ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಆಸ್ಟ್ರೇಲಿಯಾದ ದಿಗ್ಗಜ ಕ್ರಿಕೆಟಿಗ ರಿಕಿ ಪಾಂಟಿಂಗ್ ಆಸ್ಪತ್ರೆಗೆ ದಾಖಲು

Ricky Ponting admited to hospital after suffering heart complications during Test Match

ಆಸ್ಟ್ರೇಲಿಯಾದ ದಿಗ್ಗಜ ಆಟಗಾರ ರಿಕಿ ಪಾಂಟಿಂಗ್ ಅವರಿಗೆ ದಿಢೀರ್ ಆರೋಗ್ಯ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಸ್ಟ್ರೇಲಿಯಾ ಹಾಗೂ ವೆಸ್ಟ್ ಇಂಡೀಸ್ ತಂಡಗಳ ನಡುವಿನ ಟೆಸ್ಟ್ ಪರ್ತ್‌ನಲ್ಲಿ ನಡೆಯುತ್ತಿದ್ದು ಈ ಸಂದರ್ಭದಲ್ಲಿ ಹೃದಯಕ್ಕೆ ಸಂಬಂಧಿಸಿದ ತೊಂದರೆಗೆ ಒಳಗಾಗಿರುವ ರಿಕಿ ಪಾಂಟಿಂಗ್ ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ.

ಆಸ್ಟ್ರೇಲಿಯಾ ಹಾಗೂ ವೆಸ್ಟ್ ಇಂಡೀಸ್ ನಡುವಿನ ಟೆಸ್ಟ್ ಸರಣಿಯಲ್ಲಿ ರಿಕಿ ಪಾಂಟಿಂಗ್ ಕಾಮೆಂಟೇಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿಧ್ದರು. ಮಧ್ಯಾಹ್ನ ಭೋಜನ ವಿರಾಮದ ಸಂದರ್ಭದಲ್ಲಿ ಹೃದಯ ಸಂಬಂಧಿ ಸಮಸ್ಯೆಗೆ ಒಳಗಾದರು ಎನ್ನಲಾಗಿದೆ. ಹೀಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನಡೆಯುತ್ತಿದೆ.

ರಿಷಭ್ ಮ್ಯಾಚ್ ವಿನ್ನರ್, ಸಂಜು ಸ್ಯಾಮ್ಸನ್ ಕಾಯಲೇ ಬೇಕು: ಶಿಖರ್ ಧವನ್ರಿಷಭ್ ಮ್ಯಾಚ್ ವಿನ್ನರ್, ಸಂಜು ಸ್ಯಾಮ್ಸನ್ ಕಾಯಲೇ ಬೇಕು: ಶಿಖರ್ ಧವನ್

ಆಸ್ಟ್ರೇಲಿಯಾದ ಕ್ರೀಡಾ ವಾಹಿನಿ ಚಾನೆಲ್ 7ಗೆ ಕಾಮೆಂಟೇಟರ್ ಆಗಿ ಪಾಂಟಿಂಗ್ ಕರ್ತವ್ಯ ನಿರ್ವಹಿಸುತ್ತಿದ್ದರು. ಹೀಗಾಗಿ ಚಾನೆಲ್ 7ನ ವಕ್ತಾರ ರಿಕಿ ಪಾಂಟಿಂಗ್ ಈ ದಿನದ ಕಾಮೆಂಟರಿಯಿಂದ ಹೊರಗುಳೀಯಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಶನಿವಾರ ಕಾಮೆಂಟರಿಯಲ್ಲಿ ಪಾಂಟಿಂಗ್ ಕಾಣಿಸಿಕೊಳ್ಳಲಿದ್ದಾರಾ ಎಂಬ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ.

ಇತ್ತೀಚೆಗೆ ಆಸ್ಟ್ರೇಲಿಯಾ ಕೆಲ ದಿಗ್ಗಜ ಆಟಗಾರರನ್ನು ಕಳೆದುಕೊಂಡಿದ್ದು ಆರೋಗ್ಯದ ಬಗ್ಗೆ ಹೆಚ್ಚು ನಿಗಾವಹಿಸುವಂತೆ ಮಾಡಿದೆ. ಆಸ್ಟ್ರೇಲಿಯಾದ ದಿಗ್ಗಜ ಕ್ರಿಕೆಟಿಗ ಶೇನ್ ವಾರ್ನ್, ಆಂಟ್ರೋ ಸೈಮಂಡ್ಸ್, ಡೀನ್ ಜಾನ್ಸ್ ಅವರಂತಾ ಆಟಗಾರರನ್ನು ಕಳೆದ ಒಂದು ವರ್ಷದಲ್ಲಿ ಕಳೆದುಕೊಂಡಿರುದೆ.

ಇನ್ನು ರಿಕಿ ಪಾಂಟಿಂಗ್ ಆಸ್ಟ್ರೇಲಿಯಾ ಪರವಾಗಿ 168 ಟೆಸ್ಟ್ ಪಂದ್ಯಗಳನ್ನು ಆಡಿದ ಅನುಭವ ಹೊಂದಿದ್ದು 77 ಪಂದ್ಯಗಳಲ್ಲಿ ನಾಯಕನಾಗಿ ಮುನ್ನಡೆಸಿದ್ದಾರೆ. ಇನ್ನು 229 ಏಕದಿನ ಪಂದ್ಯಗಳಲ್ಲಿ ಆಸ್ಟ್ರೇಲಿಯಾ ತಂಡದ ನಾಯಕನಾಗಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್‌ನ ಇತಿಹಾಸದಲ್ಲಿ ಪಾಂಟಿಂಗ್ ಅತ್ಯಂತ ಯಶಸ್ವಿ ನಾಯಕ ಎನಿಸಿಕೊಂಡಿದ್ದಾರೆ. ನಾಯಕನಾಗಿ 324 ಪಂದ್ಯಗಳಲ್ಲಿ 220 ಗೆಲುವು ಸಾಧಿಸಿದ್ದು ಅವರ ಗೆಲುವಿನ ಸರಾಸರಿ 67.91 ಆಗಿದೆ.

Story first published: Friday, December 2, 2022, 15:52 [IST]
Other articles published on Dec 2, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X