ಇಬ್ಬರು ಆಸ್ಟ್ರೇಲಿಯಾ ತಂಡದ ಆಟಗಾರರು ಸೇರಿದ್ದಾರೆ. ಆರ್‌ಸಿಬಿ ಖರೀದಿಸಿದ ಆಟಗಾರ ಈಗಾಗಲೇ ಇಂಗ್ಲೆಂಡ್ ತಂಡದ ಸೀಮಿತ ಓವರ್‌ಗಳ ತಂಡದಲ್ಲಿ ಸ್ಥಾನ ಪಡೆದಿದ್ದರೂ ಸಹ ಟೆಸ್ಟ್ ತಂಡದಲ್ಲಿ ಆಡಲು ಅವಕಾಶ ಸಿಕ್ಕಿರಲಿಲ್ಲ. ಆದರೆ ಈಗ ವೈಟ್ ಜೆರ್ಸಿಯಲ್ಲೂ 21 ವರ್ಷದ ಜಾಕೋಬ್ ಬೆಥೆಲ್ ಮಿಂಚಲು ರೆಡಿಯಾಗಿದ್ದಾರೆ. ಆರ್‌ಸಿಬಿ ತಂಡ 2.6 ಕೋಟಿ ರೂ.ಗೆ ಖರೀದಿಸಿದೆ. ಆರ್‌ಸಿಬಿಗೆ ಬಂದ ಕೂಡಲೇ ಅದೃಷ್ಟ ಖುಲಾಯಿಸಿದಂತೆ ಕಾಣುತ್ತಿದೆ.

ಟೆಸ್ಟ್ ಪದಾರ್ಪಣೆ ಮಾಡುವ ಅವಕಾಶ ಪಡೆದ ಆರ್‌ಸಿಬಿ ಈ ಆಟಗಾರನನ್ನು ಹರಾಜಿನ ಎರಡನೇ ದಿನದಂದು ಸೋಮವಾರ, ನವೆಂಬರ್ 25 ರಂದು ಆರ್‌ಸಿಬಿ ಖರೀದಿಸಿತು. ಆರ್‌ಸಿಬಿ ತಂಡ ಸೇರುತ್ತಿದ್ದಂತೆ ರಾಷ್ಟ್ರೀಯ ಟೆಸ್ಟ್ ತಂಡದಲ್ಲಿ ಆಡುವ ಅವಕಾಶ ಸಿಕ್ಕಿದೆ. ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ನಡುವೆ ಮೂರು ಪಂದ್ಯಗಳ ಟೆಸ್ಟ್ ಸರಣಿ ನಡೆಯಲಿದೆ. ಈ ಸರಣಿಯ ಮೊದಲ ಪಂದ್ಯ ಡಿಸೆಂಬರ್ 28 ರಂದು ನಡೆಯಲಿದೆ. ಈ ಪಂದ್ಯಕ್ಕಾಗಿ ಇಂಗ್ಲೆಂಡ್ ತಂಡ ಆಡುವ ತಂಡವನ್ನು ಘೋಷಿಸಿದೆ. ಈ ತಂಡದಲ್ಲಿ ಜಾಕೋಬ್ ಬೆಥೆಲ್ ಅವರಿಗೆ ಆಡುವ ಅವಕಾಶ ಸಿಕ್ಕಿದೆ. ಜಾಕೋಬ್ ಬೆಥೆಲ್ ಈಗಾಗಲೇ ಏಕದಿನ ಮತ್ತು ಟಿ20ಗೆ ಪದಾರ್ಪಣೆ ಮಾಡಿದ್ದರು. ಈಗ ಮೂರು ತಿಂಗಳ ಅವಧಿಯಲ್ಲಿ ಅವರು ಎಲ್ಲಾ ಮೂರು ಮಾದರಿಗಳಲ್ಲಿ ತಮ್ಮ ಚೊಚ್ಚಲ ಪ್ರವೇಶ ಮಾಡಿದ್ದಾರೆ.
ಅವಕಾಶ ಸಿಕ್ಕಿದ್ದು ಹೇಗೆ?
ಜೋರ್ಡಾನ್ ಕಾಕ್ಸ್ ಕಳೆದ ವಾರ ಕ್ವೀನ್ಸ್‌ಟೌನ್‌ನಲ್ಲಿ ಅಭ್ಯಾಸದ ಸಮಯದಲ್ಲಿ ಗಾಯಗೊಂಡಿದ್ದರು. ಇಂಗ್ಲೆಂಡ್ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಜೋರ್ಡಾನ್ ಕಾಕ್ಸ್ ಗಾಯಗೊಂಡಿರುವ ಕಾರಣ ಜಾಕಬ್ ಬೆಥೆಲ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಇವರು ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲಿದ್ದಾರೆ. ಜೋರ್ಡಾನ್ ಕಾಕ್ಸ್ ಅನುಪಸ್ಥಿತಿಯಲ್ಲಿ ಒಲಿ ಪೋಪ್ ಕೂಡ ವಿಕೆಟ್ ಕೀಪರ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಇಂಗ್ಲೆಂಡ್ ಘೋಷಿತ ತಂಡ:
ಜಾಕ್ ಕ್ರಾಲಿ, ಬೆನ್ ಡಕೆಟ್, ಜಾಕೋಬ್ ಬೆಥೆಲ್, ಜೋ ರೂಟ್, ಹ್ಯಾರಿ ಬ್ರೂಕ್, ಒಲ್ಲಿ ಪೋಪ್ (ವಿಕೆಟ್ ಕೀಪರ್), ಬೆನ್ ಸ್ಟೋಕ್ಸ್ (ನಾಯಕ), ಕ್ರಿಸ್ ವೋಕ್ಸ್, ಗಸ್ ಅಟ್ಕಿನ್ ಸನ್, ಬ್ರೈಡನ್ ಕಾರ್ಸೆ, ಶೋಯೆಬ್ ಬಶೀರ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications