Richa Ghosh: ಮಹಿಳಾ ಟಿ20 ಕ್ರಿಕೆಟ್‌ನಲ್ಲಿ ಅತಿವೇಗದ ಅರ್ಧಶತಕ ಬಾರಿಸಿ ಆರ್‌ಸಿಬಿ ಬ್ಯಾಟರ್ ವಿಶ್ವ ದಾಖಲೆ
ವೆಸ್ಟ್ ಇಂಡೀಸ್ ವಿರುದ್ಧ ಭಾರತ ವನಿತೆಯರ ತಂಡ ಟಿ20 ಸರಣಿ ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಈ ಪಂದ್ಯದಲ್ಲಿ ಭಾರತ ತಂಡದ ಸ್ಟಾರ್ ಯುವ ಬ್ಯಾಟರ್-ವಿಕೆಟ್‌ಕೀಪರ್ ರಿಚಾ ಘೋಷ್ ಬ್ಯಾಟಿಂಗ್ ಎಲ್ಲರ ಗಮನ ಸೆಳೆದಿದೆ. ರಿಚಾ ಘೋಷ್ ಬಿರುಸಿನ ಇನ್ನಿಂಗ್ಸ್ ಆಡುವ ಮೂಲಕ ವಿಂಡೀಸ್ ತಂಡದ ಬೌಲರ್‌ಗಳ ಬೆವರಿಳಿಸಿದರು. ಈ ಮೂಲಕ ಮಹಿಳಾ ಟಿ20 ಕ್ರಿಕೆಟ್‌ನಲ್ಲಿ ಅತಿವೇಗದ ಅರ್ಧಶತಕ ಬಾರಿಸಿ ರಿಚಾ ಘೋಷ್ ವಿಶ್ವ ದಾಖಲೆ ಮಾಡಿದ್ದಾರೆ.
ನವಿ ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆದ ಅಂತಿಮ ಟಿ20 ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಬ್ಯಾಟಿಂಗ್‌ಗೆ ಬಂದ ಸ್ಮೃತಿ ಮಂಧಾನ ಮತ್ತೊಮ್ಮೆ ಅದ್ಭುತ ಇನ್ನಿಂಗ್ಸ್ ಕಟ್ಟಿದರು. ಅವರು ಕೇವಲ 47 ಎಸೆತಗಳಲ್ಲಿ 13 ಬೌಂಡರಿ ಮತ್ತು 1 ಸಿಕ್ಸರ್ ನೆರವಿನಿಂದ77 ರನ್‌ಗಳನ್ನು ಬಾರಿಸಿದರು. ರೋಡ್ರಿಗಸ್ 28 ಎಸೆತಗಳಲ್ಲಿ 39 ರನ್ ಗಳಿಸಿದರು. ಆದರೆ ನಂತರ ಬಂದ ರಿಚಾ ಘೋಷ್ ವೆಸ್ಟ್ ಇಂಡೀಸ್ ಬೌಲರ್‌ಗಳನ್ನು ಬೆಂಡೆತ್ತಿದರು. ಮೊದಲ ಎಸೆತದಿಂದಲೇ ಹೊಡಿಬಡಿ ಆಟಕ್ಕೆ ಮುಂದಾದ ರಿಚಾ 18 ಎಸೆತಗಳಲ್ಲಿ 3 ಬೌಂಡರಿ ಮತ್ತು 5 ಸಿಕ್ಸರ್‌ಗಳ ಸಹಾಯದಿಂದ ಅರ್ಧಶತಕ ಪೂರೈಸಿದರು. ಇದರೊಂದಿಗೆ ಅವರು ತಮ್ಮ ಟಿ20 ವೃತ್ತಿಜೀವನ ಎರಡನೇ ವೇಗದ ಅರ್ಧಶತಕವನ್ನು ಗಳಿಸಿದರು.

ವಿಶ್ವ ದಾಖಲೆ ಸರಿಗಟ್ಟಿದ ರಿಚಾ
ರಿಚಾ ಘೋಷ್ ಕೇವಲ 18 ಎಸೆತಗಳಲ್ಲಿ ಅರ್ಧಶತಕ ಪೂರೈಸುವುದರ ಜೊತೆಗೆ ಹಲವು ದಾಖಲೆಗಳನ್ನು ಸೃಷ್ಟಿಸಿದ್ದಾರೆ. ಭಾರತದ ಪರ ರಿಚಾ ಅತಿವೇಗದ ಅರ್ಧಶತಕ ಗಳಿಸಿದ್ದು ಮಾತ್ರವಲ್ಲದೆ, ಮಹಿಳಾ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿಯೂ ಅತಿವೇಗದ ಅರ್ಧಶತಕದ ದಾಖಲೆಯನ್ನು ಸರಿಗಟ್ಟಿದ್ದಾರೆ. ರಿಚಾ ಅವರುಗಿಂತ ಮೊದಲ ನ್ಯೂಜಿಲೆಂಡ್‌ನ ಸೋಫಿ ಡಿವೈನ್ ಮತ್ತು ಆಸ್ಟ್ರೇಲಿಯಾದ ಫೋಬೆ ಲಿಚ್ಫೀಲ್ಡ್ ಅವರು 18 ಎಸೆತಗಳಲ್ಲಿ ಅರ್ಧಶತಕಗಳನ್ನು ಗಳಿಸಿದ್ದರು.
ಏಷ್ಯಾಕಪ್‌ನಲ್ಲಿಯೂ ರೆಕಾರ್ಡ್
ಮಹಿಳಾ ಏಷ್ಯಾಕಪ್ 2024ರ ಎರಡನೇ ಪಂದ್ಯದಲ್ಲಿ ಯುಎಇ ವಿರುದ್ಧ ರಿಚಾ ಘೋಷ್ ಅಮೋಘ ಬ್ಯಾಟಿಂಗ್ ಪ್ರದರ್ಶನ ಮಾಡಿದ್ದರು. ಅಬ್ಬರದ ಬ್ಯಾಟಿಂಗ್ ಮಾಡಿದ ರಿಚಾ ಘೋಷ್ ಕೇವಲ 26 ಎಸೆತಗಳಲ್ಲಿ 9 ಬೌಂಡರಿ ಹಾಗೂ 1 ಸಿಕ್ಸರ್ ನೆರವಿನಿಂದ ಅರ್ಧಶತಕ ಸಿಡಿಸಿದ್ದರು. ಇದರೊಂದಿಗೆ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಭಾರತ ಪರ ಅತಿವೇಗದ ಅರ್ಧಶತಕ ಕಲೆ ಹಾಕಿದ ಮೂರನೇ ಬ್ಯಾಟರ್ ಎನಿಸಿಕೊಂಡಿದ್ದರು. ಇದಕ್ಕೂ ಮೊದಲು ಈ ಸಾಧನೆಯನ್ನು ಸ್ಮೃತಿ ಮಂಧಾನ ಮತ್ತು ಶಫಾಲಿ ವರ್ಮಾ ಮಾಡಿದ್ದರು.
ಭಾರತದ ದಾಖಲೆಯ ಸ್ಕೋರ್
ರಿಚಾ ಘೋಷ್ ಅವರ ಸ್ಫೋಟಕ ಇನ್ನಿಂಗ್ಸ್‌ನ ಆಧಾರದ ಮೇಲೆ ಭಾರತ 4 ವಿಕೆಟ್ ಕಳೆದುಕೊಂಡು 217 ರನ್‌ಗಳ ದಾಖಲೆಯ ಸ್ಕೋರ್ ಅನ್ನು ಕಲೆ ಹಾಕಿತ್ತು. ಇದು ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಭಾರತ ವನಿತೆಯರ ತಂಡ ಗಳಿಸಿದ ಮೊದಲ ಗರಿಷ್ಠ ಸ್ಕೋರ್. ಈ ವರ್ಷದ ಆರಂಭದಲ್ಲಿ ನಡೆದ ಯುಎಇ ವಿರುದ್ಧ ಭಾರತ 201 ರನ್ ಗಳಿಸಿದ್ದು ಇದುವರೆಗಿನ ದಾಖಲೆಯ ಸ್ಕೋರ್ ಆಗಿತ್ತು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications