ಟೆಸ್ಟ್ ತಂಡದಿಂದ ಹಾರ್ದಿಕ್ ಪಾಂಡ್ಯರನ್ನು ಕೈಬಿಟ್ಟ ಅಸಲಿ ಕಾರಣ ಬಹಿರಂಗ

ವಿಶ್ವ ಟೆಸ್ಟ್ ಕ್ರಿಕೆಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯ ಹಾಗೂ ಇಂಗ್ಲೆಂಡ್ ವಿರುದ್ಧದ 5 ಟೆಸ್ಟ್ ಪಂದ್ಯಗಳ ಸರಣಿಗೆ ಶುಕ್ರವಾರ (ಮೇ 7) ಭಾರತ ತಂಡವನ್ನು ಪ್ರಕಟಿಸಲಾಗಿದೆ. ವಿರಾಟ್ ಕೊಹ್ಲಿ ನೇತೃತ್ವದ 20 ಸದಸ್ಯರ ತಂಡವನ್ನು ಪ್ರಕಟಿಸಲಾಗಿದ್ದು, ಇವರ ಜೊತೆ 4 ಮೀಸಲು ಆಟಗಾರರನ್ನು ಸಹ ಪ್ರಕಟ ಮಾಡಲಾಗಿದೆ.
ಇಂಗ್ಲೆಂಡ್‌ಗೆ ಹಾರಲಿರುವ ಟೀಮ್ ಇಂಡಿಯಾ ಸ್ಕ್ವಾಡ್ ಹೀಗಿದೆ : ವಿರಾಟ್ ಕೊಹ್ಲಿ (ನಾಯಕ), ಅಜಿಂಕ್ಯ ರಹಾನೆ (ಉಪನಾಯಕ), ರೋಹಿತ್ ಶರ್ಮಾ, ಶುಬ್ಮನ್ ಗಿಲ್, ಮಾಯಾಂಕ್ ಅಗರ್ವಾಲ್, ಚೇತೇಶ್ವರ ಪೂಜಾರ, ಹನುಮ ವಿಹಾರಿ, ರಿಷಭ್ ಪಂತ್ (ವಿಕೆಟ್ ಕೀಪರ್), ಆರ್. ಅಶ್ವಿನ್, ರವೀಂದ್ರ ಜಡೇಜಾ , ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಜಸ್‌ಪ್ರೀತ್ ಬುಮ್ರಾ, ಇಶಾಂತ್ ಶರ್ಮಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಶಾರ್ದುಲ್ ಠಾಕೂರ್, ಉಮೇಶ್ ಯಾದವ್, ಕೆ.ಎಲ್ ರಾಹುಲ್(ಫಿಟ್‌ನೆಸ್ ಪರೀಕ್ಷೆಗೆ ಒಳಪಡಬೇಕಿದೆ) ಮತ್ತು ವೃದ್ಧಿಮಾನ್ ಸಾಹಾ (ಫಿಟ್‌ನೆಸ್ ಪರೀಕ್ಷೆಗೆ ಒಳಪಡಬೇಕಿದೆ). ಈ 20 ಆಟಗಾರರ ಜತೆ ನಾಲ್ವರು ಮೀಸಲು ಆಟಗಾರರನ್ನು ಬಿಸಿಸಿಐ ಹೆಸರಿಸಿದೆ. ಟೀಮ್ ಇಂಡಿಯಾ ಸ್ಕ್ವಾಡ್ ಜೊತೆಗೆ ಈ ಆಟಗಾರರು ಕೂಡ ಇಂಗ್ಲೆಂಡ್‌ಗೆ ಪ್ರಯಾಣವನ್ನು ಬೆಳೆಸಲಿದ್ದಾರೆ. ಆ ಆಟಗಾರರೆಂದರೆ : ಅಭಿಮನ್ಯು ಈಶ್ವರನ್, ಪ್ರಸಿದ್ಧ್ ಕೃಷ್ಣ, ಆವೇಶ್ ಖಾನ್, ಅರ್ಜಾನ್ ನಾಗ್ವಾಸ್ವಲ್ಲಾ.
ಪ್ರಕಟವಾಗಿರುವ ಈ ಭಾರತ ತಂಡದಲ್ಲಿ ಹಾರ್ದಿಕ್ ಪಾಂಡ್ಯ ಅವರಿಗೆ ಸ್ಥಾನ ಸಿಗದಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ. ಈ ಕುರಿತು ಮಾಜಿ ಕ್ರಿಕೆಟಿಗ ಆಕಾಶ್ ಚೋಪ್ರಾ ಕೂಡ ಮಾತನಾಡಿದ್ದು ಹಾರ್ದಿಕ್ ಪಾಂಡ್ಯರನ್ನು ಟೆಸ್ಟ್ ಕ್ರಿಕೆಟ್ ತಂಡದಿಂದ ಹೊರಗಿಟ್ಟಿದ್ದೇಕೆ ಎಂಬುದರ ಕುರಿತು ತಮ್ಮ ಅಭಿಪ್ರಾಯವನ್ನು ಈ ಕೆಳಕಂಡಂತೆ ವ್ಯಕ್ತಪಡಿಸಿದ್ದಾರೆ.

ಸದ್ಯಕ್ಕೆ ಟೆಸ್ಟ್ ಕ್ರಿಕೆಟ್ನಲ್ಲಿ ಹಾರ್ದಿಕ್ ಪಾಂಡ್ಯ ಆಡುವುದು ಅನುಮಾನ
ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯಕ್ಕೆ ಹಾರ್ದಿಕ್ ಪಾಂಡ್ಯ ಆಯ್ಕೆಯಾಗದಿರುವುದು ಪರವಾಗಿಲ್ಲ, ಆದರೆ ಇಂಗ್ಲೆಂಡ್ ವಿರುದ್ಧದ 5 ಟೆಸ್ಟ್ ಪಂದ್ಯಗಳಿಗೂ ಅವರನ್ನು ಆಯ್ಕೆ ಮಾಡದಿರುವುದು ದೀರ್ಘಾವಧಿಯ ಕಾಲ ಟೆಸ್ಟ್ ಕ್ರಿಕೆಟ್ನಲ್ಲಿ ಹಾರ್ದಿಕ್ ಪಾಂಡ್ಯ ಕಾಣಿಸಿಕೊಳ್ಳುವುದಿಲ್ಲ ಎಂಬ ಸೂಚನೆಯನ್ನು ನೀಡಿವೆ ಎಂದು ಆಕಾಶ್ ಚೋಪ್ರಾ ಅಭಿಪ್ರಾಯಪಟ್ಟಿದ್ದಾರೆ.

ಪಾಂಡ್ಯ ಬೌಲಿಂಗ್‌ನಲ್ಲಿ ಸಮಸ್ಯೆ
ಟೆಸ್ಟ್ ಕ್ರಿಕೆಟ್ನಲ್ಲಿ ಹಾರ್ದಿಕ್ ಪಾಂಡ್ಯ ಬೌಲಿಂಗ್ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ ಎಂದು ನಾಯಕ ವಿರಾಟ್ ಕೊಹ್ಲಿ ಕೂಡ ಈ ಹಿಂದೆ ಹೇಳಿದ್ದರು ಎಂದು ಆಕಾಶ್ ಚೋಪ್ರಾ ಇದೇ ವೇಳೆ ತಿಳಿಸಿದರು.

ಸದ್ಯಕ್ಕೆ ಟೆಸ್ಟ್ ಕ್ರಿಕೆಟ್ ಆಡುವುದಿಲ್ಲ ಎಂದಿದ್ದ ಪಾಂಡ್ಯ
ವಿರಾಟ್ ಕೊಹ್ಲಿ ಅವರ ಈ ಹೇಳಿಕೆ ಬೆನ್ನಲ್ಲೇ ಹಾರ್ದಿಕ್ ಪಾಂಡ್ಯ ಕೂಡ ಟೆಸ್ಟ್ ಕ್ರಿಕೆಟ್ ಕುರಿತು ಮಾತನಾಡಿದ್ದರು. ಬೆನ್ನು ನೋವಿನ ಸಮಸ್ಯೆ ಹೆಚ್ಚಾಗಿದ್ದು ಬೌಲಿಂಗ್ ಮಾಡಲಾಗುತ್ತಿಲ್ಲ, ಹೀಗಾಗಿ ಸದ್ಯಕ್ಕೆ ಟೆಸ್ಟ್ ಕ್ರಿಕೆಟ್ ಆಡುವುದಿಲ್ಲ ಎಂದು ಹಾರ್ದಿಕ್ ಪಾಂಡ್ಯ ಹೇಳಿದ್ದರು ಎಂಬುದನ್ನು ಆಕಾಶ್ ಚೋಪ್ರಾ ತಿಳಿಸಿದರು.

ಐಪಿಎಲ್‌ನಲ್ಲೂ ಸಮಸ್ಯೆ ಎದುರಿಸಿದ್ದ ಪಾಂಡ್ಯ
2021ರ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ಹಾರ್ದಿಕ್ ಪಾಂಡ್ಯ ಬೌಲಿಂಗ್ ಮಾಡಿರಲಿಲ್ಲ. ತೀವ್ರ ಭುಜದ ನೋವಿದ್ದ ಕಾರಣ ಹಾರ್ದಿಕ್ ಪಾಂಡ್ಯ ಆರ್‌ಸಿಬಿ ವಿರುದ್ಧದ ಪಂದ್ಯದಲ್ಲಿ ಬೌಲಿಂಗ್ ಮಾಡಿರಲಿಲ್ಲ ಎಂದು ಕ್ರಿಸ್ ಲಿನ್ ತಿಳಿಸಿದ್ದರು.
ಹೀಗೆ ಬೆನ್ನು ಮತ್ತು ಭುಜದ ನೋವಿನಿಂದ ಬಳಲುತ್ತಿರುವ ಕಾರಣಕ್ಕೆ ಹಾರ್ದಿಕ್ ಪಾಂಡ್ಯ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯ ಮತ್ತು ಇಂಗ್ಲೆಂಡ್ ವಿರುದ್ಧದ 5 ಟೆಸ್ಟ್ ಪಂದ್ಯಗಳ ಸರಣಿಗೆ ಅಲಭ್ಯರಾಗಿದ್ದಾರೆ ಎಂಬ ಚರ್ಚೆಗಳು ಸಾಮಾಜಿಕ ಜಾಲತಾಣದಲ್ಲಿ ನಡೆಯುತ್ತಿವೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications