ಟಿ20 ವಿಶ್ವಕಪ್‌ಗೆ ಭಾರತ ತಂಡದಲ್ಲಿ ಈ ಹಿರಿಯ ಆಟಗಾರನಿಗೆ ಸ್ಥಾನವಿಲ್ಲ: ವರದಿ

ಟಿ20 ವಿಶ್ವಕಪ್‌ಗೆ ಕೆಲವೇ ತಿಂಗಳುಗಳು ಬಾಕಿ ಇರುವ ಹಿನ್ನೆಲೆಯಲ್ಲಿ ಯಾರೆಲ್ಲಾ ಮಹತ್ವದ ಟೂರ್ನಿಯಲ್ಲಿ ಸ್ಥಾನ ಪಡೆಯಬಹುದು ಎಂಬ ಕುತೂಹಲ ಹೆಚ್ಚಾಗುತ್ತಿದೆ. ಇತ್ತ ಭಾರತ ಐರ್ಲೆಂಡ್ ವಿರುದ್ಧಧ ಎರಡು ಪಂದ್ಯಗಳ ಟಿ20 ಸರಣಿ ಮುಗಿಸಿದ್ದು ಇಂಗ್ಲೆಂಡ್ ವಿರುದ್ಧಧ ಸರಣಿಗೆ ಸಜ್ಜಾಗುತ್ತಿದೆ. ಹೀಗಾಗಿ ಭಾರತ ಟಿ20 ವಿಶ್ವಕಪ್‌ಗೆ ಮುನ್ನ ಕೆಲವೇ ಕೆಲವು ಪಂದ್ಯಗಳನ್ನಷ್ಟೇ ಆಡಲಿದೆ. ಈ ಸಂದರ್ಭದಲ್ಲಿ ಆಯ್ಕೆಗಾರರು ಆಟಗಾರರ ಪ್ರದರ್ಶನದ ಮೇಲೆ ತಮ್ಮ ಹದ್ದಿನ ಕಣ್ಣಿಟ್ಟಿರುವುದು ಸ್ಪಷ್ಟ.
ಆದರೆ ಮೂಲಗಳ ಮಾಹಿತಿಯ ಪ್ರಕಾರ ತಂಡದ ಅನುಭವಿ ಆಟಗಾರ ಈ ಬಾರಿಯ ಟಿ20 ವಿಶ್ವಕಪ್‌ನಲ್ಲಿ ಕಣಕ್ಕಿಳಿಯುವ ತಂಡದಲ್ಲಿ ಸ್ಥಾನ ಪಡೆಯುವ ಸ್ಪರ್ಧೆಯಲ್ಲಿಲ್ಲ ಎನ್ನಲಾಗಿದೆ. ಚುಟುಕು ಮಾದರಿಯ ಕ್ರಿಕೆಟ್‌ಗೆ ಈ ಅನುಭವಿ ಸಮರ್ಥ ಆಟಗಾರ ಎಂದು ಆಯ್ಕೆಗಾರರು ಪರಿಗಣಿಸಿಲ್ಲ ಎನ್ನುತ್ತಿವೆ ಮೂಲಗಳು

ಟಿ20 ವಿಶ್ವಕಪ್‌ನಲ್ಲ ಆಡಲ್ಲ ಶಮಿ?
ಬಲ್ಲ ಮೂಲಗಳ ಮಾಹಿತಿಯ ಪ್ರಕಾರ ತಂಡದ ಅನುಭವಿ ಬೌಲರ್ ಮೊಹಮ್ಮದ್ ಶಮಿ ಟಿ20 ವಿಶ್ವಕಪ್‌ನಲ್ಲಿ ಸ್ಥಾನ ಪಡೆಯಬಹುದಾದ ಬೌಲರ್‌ಗಳ ಸ್ಪರ್ಧೆಯಲ್ಲಿಲ್ಲ ಎನ್ನಲಾಗಿದೆ. "ಆಯ್ಕೆಗಾರರು ಮೊಹಮ್ಮದ್ ಶಮಿಯನ್ನು ಟಿ20 ವಿಶ್ವಕಪ್‌ನಲ್ಲಿ ಆಡಲು ಸಮರ್ಥರು ಎಂದು ಭಾವಿಸಿಲ್ಲ. ಯುವ ಆಟಗಾರರಿಗೆ ಹೆಚ್ಚಿನ ಅವಕಾಶ ನೀಡುವ ಮೂಲಕ ಮುಂದಿನ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ವಿಶ್ವಕಪ್‌ಗೆ ಆಯ್ಕೆ ಮಾಡಿಕೊಳ್ಳುವ ಇಚ್ಛೆ ಹೊಂದಿದ್ದಾರೆ" ಎಂದು ಈ ಬಗ್ಗೆ ಮಾಹಿತಿಯಿರುವ ಮೂಲಗಳು ಹೇಳಿಕೆ ನೀಡಿದ್ದಾರೆ.

ಆಸ್ಟ್ರೇಲಿಯಾಗೆ ಹಾರಲಿದ್ದಾರೆ ಭುವಿ
ಹೆಸರು ಹೇಳಲಿಚ್ಛಿಸದ ಬಿಸಿಸಿಐ ಅಧಿಕಾರಿಯೊಬ್ಬರು ಈ ಆಯ್ಕೆ ವಿಚಾರವಾಗಿ ಕುತೂಹಕಲಾರಿ ಮಾಹಿತಿ ಬಹಿರಂಗಪಡಿಸಿದ್ದಾರೆ. "ಅನುಭವಿ ಆಟಗಾರನಾಗಿ ಭುವನೇಶ್ವರ್ ಕುಮಾರ್ ಅವರನ್ನು ವಿಶ್ವಕಪ್ ತಂಡಕ್ಕೆ ಆಯ್ಕೆ ಮಾಡಬಹುದು. ಆದರೆ ಮೊಹಮ್ಮದ್ ಶಮಿ ಆಸ್ಟ್ರೇಲಿಯಾಗೆ ಪ್ರಯಾಣಿಸಲು ಟಿಕೆಟ್ ಮಿಸ್ ಮಾಡಿಕೊಳ್ಳುವ ಸಾಧ್ಯತೆಯಿದೆ" ಎಂದಿದ್ದಾರೆ.
IND vs ENG 5ನೇ ಟೆಸ್ಟ್: ಬುಮ್ರಾ ನಾಯಕನಲ್ಲ; ಅಚ್ಚರಿ ಮೂಡಿಸಿದ ರಾಹುಲ್ ದ್ರಾವಿಡ್ ಹೇಳಿಕೆ!

ಚುಟಕು ತಂಡದಲ್ಲಿ ಸ್ಥಾನ ಪಡೆಯಲು ವಿಫಲವಾಗಿರುವ ಶಮಿ
ಟೆಸ್ಟ್ ಸರಣಿಯಲ್ಲಿ ಭಾರತ ತಂಡದ ಪ್ರಮುಖ ಭಾಗವಾಗಿರುವ ಶಮಿ ಸೀಮಿತ ಓವರ್‌ಗಳ ತಂಡದಲ್ಲಿ ಇತ್ತೀಚೆಗೆ ಸ್ಥಾನ ಪಡೆಯಲು ಸತತವಾಗಿ ವಿಫಲವಾಗಿದ್ದಾರೆ. ಈ ಬಾರಿಯ ಐಪಿಎಲ್ ಆವೃತ್ತಿಯಲ್ಲಿ ಶಮಿ ಅದ್ಭುತ ಬೌಲಿಂಗ್ ದಾಳಿ ನಡೆಸಿದ್ದರೂ ಭಾರತ ಸೀಮಿತ ಓವರ್‌ಗಳ ಸರಣಿಯಲ್ಲಿ ಸ್ಥಾನವನ್ನು ಪಡೆದುಕೊಂಡಿಲ್ಲ. ಕಳೆದ ವರ್ಷ ನಡೆದ ಟಿ20 ವಿಶ್ವಕಪ್‌ನಲ್ಲಿ ನಮೀಬಿಯಾ ವಿರುದ್ಧದ ಪಂದ್ಯದಲ್ಲಿ ಶಮಿ ಕೊನೆಯ ಬಾರಿಗೆ ಚುಟಕು ಮಾದರಿಯಲ್ಲಿ ಭಾರತದ ಪರವಾಗಿ ಆಡಿದ್ದರು.

ಟೆಸ್ಟ್ ಪಂದ್ಯದಲ್ಲಿ ಆಡಲಿದ್ದಾರೆ ಶಮಿ
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಅಂತಿಮ ಪಂದ್ಯದಲ್ಲಿ ಮೊಹಮ್ಮದ್ ಶಮಿ ಭಾರತ ತಂಡದ ಪರವಾಗಿ ಕಣಕ್ಕಿಳಿಯಲಿದ್ದಾರೆ. ಕಳೆದ ವರ್ಷ ನಡೆಯಬೇಕಿದ್ದ ಈ ಪಂದ್ಯ ಕೊರೊನಾವೈರಸ್ ಕಾರಣದಿಂದಾಗಿ ಮುಂದೂಡಲ್ಪಟ್ಟಿತ್ತು. ಈ ಸರಣಿಯಲ್ಲಿ ಭಾರತ ತಂಡ 2-1 ಅಂತರದಿಂದ ಮುನ್ನಡೆಯಲ್ಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications