ಭಾರತ vs ಆಸ್ಟ್ರೇಲಿಯಾ: ಸೋಲಿಗೆ ಸೇಡು ತೀರಿಸಿಕೊಳ್ಳುತ್ತಾ ಭಾರತ

ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಸರಣಿಯ ಮೊದಲ ಪಂದ್ಯ ಆರಂಭವಾಗಿದೆ. ಈ ಸರಣಿಯಲ್ಲಿ ಟೀಮ್ ಇಂಡಿಯಾ ಕಳೆದ ವರ್ಷದ ಸೊಲಿಗೆ ಸೇಡು ತೀರಿಸಿಕೊಳ್ಳಲಿದೆಯಾ ಎಂಬುದು ಸದ್ಯದ ಕುತೂಹಲವಾಗಿದೆ. ಹೀಗಾಗಿ ಎರಡು ಬಲಿಷ್ಟ ತಂಡಗಳ ಕದನ ರೋಚಕತೆಯಿಂದ ಕೂಡಿರಲಿದೆ.
2019ರಲ್ಲಿ ಭಾರತ ಪ್ರವಾಸ ಕೈಗೊಂಡಿದ್ದ ಆಸ್ಟ್ರೇಲಿಯಾ ತಂಡ ಐದು ಪಂದ್ಯಗಳ ಸರಣಿಯಲ್ಲಿ ಗೆದ್ದು ಬೀಗಿತ್ತು. ಸರಣಿಯ ಐದು ಪಂದ್ಯಗಳಲ್ಲಿ ಆಸ್ಟ್ರೇಲಿಯಾ 3-2 ಅಂತರದಿಂದ ವಶಕ್ಕೆ ಪಡೆದು ಟೀಮ್ ಇಂಡಿಯಾ ವಿರುದ್ಧ ಅಬ್ಬರಿಸಿತ್ತು. ಈ ಸೋಲಿಗೆ ಟೀಮ್ ಇಂಡಿಯಾ ಸೇಡು ತೀರಿಸಿಕೊಳ್ಳು ಟೀಮ್ ಇಂಡಿಯಾಗೆ ಉತ್ತಮ ಅವಕಾಶವಿದೆ.
ಇನ್ನು ವಾಂಖೆಡೆ ಸ್ಟೇಡಿಯಮ್‌ನಲ್ಲಿ ಆಡಿರುವ 18 ಪಂದ್ಯಗಳಲ್ಲಿ ಟೀಮ್ ಇಂಡಿಯಾ 10 ಪಂದ್ಯಗಳಲ್ಲಿ ಗೆಲುವು ಕಂಡಿದ್ದರೆ, 8ಪಂದ್ಯಗಳಲ್ಲಿ ಟೀಮ್ ಇಂಡಿಯಾ ಸೋಲನ್ನು ಅನುಭವಿಸಿದೆ. ಈ ಕ್ರೀಡಾಂಗಣದಲ್ಲಿ ಭಾರತ ಆಸ್ಟ್ರೇಲಿಯಾ ಮೂರು ಬಾರಿ ಮುಖಾಮುಖಿಯಾಗಿದ್ದು 2 ಪಂದ್ಯಗಳಲ್ಲಿ ಗೆಲುವು ಕಂಡಿರುವ ಆಸ್ಟ್ರೇಲಿಯಾ ಮೇಲುಗೈ ಸಾಧಿಸಿದೆ.
33,000 ಪ್ರೇಕ್ಷಕರ ಸಾಮರ್ಥ್ಯ ಹೊಂದಿರುವ ವಾಂಖೆಡೆ ಕ್ರೀಡಾಂಗಣದಲ್ಲಿ ಟೀಮ್ ಇಂಡಿಯಾ ವಿರುದ್ಧ ದಕ್ಷಿಣ ಆಫ್ರಿಕಾ ತಂಡ 438/4 ರನ್ ಗಳಿಸಿದ್ದು ಇಲ್ಲಿ ದಾಖಲಾದ ದೊಡ್ಡ ಮೊತ್ತವಾಗಿದೆ. ಬಾಂಗ್ಲಾದೇಶ 115ರನ್‌ಗೆ ಆಲ್ಔಟ್ ಆಗಿರುವುದು ಕನಿಷ್ಠ ಮೊತ್ತವಾಗಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications