ವಿಶ್ವಕಪ್‌ಗೆ ಮುನ್ನವೇ ಟಿ20 ತಂಡದಿಂದ ಸ್ಥಾನ ಕಳೆದುಕೊಳ್ಳಲಿದ್ದಾರಾ ವಿರಾಟ್ ಕೊಹ್ಲಿ!

ಭಾರತದ ಕ್ರಿಕೆಟ್ ತಂಡದಲ್ಲಿ ದಶಕಕ್ಕೂ ಹೆಚ್ಚು ಕಾಲದಿಂದ ಪ್ರಮುಖ ಭಾಗವಾಗಿರುವ ಮಾಜಿ ನಾಯಕ ವಿರಾಟ್ ಕೊಹ್ಲಿ ಇತ್ತೀಚೆಗೆ ಸಂಪೂರ್ಣವಾಗಿ ಕಳೆಗುಂದಿದ್ದಾರೆ. ವಿರಾಟ್ ಕೊಹ್ಲಿ ಬ್ಯಾಟರ್‌ನಿಂದ ರನ್ ಸರಾಗವಾಗಿ ಹರಿದುಬರುತ್ತಿಲ್ಲ. ದೊಡ್ಡ ಇನ್ನಿಂಗ್ಸ್ ಕಟ್ಟಲು ಕೊಹ್ಲಿ ಸಾಧ್ಯವಾಗುತ್ತಿಲ್ಲ. ಕಳಪೆ ಫಾರ್ಮ್‌ನ ಕಾರಣದಿಂದಾಗಿ ಸಾಕಷ್ಟು ಟೀಕೆಗಳನ್ನು ಎದುರಿಸುತ್ತಿದ್ದಾರೆ ವಿರಾಟ್ ಕೊಹ್ಲಿ. ಇದೀಗ ಭಾರತದ ಟಿ20 ತಂಡದಿಂದಲೇ ಕೊಹ್ಲಿ ಹೊರಬೀಳುವ ಸಾಧ್ಯತೆಯಿದೆ ಎಂಬ ಮಾತಿಗಳು ಕೇಳಿಬರತೊಡಗಿದೆ.
ಟೈಮ್ಸ್ ಆಪ್ ಇಂಡಿಯಾ ಈ ಬಗ್ಗೆ ವರದಿ ಮಾಡಿದ್ದು ಭಾರತ ಟಿ20 ತಂಡದಲ್ಲಿ ವಿರಾಟ್ ಕೊಹ್ಲಿಯ ಭವಿಷ್ಯದ ಬಗ್ಗೆ ಪ್ರಶ್ನೆಗಳುಂಟು ಮಾಡಿದೆ. ಇಂಗ್ಲೆಂಡ್ ವಿರುದ್ಧದ ವೈಟ್‌ಬಾಲ್ ಸರಣಿ ವಿರಾಟ್ ಕೊಹ್ಲಿಯ ಟಿ20 ಸ್ಥಾನವನ್ನು ನಿರ್ಧರಿಸಲಿದೆ ಎಂದು ಈ ವರದಿಯಲ್ಲಿ ಹೇಳಲಾಗಿದೆ.

ವೃತ್ತಿ ಜೀವನದ ಅತ್ಯಂತ ಕಳಪೆ ಫಾರ್ಮ್‌ನಲ್ಲಿದ್ದಾರೆ ಕೊಹ್ಲಿ
ವಿರಾಟ್ ಕೊಹ್ಲಿ ಸದ್ಯ ವೃತ್ತಿ ಜೀವನದಲ್ಲಿ ಅತ್ಯಂತ ಕಳಪೆ ಫಾರ್ಮ್‌ನಲ್ಲಿದ್ದಾರೆ. 2019ರ ಬಳಿಕ ವಿರಾಟ್ ಕೊಹ್ಲಿ ಶತಕವನ್ನು ಬಾರಿಸಿಲ್ಲ. ಅಲ್ಲದೆ ಈ ಬಾರಿಯ ಐಪಿಎಲ್‌ನಲ್ಲಿ ಕೊಹ್ಲಿ 22.73ರ ಸರಾಸರಿಯಲ್ಲಿ 115.99ರ ಸ್ಟ್ರೈಕ್‌ರೇಟ್‌ನಲ್ಲಿ ಕೇವಲ 341 ರನ್‌ಗಳನ್ನು ಮಾತ್ರವೇ ಗಳಿಸಲು ಯಶಸ್ವಿಯಾಗಿದ್ದರು. ಇತ್ತ ಭಾರತ ತಂಡದ ಮಧ್ಯನ ಕ್ರಮಾಂಕದಲ್ಲಿ ದೀಪಕ್ ಹೂಡಾ, ಸೂರ್ಯಕುಮಾರ್ ಯಾದವ್ ಹಾರ್ದಿಕ್ ಪಾಂಡ್ಯ ಅವರಂತಾ ಆಟಗಾರರು ಅಮೋಘ ಫಾರ್ಮ್‌ನಲ್ಲಿದ್ದು ಇಂಥಾ ಸಂದರ್ಭದಲ್ಲಿ ಕೊಹ್ಲಿ ಸ್ಥಾನ ಉಳಿಸಿಕೊಳ್ಳುವುದು ಕಷ್ಟ ಎನ್ನಲಾಗಿದೆ. ಹೀಗಾಗಿ ಇಂಗ್ಲೆಂಡ್ ವಿರುದ್ಧ ಸೀಮಿತ ಓವರ್‌ಗಳ ಸರಣಿ ಕೊಹ್ಇ ಪಾಲಿಗೆ ಮಹತ್ವವಾಗಿರಲಿದೆ.

ವಿಂಡೀಸ್ ಟಿ20 ಸರಣಿಗೆ ಭಾರತ ತಂಡ
ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಗೆ ಈಗಾಗಲೇ ಭಾರತ ತಂಡವನ್ನು ಆಯ್ಕೆ ಮಾಡಲಾಗಿದ್ದು ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ. ಟಿ20 ತಂಡದ ಆಯ್ಕೆಯ ಬಗ್ಗೆ ಆಯ್ಕೆ ಸಮಿತಿ ಮೂಲಗಳ ಹೇಳಿಕೆಯನ್ನು ಉಲ್ಲೇಖಿಸಿ ವರದಿ ಮಾಡಿದೆ. "ಅಗ್ರ ಆಟಗಾರರಿಗೆ ವಿಶ್ರಾಂತಿಗಾಗಿ ಬೇಡಿಕೆ ಬಂದಿರುವ ಕಾರಣ ಅದರ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ಟಿ20ಐ ತಂಡವನ್ನು ತಡೆಹಿಡಿಯಲಾಗಿದೆ. ರೋಹಿತ್, ಪಂತ್ ಮತ್ತು ಪಾಂಡ್ಯ ವೆಸ್ಟ್ ಇಂಡೀಸ್‌ನಲ್ಲಿ ಟಿ20 ಪಂದ್ಯಗಳನ್ನು ಆಡುವ ಸಾಧ್ಯತೆಯಿದೆ. ವಿಂಡೀಸ್ ಪ್ರವಾಸದಿಂದ ಸಂಪೂರ್ಣ ವಿಶ್ರಾಂತಿ ಪಡೆಯಲಿದ್ದಾರೆ" ಎಂದು ಟೈಮ್ಸ್ ಆಫ್ ಇಂಡಿಯಾ ಮೂಲಗಳ ಹೇಳಿಕೆಯನ್ನು ಉಲ್ಲೇಖಿಸಿ ವರದಿ ಮಾಡಿದೆ.

ಕೊಹ್ಲಿ ಬಗ್ಗೆ ಮ್ಯಾನೇಜ್‌ಮೆಂಟ್ ನಿರ್ಧಾರ
"ವಿರಾಟ್ ಕೊಹ್ಲಿ ವಿಚಾರವಾಗಿ ಟಿ20 ವಿಶ್ವಕಪ್‌ಗೆ ಯಾವ ನಿರ್ಧಾರವನ್ನು ತೆಗೆದುಕೊಳ್ಳಬೇಕು ಎಂದು ಮ್ಯಾನೇಜ್‌ಮೆಂಟ್ ಏನು ನಿರ್ಧರಿಸುತ್ತದೆ ಎಂಬುದನ್ನು ನೋಡಬೇಕು. ಇಂಗ್ಲೆಂಡ್‌ನಲ್ಲಿ ನಡೆಯಲಿರುವ ಈ ಸೀಮಿತ ಓವರ್‌ಗಳ ಸರಣಿಯು ಕೊಹ್ಲಿಗೆ ಅತ್ಯಂತ ನಿರ್ಣಾಯಕವಾಗಿದೆ" ಎಂದು ವರದಿಯಾಗಿದೆ. ಈ ಹೇಳಿಕೆ ಈಗ ಸಾಕಷ್ಟು ಕುತೂಹಲ ಮೂಡಿಸಿದ್ದು ವಿರಾಟ್ ಕೊಹ್ಲಿ ಇಂಗ್ಲೆಂಡ್ ವಿರುದ್ಧದ ಸೀಮಿತ ಓವರ್‌ಗಳ ಸರಣಿಯಲ್ಲಿ ತಮ್ಮ ಹಿಂದಿನ ಫಾರ್ಮ್‌ಗೆ ಮರಳಿದ್ದಾರಾ ಎಂಬುದನ್ನು ಕಾದು ನೋಡಬೇಕಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications